ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದು, ಕರಡಿಯನ್ನು ಸೆರೆ ಹಿಡಿಯುವ ಕಾರ್ಯದಲ್ಲಿ ತೊಡಗಿದ್ದಾರೆ.

ವಿಜಯನಗರ : ಕರಡಿ ಮರವೇರಿ ಕುಳಿತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಕೂಡ್ಲಿಗಿ ತಾಲ್ಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಬೆಳಿಗ್ಗೆ ಕರಡಿಯೊಂದ ಮರವೇರಿ ಕುಳಿತಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
ಬೆಳಗಿನ ಜಾವ ಗ್ರಾಮದತ್ತ ಕರಡಿ ಬಂದಿದ್ದು, ಬೆಳಕು ಹರಿಯುತ್ತಿದ್ದಂತೆ ಮಾರಮ್ಮಕಟ್ಟೆಯ ಬಳಿ ಮೀನಕರೆ ಮಾರಪ್ಪ ಎನ್ನುವವರ ಕಣದಲ್ಲಿ ಮರವೇರಿ ಕುಳಿತಿದೆ.
ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದು, ಕರಡಿಯನ್ನು ಸೆರೆ ಹಿಡಿಯುವ ಕಾರ್ಯದಲ್ಲಿ ತೊಡಗಿದ್ದಾರೆ.
ಜನರಿಗೆ ತೊಂದರೆಯಾಗದಂತೆ ಕರಡಿಯನ್ನು ಸೆರೆ ಹಿಡಿದು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಅದನ್ನು ಸ್ಥಳಾಂತರ ಮಾಡಲಾಗುವುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.