ಮೈಸೂರು: ಸಾಂಸ್ಕೃತಿಕ ಮೈಸೂರಿನಲ್ಲಿ ಈಗ ಒಟ್ಟು 269 ಸಕ್ರಿಯ ಕೋವಿಡ್-19 (Covid 19) ಪ್ರಕರಣಗಳಿದ್ದು ಈ ಸಂಖ್ಯೆ ಜಾಸ್ತಿಯಾಗದಂತೆ ಎಲ್ಲರೂ ಎಚ್ಚರ ವಹಿಸೋಣ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ (ST Somashekhar) ಜನತೆಗೆ ಕರೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇಂದು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಜಿಲ್ಲಾ ಪಂಚಾಯಿತಿಯಲ್ಲಿ ಕೋವಿಡ್‌ನ ಎರಡನೇ ಅಲೆಯ ನಿಯಂತ್ರಣ ಹಾಗೂ ಪರಿಸ್ಥಿತಿಯ ಅವಲೋಕನ ಕುರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ (ST Somashekhar) ಪರಿಶೀಲಿಸಿದರು.


ಸಭೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ಕೋವಿಡ್ -19 (Covid 19) ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಂಡಿದೆ. ಪೊಲೀಸ್ ಆಯುಕ್ತರು, ಪೊಲೀಸ್ ಅಧೀಕ್ಷರು, ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯಿತಿ ಸಿ.ಇ.ಒ. ಮುಂತಾದ ಅಧಿಕಾರಿಗಳು ಇನ್ನೂ ಸ್ವಲ್ಪ ದಿನ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು ಎಂದರು.


ಇದನ್ನೂ ಓದಿ - Corona Vaccine:'ರಾಜ್ಯದಲ್ಲಿ ಮನೆ ಬಾಗಿಲಿಗೆ ಬರಲಿದೆ ಕೊರೋನಾ ಲಸಿಕೆ'


ಮೈಸೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಬೆಂಗಳೂರು ಜಲ ಮಂಡಳಿ ಮಾದರಿಯಲ್ಲಿ ಪ್ರತ್ಯೇಕ ಮಂಡಳಿ ಅಥವಾ ಬೇರೆ ರೀತಿಯ ಕೇಂದ್ರೀಕೃತ ನಿಯಂತ್ರಣ ವ್ಯವಸ್ಥೆ ಬಗ್ಗೆ ಬರುವ ಪ್ರಸ್ತಾವನೆಯನ್ನು ಸರ್ಕಾರದ ಹಂತದಲ್ಲಿ ಚರ್ಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.


ಕರೊನಾವೈರಸ್ ಆರಂಭವಾದ ನಂತರದಲ್ಲಿ ಕಳೆದ ವರ್ಷ ಜುಲೈನಲ್ಲಿ ಇದ್ದ ಪರಿಸ್ಥಿತಿ ಈಗ ಜಿಲ್ಲೆಯಲ್ಲಿ ಇದ್ದು ಎರಡನೇ ಅಲೆಯ ಆತಂಕ ಇದೆ. ಇದರ ನಿಯಂತ್ರಣಕ್ಕಾಗಿ ಪರೀಕ್ಷೆ, ಸಂಪರ್ಕ ಪತ್ತೆ ಹಾಗೂ ಲಸಿಕೆ ನೀಡುವುದನ್ನು ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಅವರು ಮಾಹಿತಿ ನೀಡಿದರು.


ಜಿಲ್ಲೆಯಲ್ಲಿ  3.5 ಲಕ್ಷ ಹಿರಿಯ ನಾಗರಿಕರನ್ನು ಗುರುತಿಸಲಾಗಿದೆ. ಈ ವರೆಗೆ ಶೇ. 10 ರಷ್ಟು ಹಿರಿಯ ನಾಗರಿಕರು ಲಸಿಕೆ ಪಡೆದುಕೊಂಡಿದ್ದಾರೆ ಎಂದವರು ಸಭೆಯಲ್ಲಿ ಮಾಹಿತಿ ಒದಗಿಸಿದರು.


ಇದನ್ನೂ ಓದಿ - Covid 2nd wave ನಿಯಂತ್ರಿಸಲು ಪೂರ್ವಸಿದ್ಧತೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್


ಮಾರ್ಚ್ ಅಂತ್ಯದ ವೇಳೆಗೆ ಶೇ.100 ರಷ್ಟು ಸಾಧನೆ ಮಾಡಬೇಕೆಂದು ಮುಖ್ಯ ಕಾರ್ಯದರ್ಶಿಯವರು ಹೇಳಿದ್ದಾರೆ‌. ಈ ಗುರಿ ಸಾಧಿಸಲು, ಪಿ.ಡಿ.ಒ. ಬಿಲ್ ಕಲೆಕ್ಟರ್, ವಾಟರ್‌ಮ್ಯಾನ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ ಸುಮಾರು 10 ಜನರನ್ನು ಕರೆತಂದು ಲಸಿಕೆ ಹಾಕಿಸುವ ಗುರಿ ನೀಡಲಾಗಿದೆ ಎಂದರು.


ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಕೋವಿಡ್ ಈಗ ಹೆಚ್ಚಾಗಿದೆ. ಅಂತಹ ಜಿಲ್ಲೆಗಳ ಪಟ್ಟಿಯಲ್ಲಿ ಮೈಸೂರು ಇಲ್ಲ. ಆದರೆ ಎಚ್ಚರಿಕೆ ವಹಿಸಬೇಕಾದ 5 ಜಿಲ್ಲೆಗಳ ಪೈಕಿ ಮೈಸೂರನ್ನು ಹೆಸರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.