ಬೆಂಗಳೂರು: ಆಸ್ಪತ್ರೆಗಳಲ್ಲಿ ಗುಂಪು ಸೇರುವುದನ್ನು ತಪ್ಪಿಸಲು ಹಾಗೂ ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟಲು ಸಲುವಾಗಿ ಜ್ವರ ಮತ್ತು ತುರ್ತು ಆರೋಗ್ಯ ಚಿಕಿತ್ಸೆಯ ಅಗತ್ಯವಿರುವ ರೋಗಿಗಳು ಮಾತ್ರ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸ್ವಾಯತ್ತ ಸಂಸ್ಥೆಗಳಿಗೆ ಭೇಟಿ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಇದನ್ನೂ ಓದಿ: ಪಿಯುಸಿ ತೇರ್ಗಡೆಯಾಗಿದ್ದಿರಾ? ಹಾಗಿದ್ದಲ್ಲಿ ಈ ಜಿಲ್ಲೆಯ ಯುವಕರಿಗೆ ಇಲ್ಲಿದೆ ಉದ್ಯೋಗದ ಸುವರ್ಣಾವಕಾಶ..!
ಸಣ್ಣ ಪ್ರಮಾಣದ ಅನಾರೋಗ್ಯದಿಂದ ಬಳಲುತ್ತಿರುವ ಮತ್ತು ಹೊರರೋಗಿ ಚಿಕಿತ್ಸೆಯ ಅಗತ್ಯ ಇರುವ ರೋಗಿಗಳು ಸೇರಿದಂತೆ ದಂತ ಚಿಕಿತ್ಸೆಯ ಅಗತ್ಯವಿರುವವರು ಎರಡು ವಾರದವರೆಗೆ ಆಸ್ಪತ್ರೆಗಳಿಗೆ ಭೇಟಿ ನೀಡಬಾರದು ಎಂದು ಸೂಚಿಸಲಾಗಿದೆ.
ಇದನ್ನೂ ಓದಿ: Big News: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ, ಧಗಧಗಿಸಿ ಹೊತ್ತಿ ಉರಿದ ಶಾಂಪಿಂಗ್ ಮಾಲ್!
ಗುಂಪು ಸೇರುವುದನ್ನು ತಪ್ಪಿಸಲು ಹಾಗೂ ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ಸಲುವಾಗಿ ಖಾಸಗಿ ಆಸ್ಪತ್ರೆಗಳು ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.