Belagavi Lok Sabha: ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಹೆಸರು ಫೈನಲ್!
ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಉಪ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸ್ಪರ್ಧೆ
ಬೆಂಗಳೂರು: ಮುಂದಿನ ತಿಂಗಳು ನಡೆಯಲಿರುವ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಇಂದು ಘೋಷಣೆ ಮಾಡಲಾಗಿದೆ.
ಆ ಪ್ರಕಾರ ಯಮಕನಮರಡಿ ಶಾಸಕ, ಬೆಳಗಾವಿ ಜಿಲ್ಲೆಯ ಪ್ರಭಾವಿ ರಾಜಕಾರಣಿ, ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ(Satish Jarkiholi) ಅವರು ಉಪ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸ್ಪರ್ಧೆ ಮಾಡಲಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ದಿನೇಶ್ ಗುಂಡೂರಾವ್, ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಪ್ರಸ್ತಾಪ ಮಾಡಿದರು. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
V Somanna: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ..!
ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಅಕಾಲಿಕ ಮರಣದಿಂದ ಬೆಳಗಾವಿ ಲೋಕಸಭಾ(Belagavi Lok Sabha) ಕ್ಷೇತ್ರ ತೆರವಾಗಿತ್ತು. ರಾಜ್ಯ ಕಾಂಗ್ರೆಸ್ ನಾಯಕರು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಉಪ ಚುನಾವಣೆಗೆ ಸೂಚಿಸಿತ್ತು. ಆದರೆ, ರಮೇಶ್ ಜಾರಕೊಹೊಳಿ ಅಶ್ಲೀಲ ಸಿಡಿ ವಿಚಾರವಾಗಿ ಮುಜುಗರಕ್ಕೆ ಒಳಗಾಗಿದ್ದ ಜಾರಕಿಹೊಳಿ ಕುಟುಂಬ, ಈ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕಿತ್ತು. ಕಡೆಗೂ ಸತೀಶ್ ಜಾರಕಿಹೊಳಿ ಅವರನ್ನು ಮನವೊಲಿಸಲು ಕಾಂಗ್ರೆಸ್ ಯಶಸ್ವಿಯಾಗಿದೆ.
Ramesh Jarkiholi CD Case: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದೇನು?
ಏಪ್ರೀಲ್ 17 ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ(BJP)ಯಲ್ಲಿ ಇನ್ನು ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಒಂದು ಡಜನ್ಗೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳು ಬಿಜೆಪಿಯಲ್ಲಿದ್ದಾರೆ.
K-Kisan: ರಾಜ್ಯದ ರೈತರು ಕೃಷಿ ಇಲಾಖೆ ಸೌಲಭ್ಯ ಪಡೆಯಲು ಈ ನೋಂದಣಿ ಕಡ್ಡಾಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.