ಬೆಳಗಾವಿ: ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಕಾಂಗ್ರೆಸ್ ವೇಗ ನೀಡಿದೆ.
ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಬೇಕು ಎಂಬುದರ ಕುರಿತು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(D.K.Shivakumar) ಇಂದು ಜಿಲ್ಲೆಯ ನಾಯಕರೊಂದಿಗೆ ಚರ್ಚೆ ನಡೆಸಿದರು.
BJP: ಸಂಪುಟ ವಿಸ್ತರಣೆ ವಿಳಂಬ: ಇಬ್ಬರು ಶಾಸಕರ ರಾಜೀನಾಮೆ ಪ್ರಸ್ತಾಪ ಕಕ್ಕಾಬಿಕ್ಕಿಯಾದ ಬಿಎಸ್‌ವೈ!
ಉಪ ಚುನಾವಣೆಗೆ ಸತೀಶ್ ಜಾರಕಿಹೊಳಿ ಅವರ ಹೆಸರು ಚಾಲ್ತಿಯಲ್ಲಿದ್ದು, ಸತೀಶ್ ಆಯ್ಕೆಯಿಂದಾಗುವ ಲಾಭ-ನಷ್ಟಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಸತೀಶ್ ಮಾತ್ರವಲ್ಲದೇ ಸಂತೋಷ್ ಲಾಡ್ ಹಾಗೂ ಅಂಜಲಿ ನಿಂಬಾಳ್ಕರ್ ಅವರ ಹೆಸರೂ ಚಾಲ್ತಿಯಲ್ಲಿರುವುದು ವಿಶೇಷ.
'ಪಕ್ಷದ ನಿಷ್ಠಾವಂತರನ್ನ ಉಳಿಸಿಕೊಳ್ಳದ ಹೆಚ್ ಡಿಕೆ: ಈ ಕಾರಣಕ್ಕೆ ಪಾರ್ಟಿ ಬಿಟ್ಟು ಹೋದ್ರು'
ಅಲ್ಲದೇ ಇತರೆ ಟಿಕೆಟ್ ಆಕಾಂಕ್ಷಿಗಳು ಹಾಗೂ ಬಿಜೆಪಿಯನ್ನು ಎದುರಿಸಲು ಸೂಕ್ತ ಅಭ್ಯರ್ಥಿ ಯಾರು ಎಂಬುದರ ಕುರಿತಾಗಿಯೂ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
'6 ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ'
ಬೆಳಗಾವಿಯನ್ನು ಕಳೆದುಕೊಳ್ಳಲು ಸಿದ್ಧವಿರದ ಬಿಜೆಪಿ, ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಲಿರುವುದು ನಿಶ್ಚಿತ. ಅಲ್ಲದೇ ಬಿಜೆಎಪಿಯಲ್ಲೂ ಅಭ್ಯರ್ಥಿ ಆಯ್ಕೆ ಕಸರತ್ತು ಆರಂಭವಾಗಿರುವುದರಿಂದ, ಕಾಂಗ್ರೆಸ್ ಕೂಡ ಈ ದಿಸೆಯಲ್ಲಿ ಒಂದು ಹೆಜ್ಜೆ ಮುಂದಿಟ್ಟಿದೆ.
ಬೆಂಗಳೂರಿನ ಕೆಲವು ಕಡೆ ಮಾಸ್ಕ್ ಧರಿಸದಿದ್ದರೆ ಬೀಳಲಿದೆ ಲಕ್ಷ ರೂ.ವರೆಗೆ ದಂಡ
ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ ಹಾಜರಿದ್ದರು.