ಗಡಿ ವಿವಾದ: ಮಹಾರಾಷ್ಟ್ರ ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ಖಂಡನೆ

ರಾಜ್ಯ ಪುನರ್ ರಚನಾ ಕಾಯ್ದೆ 1956 ರಲ್ಲಿ ರೂಪಿಸಿ ಇಷ್ಟು ವರ್ಷಗಳಾಗಿವೆ. ಎರಡೂ ಕಡೆ ಜನ ನೆಮ್ಮದಿಯಿಂದಿದ್ದಾರೆ. ಅವರ ರಾಜಕಾರಣಕ್ಕಾಗಿ ಈ ರೀತಿ ಯ ಹೇಳಿಕೆಗಳನ್ನು ಹಾಗೂ ನಿರ್ಣಯಗಳನ್ನು  ನೀಡುತ್ತಿದ್ದಾರೆ. ನಮ್ಮ ನಿಲುವಿನಲ್ಲಿ ಸ್ಪಷ್ಟತೆ ಇದೆ.ಕರ್ನಾಟಕದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ.

Written by - Prashobh Devanahalli | Edited by - Manjunath N | Last Updated : Dec 27, 2022, 08:29 PM IST
  • ರಾಜ್ಯ ಪುನರ್ ರಚನಾ ಕಾಯ್ದೆ 1956 ರಲ್ಲಿ ರೂಪಿಸಿ ಇಷ್ಟು ವರ್ಷಗಳಾಗಿವೆ
  • ಎರಡೂ ಕಡೆ ಜನ ನೆಮ್ಮದಿಯಿಂದಿದ್ದಾರೆ
  • ಅವರ ರಾಜಕಾರಣಕ್ಕಾಗಿ ಈ ರೀತಿ ಯ ಹೇಳಿಕೆಗಳನ್ನು ಹಾಗೂ ನಿರ್ಣಯಗಳನ್ನು ನೀಡುತ್ತಿದ್ದಾರೆ
ಗಡಿ ವಿವಾದ: ಮಹಾರಾಷ್ಟ್ರ ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ಖಂಡನೆ title=
file photo

ಬೆಳಗಾವಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ  ಮಹಾರಾಷ್ಟ್ರ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿರುವ  ನಿರ್ಣಯವನ್ನು ಖಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ಸುವರ್ಣಸೌಧದಲ್ಲಿಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯ ಪುನರ್ ರಚನಾ ಕಾಯ್ದೆ 1956 ರಲ್ಲಿ ರೂಪಿಸಿ ಇಷ್ಟು ವರ್ಷಗಳಾಗಿವೆ. ಎರಡೂ ಕಡೆ ಜನ ನೆಮ್ಮದಿಯಿಂದಿದ್ದಾರೆ. ಅವರ ರಾಜಕಾರಣಕ್ಕಾಗಿ ಈ ರೀತಿ ಯ ಹೇಳಿಕೆಗಳನ್ನು ಹಾಗೂ ನಿರ್ಣಯಗಳನ್ನು  ನೀಡುತ್ತಿದ್ದಾರೆ. ನಮ್ಮ ನಿಲುವಿನಲ್ಲಿ ಸ್ಪಷ್ಟತೆ ಇದೆ.ಕರ್ನಾಟಕದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಗಡಿಯಿಂದಾಚೆಯಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದರು.

ವ್ಯತಿರಿಕ್ತ ನಿರ್ಣಯ: 

ಸುಪ್ರೀಂ ಕೋರ್ಟಿನಲ್ಲಿ ವಿಚಾರವಿದೆ. ನಾವು ನಮ್ಮ ಭೂಮಿಯನ್ನು ಬಿಟ್ಟು ಕೊಡುವುದಿಲ್ಲ ಎಂದರೆ ಅವರು ನಮ್ಮ ಜಾಗವನ್ನು ಪರೆಯುವುದಾಗಿ ನಿರ್ಣಯ ಮಂಡಿಸಿದ್ದಾರೆ. ಇದು ನಮಗೂ ಅವರಿಗಿರುವ ವ್ಯತ್ಯಾಸ. ಪ್ರಕರಣ ಸರ್ವೋಚ್ಚ ನ್ಯಾಯಾಲಯದ ಲ್ಲಿರುವ ಸಂದರ್ಭದಲ್ಲಿ ಇದಕ್ಕೆ ಬೆಲೆ ಇಲ್ಲ. ರಾಜ್ಯಕ್ಕೆ ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯ ದೊರೆಯುವ ವಿಶ್ವಾಸವಿದೆ. ನಮ್ಮ ನಿಲುವು ಸಂವಿಧಾನಬದ್ದ ಹಾಗೂ ನ್ಯಾಯಸಮ್ಮತವಾಗಿದೆ.  ಕಾನೂನಿನ ವ್ಯಾಪ್ತಿಯಲ್ಲಿ ನಮ್ಮ  ನಿರ್ಣಯವೂ ಇದೆ. ವ್ಯತಿರಿಕ್ತವಾದ ಮಹಾರಾಷ್ಟ್ರದ ನಿರ್ಣಯ ಜವಾಬ್ದಾರಿಯುತವಲ್ಲ. ಇಡೀ ದೇಶ ಇದನ್ನು ನೋಡುತ್ತಿದ್ದು, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News