ಕ್ರಿಕೆಟ್ ಟೂ ಅಗ್ರಿಕಲ್ಚರ್: ಚಾಮರಾಜನಗರದಲ್ಲಿ ಟ್ರಾಕ್ಟರ್ ಖರೀದಿಸಿದ ಬಿಸಿಸಿಐ ಅಧ್ಯಕ್ಷ
BCCI president: ಚಾಮರಾಜನಗರದ ಮಹೀಂದ್ರಾ ಟ್ರಾಕ್ಟರ್ ಶೋ ರೂಂನಲ್ಲಿ ಇಂದು ಬಿಸಿಸಿಐನ ಅಧ್ಯಕ್ಷ ರೋಜರ್ ಬಿನ್ನಿ ಟ್ರಾಕ್ಟರ್ ಖರೀದಿ ಮಾಡಿದ್ದಾರೆ.
ಚಾಮರಾಜನಗರ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆಗಳಲ್ಲಿ ಒಂದಾದ ಬಿಸಿಸಿಐನ ಅಧ್ಯಕ್ಷ ರೋಜರ್ ಬಿನ್ನಿ ಕೃಷಿಯತ್ತ ಒಲವು ತೋರಿದ್ದು ಚಾಮರಾಜನಗರದಲ್ಲಿ ಟ್ರಾಕ್ಟರ್ ಒಂದನ್ನು ಇಂದು ಖರೀದಿ ಮಾಡಿದ್ದಾರೆ.
ಒಂದು ಕಾಲದ ಕ್ರಿಕೆಟ್ ಆಲ್ ರೌಂಡರ್ ಆಗಿದ್ದ ರೋಜರ್ ಬಿನ್ನಿ ಕೃಷಿ ಮೂಲಕ ಎರಡನೇ ಇನ್ನಿಂಗ್ಸ್ ಆರಂಭ ಮಾಡಿದ್ದು ಗುಂಡ್ಲುಪೇಟೆ ಬಳಿ 45 ಎಕರೆ ಜಮೀನು ಖರೀದಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಶೋ ರೂಂ ನಲ್ಲಿ ಟ್ರಾಕ್ಟರ್ ಖರೀದಿಸಿ ಎಂದು ಬೆಂಗಳೂರಲ್ಲಿ ತಿಳಿಸಿದ್ದರಿಂದ ಚಾಮರಾಜನಗರದ ಮಹೀಂದ್ರಾ ಟ್ರಾಕ್ಟರ್ ಶೋ ರೂಂನಲ್ಲಿ ಇಂದು ಬಿಸಿಸಿಐನ ಅಧ್ಯಕ್ಷ ರೋಜರ್ ಬಿನ್ನಿ ಟ್ರಾಕ್ಟರ್ ಖರೀದಿ ಮಾಡಿದ್ದಾರೆ.
ನಮ್ಮ ಪೂರ್ವಿಕರು ಕೃಷಿಕರಲ್ಲ, ಆದರೆ ನಾನು ಕೃಷಿಯತ್ತ ಆಸಕ್ತಿ ಬೆಳೆಸಿಕೊಂಡಿದ್ದು ನಾನು ಗುಂಡ್ಲುಪೇಟೆಯ ಸಮೀಪದಲ್ಲಿ ಜಮೀನು ಖರೀದಿಸಿದ್ದು ಕೃಷಿ ಚಟುವಟಿಕೆಗಾಗಿ ಚಾಮರಾಜನಗರದಲ್ಲಿ ಟ್ರಾಕ್ಟರ್ ಖರೀದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕೇಂದ್ರದ ದ್ವೇಷ ರಾಜಕಾರಣ, ಬಡವರ ವಿರೋಧಿ ನೀತಿ ವಿರುದ್ಧ ಜೂ. 20 ಪ್ರತಿಭಟನೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.