ಬೆಂಗಳೂರು: ಶಾಲಾ-ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ ಆದೇಶದ ವಿರುದ್ಧ ಕಿಡಿಕಾರಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ‘ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ’ ಎಂದು ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯನವರ ಈ ಹೇಳಿಕೆಗೆ ಇದೀಗ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಶನಿವಾರ ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿ.ಸಿ.ನಾಗೇಶ್, ‘ಸಿದ್ದರಾಮಯ್ಯನವರೇ ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ?’ ಎಂದು ಪ್ರಶ್ನಿಸಿದ್ದಾರೆ.


"ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು"?


‘ಶಿಕ್ಷಣ ಕ್ಷೇತ್ರದ ಸುಧಾರಣೆ, ಬದಲಾವಣೆ, ಏಳಿಗೆ ಮತ್ತು ಅಭಿವೃದ್ಧಿಯೇ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ಸರ್ಕಾರ ಕೋವಿಡ್-19 ಸಂದರ್ಭದಲ್ಲಿ ಇಡೀ ದೇಶದಲ್ಲೇ ಮೊದಲು‌ ನಮ್ಮ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಭೌತಿಕ ತರಗತಿಗಳನ್ನು ಆರಂಭಿಸಿತು. ಕೋವಿಡ್-19 ಕಾರಣ 2 ವರ್ಷಗಳ ಕಾಲ ಭೌತಿಕ ತರಗತಿಗಳಿಲ್ಲದೆ ಮಕ್ಕಳ ಕಲಿಕೆಯಲ್ಲಿ ಉಂಟಾದ ಹಿನ್ನಡೆ ಸರಿದೂಗಿಸಲು ದೇಶದಲ್ಲೇ ಮೊದಲು 'ಕಲಿಕಾ ಚೇತರಿಕೆ' ಕಾರ್ಯಕ್ರಮವನ್ನು ಇಡೀ ದೇಶಕ್ಕೆ ಮಾದರಿಯಾಗಿ ಅನುಷ್ಠಾನಗೊಳಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ದಾಖಲೆಯ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.


ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಫೋಟೋ ಇರುವ ನೋಟು ಬಿಡುಗಡೆ ಮಾಡಿದ ಕಾಂಗ್ರೆಸ್!


ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.