Bengaluru Rain : ಬೆಂಗಳೂರಿನಲ್ಲಿ ಭಾರೀ ಮಳೆ... ವಿಮಾನ ನಿಲ್ದಾಣದ ಮೇಲ್ಛಾವಣಿ ಸೋರಿಕೆ

Bengaluru Rain News : ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌ಗಳ ಕೆಲವು ಪ್ರದೇಶಗಳಲ್ಲಿ ನೀರು ಸೋರಿಕೆಯಾಗಿದೆ. 

Written by - Zee Kannada News Desk | Last Updated : May 10, 2024, 05:44 PM IST
  • ಬೆಂಗಳೂರಿನಲ್ಲಿ ಗುರುವಾರ ಸುರಿದ ಭಾರೀ ಮಳೆ
  • ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
  • ವಿಮಾನ ನಿಲ್ದಾಣದ ಛಾವಣಿ ಸೋರಿಕೆ
Bengaluru Rain : ಬೆಂಗಳೂರಿನಲ್ಲಿ ಭಾರೀ ಮಳೆ... ವಿಮಾನ ನಿಲ್ದಾಣದ ಮೇಲ್ಛಾವಣಿ ಸೋರಿಕೆ title=

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ಸುರಿದ ಭಾರೀ ಮಳೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಹೊಸದಾಗಿ ನಿರ್ಮಿಸಲಾದ ಟರ್ಮಿನಲ್ 2 ರ ಛಾವಣಿಯ ಮೂಲಕ ಮಳೆ ನೀರು ಸೋರಿಕೆಯಾಗಿದೆ. 

ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ವಿಮಾನ ನಿಲ್ದಾಣದ ಮೇಲ್ಛಾವಣಿ ಸೋರಿಕೆಯಾಗಿದ್ದು, ಪ್ರಯಾಣಿಕರಿಗೆ ತೊಂದರೆಯಾಗದಂತೆ ನಿರ್ವಹಣಾ ಸಿಬ್ಬಂದಿ ಮಳೆ ನೀರನ್ನು ತೆರವುಗೊಳಿಸಿದರು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ ಈ ಕುರಿತು ಹೇಳಿಕೆ ಬಿಡುಕಡೆ ಮಾಡಿದೆ. ಮೇ 9, 2024 ರ ಸಂಜೆ ಅಲ್ಪಾವಧಿಯಲ್ಲಿ ಅತಿ ಹೆಚ್ಚು ಮಳೆ ಸುರಿದು, ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌ಗಳ ಕೆಲವು ಪ್ರದೇಶಗಳಲ್ಲಿ ನೀರು ಸೋರಿಕೆಯಾಗಿದೆ. ಈ ಹಿನ್ನೆಲೆ ನಮ್ಮ ತಂಡಗಳು ತಕ್ಷಣವೇ ಸೋರಿಕೆ ನಿಯಂತ್ರುವ ಕೆಲಸ ಮಾಡಿದೆ. ನಮ್ಮ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ ಎಂದು ತಿಳಿಸಿದೆ.

ಭಾರೀ ಮಳೆಯಿಂದಾಗಿ ಬೆಂಗಳೂರಿಗೆ ತೆರಳುವ ಹಲವಾರು ವಿಮಾನಗಳನ್ನು ಚೆನ್ನೈಗೆ ತಿರುಗಿಸಲಾಗಿದೆ. ಬಿಐಎಎಲ್ ಅಧಿಕಾರಿಗಳ ಪ್ರಕಾರ, 13 ದೇಶೀಯ ವಿಮಾನಗಳು, ಮೂರು ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಗಳು ಮತ್ತು ಒಂದು ಅಂತರರಾಷ್ಟ್ರೀಯ ಕಾರ್ಗೋ ವಿಮಾನವನ್ನು ಚೆನ್ನೈಗೆ ತಿರುಗಿಸಲಾಗಿದೆ. 

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಮೇ 10 ರಂದು ಬೆಳಿಗ್ಗೆ 8:30 ರವರೆಗೆ ಬೆಂಗಳೂರಿನಲ್ಲಿ 72.4 ಮಿಮೀ ಮಳೆ ದಾಖಲಾಗಿದೆ.

ವಿಮಾನ ನಿಲ್ದಾಣದ ರಸ್ತೆಯುದ್ದಕ್ಕೂ ಜಲಾವೃತವಾಗಿದೆ.  ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರಿಗೆ ಎಚ್ಚರವಹಿಸುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸ್ ಇಲಾಖೆ ತಿಳಿಸಿದೆ.

ಇದನ್ನೂ ಓದಿ:  ಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣನವರ ವಚನದ ಮೂಲಕ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News