ಶಿವಾಜಿ ಪ್ರತಿಮೆಗೆ ಮಸಿ, ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ನವರು: ಬಿಜೆಪಿ
ಕೆಂಪುಕೋಟೆಗೆ ಖಲಿಸ್ತಾನಿಗಳು, ನಗರ ನಕ್ಸಲರು ದಾಳಿ ನಡೆಸಿದ ರೀತಿ ಬೆಳಗಾವಿ ಅಧಿವೇಶನಕ್ಕೆ ಟ್ರ್ಯಾಕ್ಟರ್ ಮೂಲಕ ಪ್ರವೇಶಿಸಲು ಕಾಂಗ್ರೆಸ್ಸಿಗರು ಯತ್ನಿಸಿದರು ಅಂತಾ ಬಿಜೆಪಿ ಟೀಕಿಸಿದೆ.
ಬೆಂಗಳೂರು: ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿಕೊಂಡು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ(Sangolli Rayanna)ಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆ(Shivaji Statue)ಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ಶಾಂತಿ ಕದಡುವುದೇ #ನಾಡದ್ರೋಹಿಕಾಂಗ್ರೆಸ್ ಉದ್ದೇಶವಾಗಿದೆ’ ಅಂತಾ ಕಿಡಿಕಾರಿದೆ.
Winter session in Belagavi)ದ ಸಮಯ ಬಳಸಿಕೊಳ್ಳುತ್ತಿದೆಯೇ? ಹೌದು, ಮೊದಲ ದಿನದಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿ ಹಾಗೂ ಘಟನಾವಳಿಗಳು ಇದನ್ನೇ ಹೇಳುತ್ತಿವೆ. ಕೆಂಪುಕೋಟೆಗೆ ಖಲಿಸ್ತಾನಿಗಳು, ನಗರ ನಕ್ಸಲರು ದಾಳಿ ನಡೆಸಿದ ರೀತಿ ಬೆಳಗಾವಿ ಅಧಿವೇಶನಕ್ಕೆ ಟ್ರ್ಯಾಕ್ಟರ್ ಮೂಲಕ ಪ್ರವೇಶಿಸಲು ಕಾಂಗ್ರೆಸ್ಸಿಗರು ಯತ್ನಿಸಿದರು. ಒಂದೊಮ್ಮೆ #ನಾಡದ್ರೋಹಿಕಾಂಗ್ರೆಸ್ ಪ್ರಯತ್ನ ಸಫಲವಾಗಿ, ಕಾಂಗ್ರೆಸ್ ಕಾರ್ಯಕರ್ತರ ಮುಖವಾಡ ಧರಿಸಿ ಸಮಾಜ ವಿಘಟಕರು ಗುಂಪಿನಲ್ಲಿ ಸೇರಿಸಿದ್ದರೆ ಅಧಿವೇಶನದ ಕತೆ ಏನಾಗುತ್ತಿತ್ತು?’ ಅಂತಾ ಬಿಜೆಪಿ ಪ್ರಶ್ನಿಸಿದೆ.
ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆ : ವಿಕಲಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ
‘ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಬೆಳಗಾವಿಯಲ್ಲಿ ಅಧಿವೇಶನ(Winter Session) ಆಯೋಜಿಸಲಾಗಿತ್ತು. ಆದರೆ #ನಾಡದ್ರೋಹಿಕಾಂಗ್ರೆಸ್ ಒಂದು ದಿನವೂ ಕಲಾಪ ನಡೆಯುವುದಕ್ಕೂ ಅವಕಾಶ ನೀಡಲಿಲ್ಲ. ಪ್ರಶ್ನೋತ್ತರ ಕಲಾಪವನ್ನೂ ತಮ್ಮ ಪ್ರತಿಷ್ಠೆಗೆ ಬಲಿ ಪಡೆಯಲು ಮುಂದಾದರು. ಉತ್ತರ ಕರ್ನಾಟಕದ ಬಗ್ಗೆ ನಿಮಗಿರುವ ಬದ್ಧತೆಯೇ ಪ್ರಶ್ನಾರ್ಹವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ನಿಮ್ಮ ಹೋರಾಟಕ್ಕೆ ಜನ ಬೆಂಬಲ ಸಿಗುತ್ತಿಲ್ಲವೆಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ರೂಪಿಸುತ್ತಿದ್ದೀರಾ? ಭಾಷೆ ಹಾಗೂ ಸ್ವಾತಂತ್ರ್ಯ ವೀರರಿಗೆ ಅಪಮಾನ ಮಾಡುವ ಷಡ್ಯಂತ್ರ ರೂಪುಗೊಂಡಿದ್ದು ಕಾಂಗ್ರೆಸ್ ವಾರ್ ರೂಮಿನಲ್ಲೇ?’ ಅಂತಾ ಬಿಜೆಪಿ ಆರೋಪಿಸಿದೆ.
Congress Party) ಹವಣಿಸುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ ‘ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ’ ಅಂತಾ ಬಿಜೆಪಿ ಟೀಕಿಸಿದೆ.
ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ: ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ 265 ಪ್ರಕರಣಗಳ ಇತ್ಯರ್ಥ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.