ಮಡಿಕೇರಿ: ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ಪ್ರಸಕ್ತ (2023-24) ಸಾಲಿನ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಾಕ್ರಮವನ್ನ ಆಯೋಜಿಸಲಾಗಿದೆ. ಈ ತರಬೇತಿಯು ನವೆಂಬರ್ 2ರಿಂದ 2024ರ ಜನವರಿ 31ರವರೆಗೆ ನಡೆಯಲಿದೆ.


COMMERCIAL BREAK
SCROLL TO CONTINUE READING

 ಈ ಸಂಬಂಧ ಕೊಡಗು ಜಿಲ್ಲೆಯಿಂದ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು, (ಸಾಮಾನ್ಯ ವರ್ಗ-1) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 25ರವರೆಗೆ ಅರ್ಜಿಯನ್ನು ಮಡಿಕೇರಿಯ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದ ಕಚೇರಿ/ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ)ಗೆ ಕಳುಹಿಸಬಹುದು.


ಇದನ್ನೂ ಓದಿ: ನೆಕ್ಸ್ಟ್ ಎಪಿಸೋಡ್ ಸತೀಶ್ ಅವರನ್ನೇ ಕೇಳಿ: ಸತೀಶ್‌‌ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು


ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in ನಲ್ಲಿ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 27ರ ಸಂಜೆ 5.30ಗಂಟೆಯೊಳಗೆ ಸಲ್ಲಿಸಬೇಕು. ಮೂಲ ಅಗತ್ಯ ದಾಖಲಾತಿಗಳೊಡನೆ (SSLC ಅಂಕಪಟ್ಟಿ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ RTC, ತಂದೆ/ತಾಯಿಯವರ ಒಪ್ಪಿಗೆ ಪತ್ರ ಮತ್ತಿತರ) ಸಲ್ಲಿಸಬೇಕು.


ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿಯನ್ನು ಮಡಿಕೇರಿಯ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ)ಗೆ ಖುದ್ದು ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯ್ತಿಯ ತೋಟಗಾರಿಕಾ ಉಪ ನಿರ್ದೇಶಕರು ತಿಳಿಸಿದ್ದಾರೆ.


ಇದನ್ನೂ ಓದಿ: 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ : ಲಾಡ್ ಭವಿಷ್ಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.