ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ 17 ತಿಂಗಳಲ್ಲಿ 17 ಅವಾಂತರಗಳನ್ನು ಮಾಡಿಕೊಂಡಿದೆ. ಇಡೀ ಸರ್ಕಾರ ನಿದ್ದೆಗೆ ಜಾರಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಕಿಡಿಕಾರಿದರು.
ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ನೀಡಿದ್ದ ರೀತಿಯ ಆಡಳಿತ ಈ ಬಾರಿ ನೀಡುತ್ತಿಲ್ಲ. ಸಿಎಂ ಮುಡಾ ಕೇಸ್‌ನಲ್ಲಿ ನರಳುತ್ತಿದ್ದರೆ, ಸರ್ಕಾರ ನಿದ್ದೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: 20ನೇ ಶತಮಾನದ ಆದಿಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮ ನೀಡಿದ ಕನ್ನಡದ ಕಣ್ವ ಬಿ.ಎಂ.ಶ್ರೀ
ಬೆಳಗಾವಿಯೊಂದರಲ್ಲೇ 325 ಮಕ್ಕಳು ಮೃತರಾಗಿದ್ದಾರೆ. ಯಾವ ಇಲಾಖೆಯ ಮೇಲೆಯೂ ಸಿಎಂಗೆ ಹಿಡಿತ ಇಲ್ಲ. ಬಾಣಂತಿಯರು, ಮಕ್ಕಳು ಸಾಯುತ್ತಿದ್ದರೂ ಸರ್ಕಾರ ನಿದ್ದೆಗೆ ಜಾರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾವುದೇ ಅಭಿವೃದ್ಧಿ ಕಾರ್ಯ ಮಾಡದ ಸರ್ಕಾರ 17 ತಿಂಗಳಲ್ಲಿ 17 ಅವಾಂತರಗಳನ್ನು ಮಾಡಿಕೊಂಡಿದೆ. ಅಭಿವೃದ್ದಿ ಕಾರ್ಯ ಮರೆತಿರುವುದು, ವಕ್ಫ್ ಅವಾಂತರ, ಬಾಣಂತಿಯರ ಸಾವು, ಲಿಕ್ಕರ್ ಹಗರಣದ ಜೊತೆ ಈಗ ಮೆಡಿಕಲ್ ಮಾಫಿಯಾ ಸೇರಿಕೊಂಡಿದ್ದು ಎಲ್ಲ ವಿಚಾರಗಳನ್ನು ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇವೆ ಎಂದರು.
ಸಿಎಂಗೆ ಇಲಾಖೆಯ ಮೇಲೆ ಹಿಡಿತ ಕೈ ತಪ್ಪಿದ ಕಾರಣದಿಂದ ಎಲ್ಲ ಇಲಾಖೆಗಳಲ್ಲಿ ಅನಾಹುತವಾಗುತ್ತಿದೆ. ಎಲ್ಲ ಸಚಿವರು ಹಣ ಮಾಡುವುದರಲ್ಲಿ ನಿರತರಾಗಿದ್ದಾರೆ. ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ. ಇದು ಗುರುವಾರದ ಸರ್ಕಾರವಾಗಿದೆ. ಹಣ ಮಾಡಲು ಮಾತ್ರ ಸಚಿವರು ಗುರುವಾರ ವಿಧಾನಸೌಧಕ್ಕೆ ಆಗಮಿಸುತ್ತಾರೆ. ಹೊಸದಾಗಿ ಬಂದಾಗ ಧರ್ಮ ದರ್ಶನ ಮಾಡುತ್ತೇವೆ, ಜನಸಂಪರ್ಕ ಮಾಡುತ್ತೇವೆ ಎಂದು ಹೇಳಿದ್ದ ಮಾತನ್ನು ಮರೆತು ಹಣ ಮಾಡುವುದರಲ್ಲಿ ಇಡೀ ಸರ್ಕಾರ ನಿರತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕಕ್ಕೆ ಏನು ಕೊಟ್ಟಿದ್ದೀರಾ?
ಉತ್ತರ ಕರ್ನಾಟಕ ಅಭಿವೃದ್ದಿಗೆ ಹಿಂದೆ ಹೇಳಿದ್ದೇನು? ಈಗ ಮಾಡುತ್ತಿರುವುದೇನು? ಈ ವಿಚಾರವನ್ನು ಸಹ ನಾವು ಪ್ರಸ್ತಾಪ ಮಾಡಲಿದ್ದೇವೆ. ಉತ್ತರ ಕರ್ನಾಟಕವನ್ನು ಚಿನ್ನದ ನಾಡು ಮಾಡುತ್ತೇವೆ ಎಂದು ಹೇಳಿದ್ದವರು ಎಲ್ಲಿ ಹೋದರು? ಎಂದು ಪ್ರಶ್ನೆ ಮಾಡಿದ ಅವರು, ಕರ್ನಾಟಕದ ಇತಿಹಾಸದಲ್ಲೇ ಈ ಸರ್ಕಾರ ಅತ್ಯಂತ ಕಳಪೆ ಎಂದು ಕಿಡಿಕಾರಿದರು.
ಇದನ್ನೂ ಓದಿ: ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಅತಿಥಿ ಶಿಕ್ಷಕರ ಮಾಸಿಕ ಗೌರವಧನ ಮೊತ್ತ ಹೆಚ್ಚಳ : ಸಚಿವ ಮಧು ಬಂಗಾರಪ್ಪ
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.