Rains in Karnataka : ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ನಾಳೆ ಭಾರಿ ಮಳೆ!

ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯನ್ನು ಸಹ ನೀಡಿದೆ. ಉಡುಪಿ. ಬೆಂಗಳೂರಿನಲ್ಲಿ ದಿನವಿಡೀ ಮೋಡ ಕವಿದ ವಾತಾವರಣವಿದ್ದು, 20 ರಿಂದ 25 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Written by - Channabasava A Kashinakunti | Last Updated : Nov 15, 2021, 06:18 PM IST
  • ಇಂದು ಬೆಂಗಳೂರಿನಲ್ಲಿ ಸ್ವಲ್ಪ ಬಿಡು ಬಿಟ್ಟ ಮಳೆರಾಯ
  • ಬೆಂಗಳೂರಿನ ಹವಾಮಾನವು ಸುಮಾರು 18 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ
  • ನಾಳೆ ನಗರದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿ
Rains in Karnataka : ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ನಾಳೆ ಭಾರಿ ಮಳೆ! title=

ಬೆಂಗಳೂರು : ಇಂದು ರಾಜ್ಯ ರಾಜಧಾನಿಯಲ್ಲಿ ಮುಂಜಾನೆಯಿಂದ ಬಿದಿದ್ದು, ಹೀಗಾಗಿ ಮಳೆರಾಯ ಸ್ವಲ್ಪ ಬಿಡು ಬಿಟ್ಟಿದ್ದಾನೆ ಆದರೆ ನಾಳೆ ನಗರದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯನ್ನು ಸಹ ನೀಡಿದೆ. ಉಡುಪಿ. ಬೆಂಗಳೂರಿನಲ್ಲಿ ದಿನವಿಡೀ ಮೋಡ ಕವಿದ ವಾತಾವರಣವಿದ್ದು, 20 ರಿಂದ 25 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಕರ್ನಾಟಕ(Coastal Karnataka) ಮತ್ತು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಸತತ ಮಳೆಯಿಂದಾಗಿ ಚಾಮರಾಜನಗರ ಜಿಲ್ಲೆಯ ಸುವರ್ಣಾವತಿ ಜಲಾಶಯದಲ್ಲಿ 11 ವರ್ಷಗಳ ನಂತರ ಗರಿಷ್ಠ ಮಟ್ಟ ತಲುಪಿದೆ. ಜಲಾಶಯದ ಎರಡು ಕ್ರೆಸ್ಟ್ ಗೇಟ್‌ಗಳಿಂದ 900 ಕ್ಯೂಸೆಕ್ ನೀರು ಬಿಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ : ನಕಲಿ ಗಾಂಧಿಗಳ ಪಾದ ಪೂಜೆ ಮಾಡುತ್ತಿರುವುದ್ಯಾರು?: ಡಿಕೆಶಿಗೆ ಬಿಜೆಪಿ ಟಾಂಗ್

ಕಳೆದ ವಾರದಿಂದ ರಾಜ್ಯದ 14 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ(Heavy Rains)ಯಿಂದಾಗಿ, ರಾಜ್ಯದಲ್ಲಿ ಇಲ್ಲಿಯವರೆಗೆ 4 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಚಿತ್ರದುರ್ಗ ಜಿಲ್ಲೆಯ ಹೋಚಿ ಬೋರನಹಟ್ಟಿ ಗ್ರಾಮದಲ್ಲಿ ಭಾನುವಾರ ಮಳೆಯಿಂದಾಗಿ ಪಕ್ಕದ ಮನೆಯ ಗೋಡೆ ಕುಸಿದು ಗರ್ಭಿಣಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ಕಳೆದ ವಾರ, ನಿರಂತರ ಮಳೆಯ ನಂತರ, ಬೆಂಗಳೂರಿನ(Bengaluru) ಹವಾಮಾನವು ಗುರುವಾರ ಸುಮಾರು 18 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ, ಸುಮಾರು 7 ಡಿಗ್ರಿಗಳಷ್ಟು ಇಳಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಗುರುವಾರ ಗರಿಷ್ಠ ತಾಪಮಾನ 19.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಐಎಂಡಿ ಹೇಳಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಪರಿಣಾಮ ಚೆನ್ನೈ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹ ಉಂಟಾಗಿದೆ. ಗುರುವಾರ ಸಂಜೆ ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ನಡುವೆ ವಾಯುಭಾರ ಕುಸಿತ ಉಂಟಾಗಿದೆ.

ಇದನ್ನೂ ಓದಿ : 2023ರ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News