ಚಿಲುಮೆ ಅವ್ಯವಹಾರ ಪ್ರಕರಣದಲ್ಲಿ ಬಿಬಿಎಂಪಿ ಅಧಿಕಾರಿಗಳು ಶಾಮೀಲಾಗಿಲ್ಲ

ಬಿಬಿಎಂಪಿ ಕೇಂದ್ರ ಕಛೇರಿ, ನೌಕರರ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕರಣದಿಂದ ಬಿ.ಬಿ.ಎಂ.ಪಿ.ಕಂದಾಯ ಇಲಾಖೆ ಅಧಿಕಾರಿಗಳು, ನೌಕರರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಅವರನ್ನು ಸೌಜನ್ಯ ಭೇಟಿ ಮಾಡಿ ಸಮಗ್ರ ಮಾಹಿತಿ ಪಡೆಯಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ, ಜಂಟಿ ಆಯುಕ್ತ (ಕಂದಾಯ) ವೆಂಕಟಾಚಲಪತಿ, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಅಮೃತ್ ರಾಜ್ ರವರು ಭೇಟಿ ಮಾಡಿ ಸಮಸ್ಯೆಗಳನ್ನು ಅಲಿಸಿದರು. 

Written by - Manjunath Hosahalli | Edited by - Krishna N K | Last Updated : Dec 2, 2022, 06:23 PM IST
  • ಚಿಲುಮೆ ಸಂಸ್ಥೆ ಮತದಾರರ ದತ್ತಾಂಶ ಕಳವು ಸಂಬಂಧ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ.
  • ಮತದಾರರ ಪಟ್ಟಿ ಪರಿಷ್ಕರಣೆ ಪ್ರಕರಣದಿಂದ ಬಿ.ಬಿ.ಎಂ.ಪಿ.ಕಂದಾಯ ಇಲಾಖೆ ಅಧಿಕಾರಿಗಳು, ನೌಕರರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ
  • ಆದ್ರೆ ಚಿಲುಮೆ ಅವ್ಯವಹಾರ ಪ್ರಕರಣದಲ್ಲಿ ಬಿಬಿಎಂಪಿ ಅಧಿಕಾರಿಗಳು ಶಾಮೀಲಾಗಿಲ್ಲ
ಚಿಲುಮೆ ಅವ್ಯವಹಾರ ಪ್ರಕರಣದಲ್ಲಿ ಬಿಬಿಎಂಪಿ ಅಧಿಕಾರಿಗಳು ಶಾಮೀಲಾಗಿಲ್ಲ title=

ಬೆಂಗಳೂರು : ಬಿಬಿಎಂಪಿ ಕೇಂದ್ರ ಕಛೇರಿ, ನೌಕರರ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕರಣದಿಂದ ಬಿ.ಬಿ.ಎಂ.ಪಿ.ಕಂದಾಯ ಇಲಾಖೆ ಅಧಿಕಾರಿಗಳು, ನೌಕರರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಅವರನ್ನು ಸೌಜನ್ಯ ಭೇಟಿ ಮಾಡಿ ಸಮಗ್ರ ಮಾಹಿತಿ ಪಡೆಯಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ, ಜಂಟಿ ಆಯುಕ್ತ (ಕಂದಾಯ) ವೆಂಕಟಾಚಲಪತಿ, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಅಮೃತ್ ರಾಜ್ ರವರು ಭೇಟಿ ಮಾಡಿ ಸಮಸ್ಯೆಗಳನ್ನು ಅಲಿಸಿದರು. 

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಿಲುಮೆ ಸಂಸ್ಥೆ ಮತದಾರರ ದತ್ತಾಂಶ ಕಳವು ಸಂಬಂಧ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಆದ್ರೆ ಮತದಾರರ ಪಟ್ಟಿ ಪರಿಷ್ಕರಣೆಯಿಂದ ಕಂದಾಯ ಅಧಿಕಾರಿ ಮತ್ತು ಸಿಬ್ಬಂದಿಗಳು ಇದರಲ್ಲಿ ಶಾಮೀಲಾಗಿಲ್ಲ, ಆಗಿದ್ರೂ ಅವರ ಮೇಲೆ ತನಿಖೆ ನಡೆಯುತ್ತಿದೆ ಇದರಿಂದ ಅತಂಕ ಮತ್ತು ಖಿನ್ನತೆಗೆ ಒಳಗಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿ ಸರಿಯಲ್ಲ : ಮಹಾ ಸರ್ಕಾರಕ್ಕೆ ಸಿಎಂ ಸಂದೇಶ ರವಾನೆ

ಚಿಲುಮೆ ಸಂಸ್ಥೆ ಜನಜಾಗೃತಿ ಕೆಲಸ ಮಾಡಬೇಕಾಗಿತ್ತು ಅ ಸಂಸ್ಥೆಯಿಂದ ಇಂದು ವಂಚನೆಯಾಗಿದೆ. ಶಿಕ್ಷಕರಿಗೆ ಬೂತ್ ಲೇವಲ್ ಆಫೀಸರ್ ಆಗಿ ನೇಮಕ ಮಾಡಲು ಸುಪ್ರಿಂಕೋರ್ಟ್ ಪ್ರಕಾರ ಯಾವುದೇ ಆದೇಶವಿಲ್ಲ. ಜೊತೆಗೆ ಚುನಾವಣಾ ಆಯೋಗದ ಪ್ರಕಾರವೂ ಅವರು ಕೆಲಸವನ್ನ ಮಾಡುವಂತಿಲ್ಲ. ಆದರು 2ಲಕ್ಷ ಅಧಿಕ ಶಿಕ್ಷಕರು ಚುನಾವಣಾ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ 2ಲಕ್ಷ 60ಸಾವಿರ ಹುದ್ದೆ ಖಾಲಿ ಇದೆ. ಸರ್ಕಾರ ಮಾತ್ರ ಹುದ್ದೆ ಭರ್ತಿ ವಿಚಾರದಲ್ಲಿ ಸುಮ್ಮನೆ ಕೂತಿದೆ. ಹೀಗಾಗಿ ಯಾವುದೇ ಚುನಾವಣೆ ಬಂದ್ರೂ ನಮ್ಮ ಸಿಬ್ಬಂದಿಗಳ ಮೇಲೆ‌ ಒತ್ತಡ ಏರಲಾಗ್ತಿದೆ. ಇದರಿಂದ ನಮ್ಮ ಸಿಬ್ಬಂದಿಗಳು ಕುಗ್ಗಿ ಹೋಗಿದ್ದಾರೆ.

ಚಿಲುಮೆ ಪ್ರಕರಣದಲ್ಲಿ ನಮ್ಮ‌ ಸಿಬ್ಬಂದ ಪಾತ್ರವಿಲ್ಲ : ಮತದಾರರ ದತ್ತಾಂಶ ಕಳವು ನಮ್ಮ ಬಿಬಿಎಂಪಿ ಸಿಬ್ಬಂದಿ ಅಥವಾ ಅಧಿಕಾರಿಗಳಿಂದ ನಡೆದಿಲ್ಲ. ನಮ್ಮ‌ ಸಿಬ್ಬಂದಿ ಕೇಂದ್ರ ಚುನಾವಣೆ ಆಯೋಗದ ಸೂಚನೆಯಂತೆ ಕಾರ್ಯ ನಿರ್ವಹಿಸುತ್ತಿದ್ದು, ಇದರಲ್ಲಿ ಸಿಬ್ಬಂದಿಯ ಪಾತ್ರ ಏನು ಇರುವುದಿಲ್ಲ ಎಂದಿದ್ದಾರೆ. ಇನ್ನೂ, ಮತದಾರರ ಪಟ್ಟಿಯೂ ಆನ್ ಲೈನ್ ನಲ್ಲೇ ಲಭ್ಯವಿದೆ. ಇದನ್ನು ಯಾರು ಬೇಕಾದರೂ ನೋಡಬಹುದಾಗಿದೆ. ಹೀಗಿರುವಾಗ, ಯಾವುದೇ ಅಕ್ರಮ ಮಾಡಲು ಹೇಗೆ ಸಾಧ್ಯ ಎಂದು ಷಡಕ್ಷರಿ ಹೇಳಿದರು.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ಆಗ್ರಹಿಸಿ ಡಿ. 3ರಿಂದ ಎಎಪಿಯಿಂದ ಬೃಹತ್‌ ಸಹಿ ಸಂಗ್ರಹ ಅಭಿಯಾನ

ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕರಣದಿಂದ ಪಾಲಿಕೆ, ಕಂದಾಯ ಇಲಾಖೆ ಅಧಿಕಾರಿಗಳು,ನೌಕರರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿರುವುದು ಸಂತಸ ತಂದಿದೆ ಎಂದು ನುಡಿದರು. ಇನ್ನೂ, ಚಿಲುಮೆ ಸಂಸ್ಥೆ ಮೇಲೆ ಕ್ರಮ ಕೈಗೊಳ್ಳಬೇಕು. ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ಮತ್ತು ಸಿಇಒ ನಡೆಸುವ ತನಿಖೆಗೆ ಸಿದ್ದವಿದ್ದು ಅವರಿಗೆ ಮಾನಸಿಕವಾಗಿ ಹಿಂಸೆ ನೀಡಬಾರದು ಮನವಿ ಮಾಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News