Bengaluru Karaga: 4 ಕೋಟಿ ರೂ. ವೆಚ್ಚದಲ್ಲಿ ಬಿಡಿಎ ಹಸಿಕರಗ ಮಂಟಪ ನಿರ್ಮಾಣ- ಎಸ್ ಆರ್ ವಿಶ್ವನಾಥ್

ಈ ವಿಶ್ವವಿಖ್ಯಾತ ಬೆಂಗಳೂರು ಕರಗದ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (CM Basavaraj Bommai) ಹೆಚ್ಚಿನ ಆಸಕ್ತಿ ತೋರಿ 4 ಕೋಟಿ ರೂಪಾಯಿಗಳನ್ನು ಮಂಜೂರು ಮಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಸುಂದರವಾಗಿ ಮಂಟಪ ನಿರ್ಮಾಣ ಸೇರಿದಂತೆ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಒಂದು ವೇಳೆ ಈ ಅಭಿವೃದ್ಧಿ ಕಾಮಗಾರಿಗೆ ಹೆಚ್ಚುವರಿ ಹಣ ಬೇಕಾದರೆ ಅದನ್ನೂ ಒದಗಿಸಿಕೊಡಲು ಬಿಡಿಎ ಬದ್ಧವಾಗಿದೆ ಎಂದಿದ್ದಾರೆ.  

Written by - Sowmyashree Marnad | Edited by - Yashaswini V | Last Updated : Mar 26, 2022, 11:27 AM IST
  • ಬೆಂಗಳೂರು ಕರಗ ಇಡೀ ವಿಶ್ವದಲ್ಲಿ ಹೆಸರುವಾಸಿಯಾಗಿರುವ ಉತ್ಸವವಾಗಿದೆ
  • ಯಲಹಂಕದಲ್ಲಿ ನಡೆಯುವ ಕರಗ ಉತ್ಸವಕ್ಕೆ ಸೂಕ್ತ ರೀತಿಯಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ.
  • ಇದನ್ನು ನೋಡಿದ ಬೆಂಗಳೂರು ಕರಗ ಸಮಿತಿಯವರು ಕಂಠೀರವ ಕ್ರೀಡಾಂಗಣದ ಆವರಣದಲ್ಲಿಯೂ ಇಂತಹ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ ಮಾಡಿದ್ದರು
Bengaluru Karaga: 4 ಕೋಟಿ ರೂ. ವೆಚ್ಚದಲ್ಲಿ ಬಿಡಿಎ ಹಸಿಕರಗ ಮಂಟಪ ನಿರ್ಮಾಣ- ಎಸ್ ಆರ್ ವಿಶ್ವನಾಥ್  title=
Bengaluru Karaga

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ವಿಶ್ವವಿಖ್ಯಾತ ಕರಗ  (Bengaluru Karaga) ಮಹೋತ್ಸವದ ಪೂಜಾ ಸ್ಥಳವಾದ ಕಂಠೀರವ ಕ್ರೀಡಾಂಗಣದ ಆವರಣದಲ್ಲಿರುವ ಹಸಿ ಕರಗ ಮಂಟಪವನ್ನು 4 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ. ಇದಕ್ಕಾಗಿ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ (BDA President SR Vishwanath) ಮತ್ತು ಆಯುಕ್ತ ರಾಜೇಶ್ ಗೌಡ ಅವರಿಗೆ ವಹ್ನಿಕುಲ ಕ್ಷತ್ರಿಯ ಸಮಾಜದ ಮುಖಂಡರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಆರ್.ವಿಶ್ವನಾಥ್, ಬೆಂಗಳೂರು ಕರಗ (Bengaluru Karaga) ಇಡೀ ವಿಶ್ವದಲ್ಲಿ ಹೆಸರುವಾಸಿಯಾಗಿರುವ ಉತ್ಸವವಾಗಿದೆ. ಯಲಹಂಕದಲ್ಲಿ ನಡೆಯುವ ಕರಗ ಉತ್ಸವಕ್ಕೆ ಸೂಕ್ತ ರೀತಿಯಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಇದನ್ನು ನೋಡಿದ ಬೆಂಗಳೂರು ಕರಗ ಸಮಿತಿಯವರು  ಕಂಠೀರವ ಕ್ರೀಡಾಂಗಣದ ಆವರಣದಲ್ಲಿಯೂ ಇಂತಹ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ ಮಾಡಿದ್ದರು ಎಂದರು.

ಇಲ್ಲಿರುವ ಕಲ್ಯಾಣಿ ಮತ್ತು ಹಸಿ ಕರಗ ಮಂಟಪ (Hasi Karaga Mantapa) ಶಿಥಿಲಗೊಂಡು ವೀರಗಾರರು ಪೂಜಾ ವಿಧಿವಿಧಾನಗಳನ್ನು ನಡೆಸುವುದು ಕಷ್ಟಕರವಾಗಿತ್ತು. ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಬಿಡಿಎ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಿ ಬಿಡಿಎ ವತಿಯಿಂದಲೇ ಮಂಟಪ ಮತ್ತು ಕಲ್ಯಾಣಿಯನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದರು.

ಇದನ್ನೂ ಓದಿ- Watch: ತಮ್ಮೂರಿನ ಜಾತ್ರೆಯಲ್ಲಿ ಸಿದ್ದರಾಮಯ್ಯ ಭರ್ಜರಿ ಸ್ಟೆಪ್ಸ್..!

ಈ ವಿಶ್ವವಿಖ್ಯಾತ ಬೆಂಗಳೂರು ಕರಗದ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (CM Basavaraj Bommai) ಹೆಚ್ಚಿನ ಆಸಕ್ತಿ ತೋರಿ 4 ಕೋಟಿ ರೂಪಾಯಿಗಳನ್ನು ಮಂಜೂರು ಮಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಸುಂದರವಾಗಿ ಮಂಟಪ ನಿರ್ಮಾಣ ಸೇರಿದಂತೆ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಒಂದು ವೇಳೆ ಈ ಅಭಿವೃದ್ಧಿ ಕಾಮಗಾರಿಗೆ ಹೆಚ್ಚುವರಿ ಹಣ ಬೇಕಾದರೆ ಅದನ್ನೂ ಒದಗಿಸಿಕೊಡಲು ಬಿಡಿಎ ಬದ್ಧವಾಗಿದೆ ಎಂದಿದ್ದಾರೆ.

ಏಪ್ರಿಲ್ ತಿಂಗಳಲ್ಲಿ ಈ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಮುಂದಿನ ವರ್ಷದ ಏಪ್ರಿಲ್ ತಿಂಗಳಲ್ಲಿ ನಡೆಯುವ ಕರಗದ ವೇಳೆಗೆ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದರು. 

ಇದನ್ನೂ ಓದಿ- ಯಲ್ಲಮ್ಮನ ಹುಂಡಿಯಲ್ಲಿ ದಾಖಲೆ ಮೊತ್ತ ಸಂಗ್ರಹ; ವಿಚಿತ್ರ ಹರಕೆ ಚೀಟಿಗಳು ಕೂಡಾ ಪತ್ತೆ

ಹಸಿ ಕರಗ ಮಂಟಪ ಅಭಿವೃದ್ಧಿ, ಕಲ್ಯಾಣಿ ಜೀರ್ಣೋದ್ಧಾರ, ಬೃಂದಾವನ, ಧ್ಯಾನ ಮಂದಿರ, ಭಕ್ತರು ಕುಳಿತುಕೊಳ್ಳಲು ವ್ಯವಸ್ಥೆ, ದೀಪಾಲಂಕಾರ ವ್ಯವಸ್ಥೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News