ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ

ರಮಿಳಾ ಉಮಾಶಂಕರ್ ಅಕಾಲಿಕಾ ನಿಧನದಿಂದ ತೆರವಾಗಿರುವ ಉಪಮೇಯರ್ ಸ್ಥಾನ.

Updated: Dec 5, 2018 , 08:21 AM IST
ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ

ಬೆಂಗಳೂರು: ರಮಿಳಾ ಉಮಾಶಂಕರ್ ಅಕಾಲಿಕಾ ನಿಧನದಿಂದ ತೆರವಾಗಿರುವ ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಜೆಡಿಎಸ್​ನಿಂದ ನಾಗಪುರ ವಾರ್ಡ್ ಸದಸ್ಯ ಭದ್ರೇಗೌಡ ಕಣಕ್ಕಿಳಿದಿದ್ದರೆ, ಬಿಜೆಪಿಯಿಂದ ರಾಮಮೂರ್ತಿ ನಗರ ವಾರ್ಡ್ ನಂಬರ್ 26 ರ ಸದಸ್ಯೆ ಪದ್ಮಾವತಿ ಕಲ್ಕೆರೆ ಶ್ರೀನಿವಾಸ್ ಸ್ಪರ್ಧಿಸಿದ್ದಾರೆ.

ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಾಗಪುರ ವಾರ್ಡ್‍ನ ಜೆಡಿಎಸ್ ಸದಸ್ಯ ಭದ್ರೇಗೌಡರಿಗೆ ಉಪಮೇಯರ್ ಸ್ಥಾನ ಒಲಿಯುವುದು ಬಹುತೇಕ ಖಚಿತ ಎನ್ನಲಾಗಿದೆ. ಬಿಬಿಎಂಪಿ ಉಪಮೇಯರ್ ಚುನಾವಣೆ ಜೊತೆಗೆ 12 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೂ ಚುನಾವಣೆ ನಡೆಯಲಿದೆ.