ನಿಷೇಧಿತ ಪ್ಲಾಸ್ಟಿಕ್ ಗೋದಾಮಿಗೆ ದಾಳಿ ನಡೆಸಿ ದಂಡ ವಿಧಿಸಿದ ಬಿಬಿಎಂಪಿ

ಜಾಲಹಳ್ಳಿಯ ಪೊಲೀಸ್ ಠಾಣೆಯ ಹಿಂಭಾಗದ ಶ್ರೀಗಣೇಶ ಎಂಟರ್ ಪ್ರೈಸಸ್ ಎಂಬ ಹೆಸರಿನಲ್ಲಿ ಪ್ಲಾಸ್ಟಿಕ್ ಕೋಟೆಡ್ ಪೇಪರ್ ಪ್ಲೇಟ್ ತಯಾರಿಕಾ ಘಟಕಕ್ಕೆ ಭೇಟಿ ನೀಡಲು ಹೋದ ಸಮಯದಲ್ಲಿ ಪಾಲಿಕೆಯ ತಂಡ ಬರುತ್ತಿರುವುದನ್ನು ಮನಗಂಡ ಪ್ಲಾಸ್ಟಿಕ್ ಘಟಕವು ಒಳಗಿನಿಂದ ಬೀಗ ಹಾಕಿಕೊಂಡಿದೆ.

Written by - Bhavishya Shetty | Last Updated : Nov 25, 2022, 12:22 PM IST
    • 220 ಕೆಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶ
    • ಬಳಕೆದಾರರಿಗೆ 5800 ರೂ. ದಂಡ ವಿಧಿಸಿದ ಬಿಬಿಎಂಪಿ
    • ಪ್ಲಾಸ್ಟಿಕ್ ಕವರ್ ಗಳನ್ನು ಬಳಸದಂತೆ ವ್ಯಾಪಾರಿಗಳಿಗೆ ಎಚ್ಚರಿಕೆ
ನಿಷೇಧಿತ ಪ್ಲಾಸ್ಟಿಕ್ ಗೋದಾಮಿಗೆ ದಾಳಿ ನಡೆಸಿ ದಂಡ ವಿಧಿಸಿದ ಬಿಬಿಎಂಪಿ title=
Plastic

ಬೆಂಗಳೂರು: ನಗರದ ಯಶವಂತಪುರ ಮಾರುಕಟ್ಟೆ ಹಾಗೂ ಜಾಲಹಳ್ಳಿ ಜೆ.ಪಿ ಪಾರ್ಕ್ ವಾರ್ಡ್ ವ್ಯಾಪ್ತಿಯಲ್ಲಿ ಪಾಲಿಕೆ ಹಾಗೂ ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 220 ಕೆಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು ಬಳಕೆದಾರರಿಗೆ 5800 ರೂ. ದಂಡ ವಿಧಿಸಲಾಗಿದೆ.

ಇದನ್ನೂ ಓದಿ: “ಯಾರೇ ಆಗಿದ್ರೂ ಒಬ್ಬರಿಗೆ ಒಂದೇ ಟಿಕೆಟ್”: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸ್ಪಷ್ಟನೆ

ಜಾಲಹಳ್ಳಿಯ ಪೊಲೀಸ್ ಠಾಣೆಯ ಹಿಂಭಾಗದ ಶ್ರೀಗಣೇಶ ಎಂಟರ್ ಪ್ರೈಸಸ್ ಎಂಬ ಹೆಸರಿನಲ್ಲಿ ಪ್ಲಾಸ್ಟಿಕ್ ಕೋಟೆಡ್ ಪೇಪರ್ ಪ್ಲೇಟ್ ತಯಾರಿಕಾ ಘಟಕಕ್ಕೆ ಭೇಟಿ ನೀಡಲು ಹೋದ ಸಮಯದಲ್ಲಿ ಪಾಲಿಕೆಯ ತಂಡ ಬರುತ್ತಿರುವುದನ್ನು ಮನಗಂಡ ಪ್ಲಾಸ್ಟಿಕ್ ಘಟಕವು ಒಳಗಿನಿಂದ ಬೀಗ ಹಾಕಿಕೊಂಡಿದೆ. ನಂತರ ಮಾರ್ಷಲ್‌ ತಂಡ ಹೊರಗಿನಿಂದ ಬೀಗ ಹಾಕಲು ಮುಂದಾದಾಗ ಒಳಗಿನಿಂದ ಬೀಗ ತೆಗೆದ ಘಟಕದವರು, ಪಾಲಿಕೆ ಅಧಿಕಾರಿಗಳ ಜೊತೆಗೆ ಕೆಲಕಾಲ ವಾಗ್ವಾದ ನಡೆಸಿದರು. ಬಳಿಕ ಮಾರ್ಷಲ್‌ಗಳು ಸದರಿ ಘಟಕದಲ್ಲಿದ್ದ ಸುಮಾರು 20 ಕೆ.ಜಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು 2000ರೂ ದಂಡ ವಿಧಿಸಿದ್ದಾರೆ. ಇನ್ನು ಈ ರೈಡಿಂಗ್ ನಲ್ಲಿ ವಶಪಡಿಸಿಕೊಂಡ ಎಲ್ಲಾ ಪ್ಲಾಸ್ಟಿಕ್ ಉತ್ಪನ್ನಗಳನ್ನು ದೊಡ್ಡಬಿದಿರಕಲ್ಲು ಸಂಸ್ಕರಣ ಘಟಕಕ್ಕೆ ಕಳಿಸಲಾಯಿತು.

ಕೆ.ಆರ್.ಮಾರುಕಟ್ಟೆಯಲ್ಲಿ ಪರಿಶೀಲನೆ:

ಕೆ.ಆರ್.ಮಾರುಕಟ್ಟೆಯ ಸುತ್ತಮುತ್ತಲಿನ ಪ್ರದೇಶ, ಹೂವಿನ ಮಾರುಕಟ್ಟೆಯಲ್ಲಿ ಹಾಗೂ ಬೀದಿಬದಿ ವ್ಯಾಪಾರಿಗಳ ಬಳಿ ತಪಾಸಣೆ ನಡೆಸಿದ ವೇಳೆ ಸುಮಾರು 25 ಕೆ.ಜಿ ಪ್ಲಾಸ್ಟಿಕ್ ಕವರ್ ಗಳನ್ನು ವಶಪಡಿಸಿಕೊಂಡು ಮತ್ತೊಮ್ಮೆ ಪ್ಲಾಸ್ಟಿಕ್ ಕವರ್ ಗಳನ್ನು ಬಳಸದಂತೆ ಮಾರ್ಷಲ್‌ಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿ ತಲಾ 200 ರೂ. ದಂಡ ವಿಧಿಸಿದರು.

ಪ್ಲಾಸ್ಟಿಕ್ ಬಳಸದಂತೆ ಜಾಗೃತಿ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಗರದಾದ್ಯಂತ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಮಾರಾಟ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಜೊತೆಗೆ ದಂಡ ವಿಧಿಸಲಾಗುತ್ತಿದೆ.

ಇದನ್ನೂ ಓದಿ:  ಜರ್ಮನ್ ಅಧಿಕಾರಿಗಳಿಗೆ ಕ್ರಿಕೆಟ್ ಹೇಳಿಕೊಟ್ಟ ಭಾರತೀಯ: ವಿಡಿಯೋ ನೋಡಿ

ನಗರದಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಘನತ್ಯಾಜ್ಯ ವಿಭಾಗದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಂತೆ ಪಾಲಿಕೆಯ ಘನತ್ಯಾಜ್ಯ ವಿಭಾಗದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಕಿರಿಯ ಆರೋಗ್ಯ ಪರಿವೀಕ್ಷಕರು, ಮಾರ್ಷಲ್‌ಗಳ ಮೇಲ್ವಿಚಾರಕರು ಹಾಗೂ ಮಾರ್ಷಲ್‌ಗಳ ತಂಡವು ಅನಿರೀಕ್ಷಿತವಾಗಿ ಸಗಟು ವ್ಯಾಪಾರ ಮಳಿಗೆಗಳು, ಅಂಗಡಿಗಳು, ಹೋಟೆಲ್ ಉದ್ದಿಮೆ, ಪ್ಲಾಸ್ಟಿಕ್ ಉತ್ಪಾದಿಸುವ ಉದ್ದಿಮೆಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್ ಜಪ್ತಿ ಮಾಡುವುದರ ಜೊತೆಗೆ ದಂಡ ವಿಧಿಸುತ್ತಿವೆ. ಮತ್ತೊಮ್ಮೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ವ್ಯಾಪಾರಸ್ಥರು/ಮಾರಾಟಗಾರರು ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆದಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News