ಬೆಂಗಳೂರು: ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್ ‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆರೋಪಿಸಿದ್ದಾರೆ.


COMMERCIAL BREAK
SCROLL TO CONTINUE READING

ನಮ್ಮ ಸರ್ಕಾರದ ಕಾರ್ಯಕ್ರಮಗಳಿಗೆ ಅನುದಾನ ನೀಡದೆ ಇತಿಶ್ರೀ ಹಾಡಿದ್ದೇ ಬಿಜೆಪಿ ಸಾಧನೆ-ಸಿದ್ಧರಾಮಯ್ಯ


ನಾವು ಕರೆದರೂ ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಅವರು ನನ್ನನ್ನು ಕರೆದೂ ಇಲ್ಲ, ನಾನು ಬರುತ್ತೇನೆ ಅಥವಾ ಬರುವುದಿಲ್ಲ ಎಂದು ಅವರಿಗೆ ಹೇಳಿಲ್ಲ. ಈಶ್ವರಪ್ಪ ಈ ವಿಚಾರದಲ್ಲಿ ಸುಳ್ಳು ಹೇಳಿದ್ದಾರೆ.ಮೋದಿಯವರು ಪ್ರಧಾನಿಯಾಗಿ ಆರೂವರೆ ವರ್ಷಗಳಾದವು. ಗೊಂಡ, ರಾಜಗೊಂಡ ಸಮುದಾಯದವರು ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಆ ಬಗ್ಗೆ ಈಶ್ವರಪ್ಪ ಅವರು ಏಕೆ ಆದೇಶ ಮಾಡಿಸಿಲ್ಲ ಎಂದು ಪ್ರಶ್ನಿಸಿದರು.


ಜಾತಿ ಆಧಾರಿತ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ-ಸಿದ್ಧರಾಮಯ್ಯ


ಆರ್‌ಎಸ್ಎಸ್ ನವರು ಎಂದೂ ಮೀಸಲಾತಿ ಪರ ಇಲ್ಲ. ಹಾವನೂರು ಆಯೋಗ, ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಮತ್ತು ಮಂಡಲ್ ವರದಿಯನ್ನು ಅವರು ಸ್ವಾಗತ ಮಾಡಿದರೇ? ಎಲ್ಲಾ ಸಂದರ್ಭದಲ್ಲಿಯೂ ವಿರೋಧ ಮಾಡಿದ್ದಾರೆ.ಬಿಜೆಪಿ ಮತ್ತು ಆರ್‌ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿವೆ. ಆರ್ ಎಸ್ ಎಸ್ ಸ್ಥಾಪಕರಾದ ಹೆಡಗೆವಾರ್ ಆಗಲಿ, ಎಂ.ಎಸ್  ಗೋಲವಾಲ್ಕಾರ್  ಇಲ್ಲವೇ ಇತರ ಆರ್ ಎಸ್ ಎಸ್ ನಾಯಕರು ಎಂದಾದರೂ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಹೋರಾಟ ಮಾಡಿದ್ದಾರೆಯೇ? ಕುರುಬರ ನಾಯಕ ನಾನೇ ಎಂದು ಈಶ್ವರಪ್ಪ  ಹೇಳಿಕೊಳ್ಳಲಿ. ಅದಕ್ಕೆ ನನ್ನ ತಕರಾರು ಇಲ್ಲ. ನಾಯಕ ಯಾರೆಂದು ಜನ ತೀರ್ಮಾನ ಮಾಡುತ್ತಾರೆ, ನಾವೇ ಘೋಷಿಸಿಕೊಳ್ಳುವುದಲ್ಲ ಎಂದು ಹೇಳಿದರು.


'ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿಯುವುದು ಖಚಿತ'


ಕುರುಬ ಸಮುದಾಯವನ್ನು ಒಡೆಯಲು ಆರ್‌ಎಸ್ಎಸ್ ನವರು ಈಶ್ವರಪ್ಪ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಆರ್ ಎಸ್ ಎಸ್ ಕೈವಾಡದ ಬಗ್ಗೆ ನನಗೆ ಗೊತ್ತಿರಲಿಲ್ಲ. ಈಶ್ವರಪ್ಪ ಅವರೇ ಹೇಳಿದ ಮೇಲೆ ನನಗೂ ತಿಳಿದದ್ದು. ಈಶ್ವರಪ್ಪ ಅವರು ಸ್ವಂತ ಬುದ್ಧಿಯಿಂದ ಹೋರಾಟ ಶುರು ಮಾಡಿದ್ದಲ್ಲ, ಆರ್ ಎಸ್ ಎಸ್, ಬಿಜೆಪಿಯವರ ಹುನ್ನಾರವಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.


ಕುರುಬರನ್ನು ಎಸ್ಟಿಗೆ ಸೇರಿಸುವ ಮೊದಲು ಎಸ್ಟಿ ಮೀಸಲಾತಿಯನ್ನು ಶೇ. 3ರಿಂದ ಕನಿಷ್ಠ ಶೇ. 20ಕ್ಕೆ ಹೆಚ್ಚಿಸಬೇಕು. ಅದಕ್ಕೂ ಹೋರಾಟ ಮಾಡಬೇಕಿದೆ. ವಾಲ್ಮೀಕಿ ಸಮುದಾಯದವರು ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ಹೋರಾಟ ಮಾಡುತ್ತಿದ್ದಾರೆ. ಮೀಸಲು ಪ್ರಮಾಣ ಶೇ. 3ರಷ್ಟೇ ಇದ್ದರೆ ಕುರುಬ ಸಮುದಾಯವನ್ನು ಎಸ್‌ಟಿ ಗೆ ಸೇರಿಸಿದರೆ ಏನು ಲಾಭ? ಎಂದು ಪ್ರಶ್ನಿಸಿದರು.


ಕುರುಬ ಸಮುದಾಯದ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿ ಆಧಾರಿತ ವರದಿಯನ್ನು ರಾಜ್ಯ ಬಿಜೆಪಿ ಸರ್ಕಾರ ಒಪ್ಪಿಕೊಳ್ಳಲಿ. ಕುರುಬರ ಬಗ್ಗೆ ಈಶ್ವರಪ್ಪ ಅವರಿಗೆ ಇದ್ದಕ್ಕಿದ್ದಂತೆ ಕಾಳಜಿ ಬಂದಿದೆ. ಕಾಗಿನೆಲೆ ಮಠ ಸ್ಥಾಪನೆ ಸಂದರ್ಭದಲ್ಲಿ ಈಶ್ವರಪ್ಪ ಅವರು ಎಲ್ಲಿದ್ದರು. ಆಗ ಅವರು ಪತ್ತೆಯೇ ಇರಲಿಲ್ಲ. ಈಗ ಸ್ವಾಮೀಜಿಗಳನ್ನು ಕರೆದುಕೊಂಡು ಹೋರಾಟ ನಡೆಸುತ್ತಿದ್ದಾರೆ. ಮಠದ ಉದ್ಘಾಟನಾ ಸಭೆಗೂ ಅವರು ಆಗ ಬಂದಿರಲಿಲ್ಲ.


ಉಡುಪಿಯ ಕನಕ ಗೋಪುರ ಕೆಡವಿದಾಗ ಈಶ್ವರಪ್ಪ ಎಲ್ಲಿ ಹೋಗಿದ್ದರು? ಯಾವ ಮೀಸಲಾತಿ ಪರ ಅವರು ಹೋರಾಟ ಮಾಡಿದ್ದಾರೆ? ರಾಜ್ಯ ಸಭಾ ಸದಸ್ಯರಾಗಿದ್ದ ರಾಮಾ ಜೋಯಿಸರು ಹಿಂದುಳಿದ ವರ್ಗದವರ ಮೀಸಲು ವಿರೋಧಿಸಿದಾಗ ಎಲ್ಲಿದ್ದರು. ಬಿಜೆಪಿಯಲ್ಲಿ ಆಗ ಈಶ್ವರಪ್ಪ ಇದ್ದರಲ್ಲವೇ? ಏಕೆ ವಿರೋಧ ಮಾಡಲಿಲ್ಲ? ಎಂದು ಕುಟುಕಿದರು.


ಗೊಡ್ಡು, ಮುದಿಯಾದ ಹಸುಗಳನ್ನು RSSನವರು ತಮ್ಮ ಮನೆಗೆ ಕರೆದುಕೊಂಡು ಹೋಗುತ್ತಾರಾ: ಸಿದ್ದರಾಮಯ್ಯ


ಈಗ ಇದ್ದಕ್ಕಿಂದ್ದರೆ ಈಶ್ವರಪ್ಪ ಅವರಿಗೆ ಕುರುಬರ ಮೇಲೆ ಪ್ರೀತಿ ಬಂದಿದೆ. ಅವರು ಹೋರಾಟ ಮಾಡಲಿ. ಬೇಡ ಎನ್ನುವುದಿಲ್ಲ. ಮೊದಲು ಬೀದರ್, ಕಲಬರಗಿ, ಯಾದಗಿರಿಯ ಗೊಂಡ, ರಾಜಗೊಂಡ ಸಮುದಾಯವನ್ನು ಎಸ್ಟಿಗೆ ಸೇರಿಸುವ ಕುರಿತು ಆದೇಶ ಜಾರಿ ಮಾಡಿಸಲಿ ಸೂಚಿಸಿದರು.


ಈಶ್ವರಪ್ಪ ಅವರು ಎಂದೂ ಮೀಸಲಾತಿ ಪರ ಹೋರಾಟ ಮಾಡಿದವರಲ್ಲ. ಸದನದಲ್ಲಿಯೂ ಧ್ವನಿ ಎತ್ತಿದವರಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಈಶ್ವರಪ್ಪ ಅವರು ಎಲ್ಲಿ ಬಿಟ್ಟರು? ಹೀಗೆ ಸ್ವಾರ್ಥಕ್ಕಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಕುರುಬ ಸಮುದಾಯವನ್ನು ಒಡೆಯಲು ಆರ್‌ಎಸ್ಎಸ್ ನವರು ಈಶ್ವರಪ್ಪ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಆರ್ ಎಸ್ ಎಸ್ ಕೈವಾಡದ ಬಗ್ಗೆ ನನಗೆ ಗೊತ್ತಿರಲಿಲ್ಲ. ಈಶ್ವರಪ್ಪ ಅವರೇ ಹೇಳಿದ ಮೇಲೆ ನನಗೂ ತಿಳಿದದ್ದು. ಈಶ್ವರಪ್ಪ ಅವರು ಸ್ವಂತ ಬುದ್ಧಿಯಿಂದ ಹೋರಾಟ ಶುರು ಮಾಡಿದ್ದಲ್ಲ, ಆರ್ ಎಸ್ ಎಸ್, ಬಿಜೆಪಿಯವರ ಹುನ್ನಾರವಿದೆ ಎಂದು ಆರೋಪಿಸಿದರು.


ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ? ಕಾಯ್ದೆ ಜಾರಿಯಾದರೆ ತಾವು ಕಷ್ಟ ನಷ್ಟಕ್ಕೆ ಈಡಾಗುತ್ತೇವೆ ಎಂಬ ಭಯದಿಂದ ಮುಸ್ಲಿಂ ಸಮುದಾಯದ ಮುಖಂಡರು ನನ್ನ ಬಳಿಗೆ ಬಂದಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಲ್ಲಿ ನಾವು ವಿರೋಧಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು.


ಉತ್ತರ ಪ್ರದೇಶದಲ್ಲಿ ಜಾರಿಯಿರುವ ಲವ್ ಜಿಹಾದ್ ತಡೆ ಕಾನೂನು ಅಸಂವಿಧಾನಿಕ. ನಿಗದಿತ ವಯೋಮಾನಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾಗುವ ವ್ಯಕ್ತಿಯನ್ನು ಮಧುವೆಯಾಗುವ ಸ್ವಾತಂತ್ರ್ಯ ಇದೆ. ಯಾವುದೇ ಒಂದು ಜಾತಿ ಇಂತಹುದೇ ಜಾತಿ - ಧರ್ಮದ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕೆಂಬ ಕಾನೂನು ನಮ್ಮ ಸಂವಿಧಾನದಲ್ಲಿ ಇಲ್ಲ ಎಂದು ಹೇಳಿದರು.


ಲವ್ ಜಿಹಾದ್ ನಿಷೇಧದಂತಹ ಕಾನೂನು ಜಾರಿಗೊಳಿಸಲು ಸಂವಿಧಾನ ಅವಕಾಶ ನೀಡಲ್ಲ, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಕಾಯ್ದೆ ವಜಾಗೊಳ್ಳಲಿದೆ. ಇಂತಹಾ ಕಾಯ್ದೆಗಳಿಗೆ ಅವಕಾಶವಿಲ್ಲ ಎಂದು ಅಲಹಾಬಾದ್ ಹಾಗೂ ಕರ್ನಾಟಕದ ಉಚ್ಚ ನ್ಯಾಯಾಲಯಗಳು ಹೇಳಿವೆ. ಹಾಗಾಗಿ ಕಾಯ್ದೆ ಜಾರಿ ಅಸಾಧ್ಯ ಎಂದರು.


ಉಪ ಚುನಾವಣೆಯಲ್ಲಿ ಮರಾಠರನ್ನು ಓಲೈಸಲು ಬಿಜೆಪಿ ಕ್ಷುಲಕ ರಾಜಕೀಯ ಮಾಡುತ್ತಿದೆ-ಸಿದ್ಧರಾಮಯ್ಯ


ನನ್ನನ್ನು ಕಾಂಗ್ರೆಸ್ ಸೇರಿಸಿದ್ದು ವಿಶ್ವನಾಥ್ ಎಂಬುದೇ ಶುದ್ಧ ಸುಳ್ಳು. ನನ್ನನ್ನು ಕರೆದುಕೊಂಡು ಹೋಗಿ ಕಾಂಗ್ರೆಸ್‌ ‌ನ ಯಾವ ನಾಯಕರನ್ನು ಭೇಟಿ ಮಾಡಿಸಿದ್ದರು ಅಂತ ವಿಶ್ವನಾಥ್ ಅವರನ್ನೇ ಕೇಳಿ. ನಾನು ಕಾಂಗ್ರೆಸ್ ಸೇರಲು ಪಿರನ್ ಹಾಗೂ ಅಹಮದ್ ಪಟೇಲ್ ಕಾರಣರೇ ಹೊರತು ಕರ್ನಾಟಕದ ಯಾವೊಬ್ಬ ನಾಯಕರಲ್ಲ. ವಿಶ್ವನಾಥ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಅಷ್ಟೊಂದು ಪ್ರಭಾವಶಾಲಿಯಾಗಿದ್ದರೆ ಅವರು ಯಾಕೆ ಕಾಂಗ್ರೆಸ್ ಬಿಟ್ಟರಂತೆ? ಅವರ ಈಗಿನ ಮಾತು ಮತ್ತು ನಡವಳಿಕೆಗಳನ್ನು ನೋಡಿದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದನ್ನು ಒಳಗಿಂದೊಳಗೆ ವಿರೋಧಿಸಿರಬಹುದೇ ಎಂಬ ಸಂಶಯ ನನ್ನನ್ನು ಕಾಡುತ್ತಿದೆ ಎಂದು ಹೇಳಿದರು.


ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯೂ ಸೇರಿದಂತೆ ಬಿಜೆಪಿ ಹಾಗೂ ಆರ್.ಎಸ್.ಎಸ್ ನಾಯಕರು ನಮ್ಮಲ್ಲಿರುವ ಮಾನವೀಯತೆಯನ್ನು ನೋಡಿ ಕಲಿಯಬೇಕು. ಡಿ.ಕೆ ಶಿವಕುಮಾರ್ ಅವರಿಗೆ ನೀವು ಕಿವಿಮಾತು ಹೇಳುವುದೇನೋ ಸರಿ, ಆದರೆ ಅವರು ಯಾವಾಗ ಮಾನವೀಯತೆ, ಮನುಷ್ಯತ್ವವನ್ನು ಕಲಿಯುವುದು? ಎಂದು ಪ್ರಶ್ನಿಸಿದರು.


ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಬಿಜೆಪಿಯ ಯಾವ ನಾಯಕರು ಈ ಕೆಲಸ ಮಾಡಿದ್ದಾರೆ? ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ? ಹಸು- ಎತ್ತುಗಳಿಗೆ ವಯಸ್ಸಾದ ಮೇಲೆ ಅವನ್ನು ರೈತರು ಏನು ಮಾಡಬೇಕು? ಬಿಜೆಪಿಯವರ ಮನೆ ಬಾಗಿಲಿಗೆ ಕೊಂಡುಹೋಗಿ ಬಿಟ್ಟು ಬರಬೇಕೇ? ಸಿದ್ದು  ಎಂದು ಬಿಜೆಪಿ ನಾಯಕರಿಗೆ ಕುಟುಕಿದರು.