'ಬಿ.ಸಿ.ನಾಗೇಶ್ ಅವರೇ ನಾನು ನಿಮ್ಮ ಹಾಗೆ ವಾಟ್ಸಪ್ ಯುನಿವರ್ಸಿಟಿಯ ವಿದ್ಯಾರ್ಥಿ ಅಲ್ಲ'

  ಸಚಿವ ಬಿ.ಸಿ.ನಾಗೇಶ್ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ವಿಧಾನ ಪರಿಷತ್ ವಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ 'ಇತಿಹಾಸದ ಬಗ್ಗೆ ನಂಬಿಕೆಯೂ ಇಲ್ಲದ, ಕನಿಷ್ಠ ಅದರ ತಿಳುವಳಿಕೆಯೂ ಇಲ್ಲದ ಶಿಕ್ಷಣ ಸಚಿವ ನಾಗೇಶ್ ಅವರು ಇತಿಹಾಸದ ಪಾಠ ಹೇಳಲು ಬರುತ್ತಿದ್ದಾರೆ.ಬಿ ಸಿ ನಾಗೇಶ್ ಅವರೇ ನಾನು ನಿಮ್ಮ ಹಾವಿನಪುರದಲ್ಲಿ ತರಬೇತಿ ಪಡೆದವನೂ ಅಲ್ಲ, ವಾಟ್ಸಪ್ ಫಾರ್ವರ್ಡ್‌ ಯುನಿವರ್ಸಿಟಿಯ ವಿದ್ಯಾರ್ಥಿಯೂ ಅಲ್ಲ' ಎಂದು ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

Written by - Zee Kannada News Desk | Last Updated : May 23, 2022, 07:33 PM IST
  • ರಾಷ್ಟ್ರೀಯತೆ, ಸ್ವಾತಂತ್ರ್ಯ ಹೋರಾಟ, ರಾಷ್ಟ್ರಪ್ರೇಮ, ರಾಷ್ಟ್ರ ಧ್ವಜದ ಚಿಂತನೆಯ ಬಗ್ಗೆ ಸಂಪೂರ್ಣ ವಿರುದ್ಧವಾಗಿದ್ದವರಿಂದ ಪಾಠ ಹೇಳಿಸಿಕೊಳ್ಳುವ ದಾರಿದ್ರ್ಯ ನನಗೆ ಬಂದಿಲ್ಲ, ಬರುವುದು ಇಲ್ಲ.
  • ಕೇಸರಿ ಬಿಳಿ ಹಸಿರು ಬಣ್ಣಗಳ ನಡುವೆ ಅಶೋಕ ಚಕ್ರವಿರುವ ರಾಷ್ಟ್ರಧ್ವಜ ಬಗ್ಗೆ ನಿಮ್ಮ ಸಂಘದ ಸಂಸ್ಥಾಪಕ ಹೆಡ್ಗೇವಾರ್ ತಿರಸ್ಕಾರ ಮನೋಭಾವನೆಯ ಜೊತೆಗೆ ಕನಿಷ್ಟ ಗೌರವವೂ ಇರಲಿಲ್ಲ ಎಂಬುದನ್ನ ಸಾಬೀತು ಮಾಡಲು ನಾನು ಸಿದ್ದ ಎಂದು ಹೇಳಿದರು.
'ಬಿ.ಸಿ.ನಾಗೇಶ್ ಅವರೇ ನಾನು ನಿಮ್ಮ ಹಾಗೆ ವಾಟ್ಸಪ್ ಯುನಿವರ್ಸಿಟಿಯ ವಿದ್ಯಾರ್ಥಿ ಅಲ್ಲ' title=

ಬೆಂಗಳೂರು:  ಸಚಿವ ಬಿ.ಸಿ.ನಾಗೇಶ್ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ವಿಧಾನ ಪರಿಷತ್ ವಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ 'ಇತಿಹಾಸದ ಬಗ್ಗೆ ನಂಬಿಕೆಯೂ ಇಲ್ಲದ, ಕನಿಷ್ಠ ಅದರ ತಿಳುವಳಿಕೆಯೂ ಇಲ್ಲದ ಶಿಕ್ಷಣ ಸಚಿವ ನಾಗೇಶ್ ಅವರು ಇತಿಹಾಸದ ಪಾಠ ಹೇಳಲು ಬರುತ್ತಿದ್ದಾರೆ.ಬಿ ಸಿ ನಾಗೇಶ್ ಅವರೇ ನಾನು ನಿಮ್ಮ ಹಾವಿನಪುರದಲ್ಲಿ ತರಬೇತಿ ಪಡೆದವನೂ ಅಲ್ಲ, ವಾಟ್ಸಪ್ ಫಾರ್ವರ್ಡ್‌ ಯುನಿವರ್ಸಿಟಿಯ ವಿದ್ಯಾರ್ಥಿಯೂ ಅಲ್ಲ' ಎಂದು ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ರಾಷ್ಟ್ರೀಯತೆ, ಸ್ವಾತಂತ್ರ್ಯ ಹೋರಾಟ, ರಾಷ್ಟ್ರಪ್ರೇಮ, ರಾಷ್ಟ್ರ ಧ್ವಜದ ಚಿಂತನೆಯ ಬಗ್ಗೆ ಸಂಪೂರ್ಣ ವಿರುದ್ಧವಾಗಿದ್ದವರಿಂದ ಪಾಠ ಹೇಳಿಸಿಕೊಳ್ಳುವ ದಾರಿದ್ರ್ಯ ನನಗೆ ಬಂದಿಲ್ಲ, ಬರುವುದು ಇಲ್ಲ. ಕೇಸರಿ ಬಿಳಿ ಹಸಿರು ಬಣ್ಣಗಳ ನಡುವೆ ಅಶೋಕ ಚಕ್ರವಿರುವ ರಾಷ್ಟ್ರಧ್ವಜ ಬಗ್ಗೆ ನಿಮ್ಮ ಸಂಘದ ಸಂಸ್ಥಾಪಕ ಹೆಡ್ಗೇವಾರ್ ತಿರಸ್ಕಾರ ಮನೋಭಾವನೆಯ ಜೊತೆಗೆ ಕನಿಷ್ಟ ಗೌರವವೂ ಇರಲಿಲ್ಲ ಎಂಬುದನ್ನ ಸಾಬೀತು ಮಾಡಲು ನಾನು ಸಿದ್ದ ಎಂದು ಹೇಳಿದರು.

ಇದನ್ನು ಓದಿ: ನಿತ್ಯ ಮುಂಜಾನೆ ಕರಿಬೇವಿನ ಎಲೆ ತಿನ್ನುವುದರಿಂದ ಈ ರೋಗಗಳು ನಿಮ್ಮ ಹತ್ತಿರವೂ ಸುಳಿಯಲ್ಲ

1930ರಲ್ಲಿಯೇ ತ್ರಿವರ್ಣ ಧ್ವಜವನ್ನ ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯಾಗಿ ಎಲ್ಲಾ ವರ್ಗದ, ಧರ್ಮದವರನ್ನ ಪ್ರತಿನಿಧಿಸುವಂತೆ ರಚಿಸಿ,ಇಡೀ ದೇಶವೇ ತ್ರಿವರ್ಣ ಧ್ವಜವನ್ನ ಒಪ್ಪಿ ಅಪ್ಪಿಕೊಂಡಾಗಿತ್ತು. ಆದರೆ 1928ರಿಂದಲೇ ಭಾಗಧ್ವಜವನ್ನ ಆರ್ ಎಸ್ ಎಸ್ ನ ಅಧಿಕೃತ ನಿಶಾನೆ ಎಂದು ಹೆಡ್ಗೇವಾರ್ ಘೋಷಿಸಿದ್ದರಿಂದ, ತ್ರಿವರ್ಣ ಧ್ವಜವನ್ನ ಸಂಘ ಪರಿವಾರ ಒಪ್ಪಲೇ ಇಲ್ಲ. ಹೆಚ್ಚಿನ ಮಾಹಿತಿ ಬೇಕಿದ್ದರೆ ಹೆಡ್ಗೇವಾರರ ಸಹಚರನಾಗಿದ್ದ ಎನ್ ಹೆಚ್ ಪಾಲ್ಕರ್ ಬರೆದ "Saffron flag" ಪುಸ್ತಕದಲ್ಲಿ ದಾಖಲಾಗಿದೆ. ಅಷ್ಟೇ ಯಾಕೆ ಸ್ವಾಮಿ, ಸಂಗದ ಸ್ಥಾಪನೆ ಮುಖಂಡ ಗೋಳ್ವಾಲ್ಕರ್ ಬರೆದ "ಬಂಚ್ ಆಫ್ ಥಾಟ್ಸ್" ಪುಸ್ತಕದಲ್ಲಿ ರಾಷ್ಟ್ರಧ್ವಜವನ್ನ ತಿರಸ್ಕಾರ ಮಾಡಿದ್ದಾರೆ ಕಣ್ಣಿನ ಪೊರೆ ಕಳಚಿಟ್ಟು ಓದಿ ಎಂದು ಸಲಹೆ ನೀಡಿದರು.

1930 ಜನವರಿ 26ರಂದು ಸ್ವಾತಂತ್ರ್ಯ ಹೋರಾಟಗಾರರು ತ್ರಿವರ್ಣ ಧ್ವಜವನ್ನ ದೇಶದೆಲ್ಲೆಡೆ ಹಾರಿಸಲು ತೀರ್ಮಾನಿಸಿದಾಗ ಈ ಹೆಡ್ಗೆವಾರ್  "ನಮ್ಮ ಎಲ್ಲಾ ಶಾಖೆಯ ಕಚೇರಿಗಳಲ್ಲಿ ಭಾಗವಧ್ವಜ ಹಾರಿಸಬೇಕು" ಎಂದು ಕರೆ ಕೊಟ್ಟಿದ್ದನ್ನ ಈ ದೇಶ ಮರೆತಿಲ್ಲ. ಆಗ ಹೆಡ್ಗೇವಾರ್ ಬದುಕಿದ್ದರು..! 

ಬಿಜೆಪಿಯ ಪಿತಾಮಹ ಶ್ಯಾಂ ಪ್ರಸಾದ್ ಮುಖರ್ಜಿಯವರು ಸ್ವಾತಂತ್ರ್ಯ ಭಾರತದ ನಂತರ ಪಂಡಿತ್ ಜವಹರಲಾಲ್ ನೆಹರೂ ಸರ್ಕಾರದಲ್ಲಿ ಮಂತ್ರಿಯಾಗಿದ್ದರೂ ಕೂಡ ಅವರ ಅಧಿಕೃತ ನಿವಾಸದ ಮೇಲೆ ಹಾರಿಸುತ್ತಿದ್ದಿದ್ದು ಭಗವದ್ವಜ ಹೊರತು ರಾಷ್ಟ್ರಧ್ವಜ ಅಲ್ಲ.  ಅಷ್ಟಕ್ಕೂ ಆರ್ ಎಸ್ ಎಸ್ ನ ಮುಖವಾಣಿ ಆರ್ಗನೈಸರ್ ಅಲ್ಲಿ ತ್ರಿವರ್ಣ ಇರುವ ಭಾರತದ ಧ್ವಜ ಅಪಶಕುನ ಎಂದು ಬರೆದಿರುವುದು ದಾಖಲೆಯಾಗಿದೆ. ಸ್ವಾತಂತ್ರ್ಯ ಬಂದು 2002ರವರೆಗೆ ರಾಷ್ಟ್ರ ಧ್ವಜವನ್ನ ಶಾಖೆಯ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಾರಿಸಲೇ ಇಲ್ಲ ಯಾಕೆ ಎಂಬುದನ್ನ ಮೊದಲು ಸ್ಪಷ್ಟಪಡಿಸಿ. 

ಇದನ್ನೂ ಓದಿ: ಕೆಟ್ಟ ಮೇಲೆ ಬುದ್ದಿ ಬಂತು: ಡೆಡ್ಲಿ ಟ್ರಾನ್ಸ್‌ಫಾರ್ಮರ್‌ಗಳನ್ನು ರಿಪೇರಿ ಮಾಡಿಸಿದ ಬೆಸ್ಕಾಂ

ಆರ್ ಎಸ್ ಎಸ್ ಹಾಗೂ ಬಿಜೆಪಿ ತಮ್ಮ ಹುಟ್ಟಿನಿಂದಲೇ ಸ್ವಾತಂತ್ರ್ಯ ಹೋರಾಟದ ಜೊತೆ ಜೊತೆಗೆ  ರಾಷ್ಟ್ರೀಯತೆ, ರಾಷ್ಟ್ರಧ್ವಜದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ ಎಂಬ ನನ್ನ ಹೇಳಿಕೆಗೆ ಈಗಲೂ ನಾನು ಬದ್ಧ. ಚರ್ಚೆಗೂ ಸಿದ್ದ ಎಂದು ಅವರು  ಬಿ.ಕೆ ಹರಿಪ್ರಸಾದ್ ಅವರು ಬಿಸಿ ನಾಗೇಶ್ ಅವರಿಗೆ ತಿರುಗೇಟು ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

 

Trending News