ಬೆಳಗಾವಿ : ಇಂದಿನಿಂದ ಬೆಳಗಾವಿ ಅಧಿವೇಶನದ ಕಾವೇರಲಿದ್ದು, ಒಟ್ಟು ಆರು ವಿಧೇಯಕ ಮಂಡನೆ ಆಗಲಿದೆ. ಮುಖ್ಯವಾಗಿ ಇತ್ತೀಚಿಗೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಎಸ್‌ಸಿ, ಎಸ್‌ಟಿ ಮೀಸಲಾತಿ ಬಿಲ್ ಬಗ್ಗೆ ಸ್ಪಷ್ಟನೆಗೆ ಕಾಂಗ್ರೆಸ್ ಪಟ್ಟು ಹಿಡಿಯಲು ಸಜ್ಜಾಗಿದೆ.


COMMERCIAL BREAK
SCROLL TO CONTINUE READING

2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಧೀಕ ಸೇವೆಗಳಲ್ಲಿನ ನೇಮಕಾತಿ ಅಥವ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕವನ್ನು ಮಂಡಿಸಲು ಸರ್ಕಾರ ನಿರ್ಧಾರ ಮಾಡಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಇಂದುವಿಧೇಯಕ ಮಂಡನೆ ಮಾಡಲಿದ್ದಾರೆ.


ಇದನ್ನೂ ಓದಿ- ತಮ್ಮ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿಗೆ ಡಿಕೆಶಿ ಹೇಳಿದ್ದೇನು ಗೊತ್ತೇ?


ಎಸ್‌ಸಿ, ಎಸ್‌ಟಿ ಮೀಸಲಾತಿ ಸ್ಪಷ್ಟನೆಗೆ ಕಾಂಗ್ರೆಸ್ ಪಟ್ಟು! 
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಇಂದು ವಿರೋಧ ಪಕ್ಷ ಕಾಂಗ್ರೆಸ್ ಎಸ್‌ಸಿ, ಎಸ್‌ಟಿ ಮೀಸಲಾತಿ ಸಂಬಂಧ ನಿಳುವಳಿ ಸೂಚನೆಗೆ ಸ್ಪೀಕರ್ ಅವರಿಗೆ ಮನವಿ ಮಾಡಲಿದೆ. ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿಯಮ 60ರ ಅಡಿಯಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ಗೆ ಮನವಿ ಮಾಡಲು ನಿರ್ಧರಿಸಲಾಗಿದೆ.


ಇದನ್ನೂ ಓದಿ- ರಾಜ್ಯದಲ್ಲಿ ಹಲಾಲ್ ಮಾಂಸ ನಿಷೇಧಿಸಲು ಮುಂದಾದ ಬೊಮ್ಮಾಯಿ ಸರ್ಕಾರ


ಮೀಸಲಾತಿ ವಿಚಾರವಾಗಿ ಸರ್ಕಾರ ಸುಳ್ಳು ಹೇಳುತ್ತಿದೆ, ಚುನಾವಣೆಯಲ್ಲಿ ಲಾಭ ಪಡೆಯಲು ಹುನ್ನಾರ ನಡೆಸಿದೆ. ಮೀಸಲಾತಿ ನೀಡುವುದೆ ಆದ್ರೆ ಕೇಂದ್ರದ 9 ಶೆಡ್ಯೂಲ್ ನಲ್ಲಿ ಸೇರಿಸಲಿ. ಮೀಸಲಾತಿ ವಿಚಾರವಾಗಿ ಕೇಂದ್ರ ಸರ್ಕಾರದಿಂದ ಉತ್ತರ ಕೊಡಿಸಲಿ ಎಂದು ಆಗ್ರಹಿಸಿದೆ. ಇದೇ ವಿಚಾರ ಉಭಯ ಸದನದಲ್ಲಿ ಪಟ್ಟು ಹಿಡಿಯಲು ಕಾಂಗ್ರೆಸ್ ನಿರ್ಧಾರ ಮಾಡಿದೆ. 
ಈ ಮೂಲಕ ಮೀಸಲಾತಿ ಅಸ್ತ್ರ ಬಳಸಿ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.