ಬೆಂಗಳೂರು-ಕನಕಪುರ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತ
ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು-ಕನಕಪುರ ಮಾರ್ಗವಾಗಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಬೆಂಗಳೂರು: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಬಂಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಕನಕಪುರದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು-ಕನಕಪುರ ಮಾರ್ಗವಾಗಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಮಂಗಳವಾರ ರಾತ್ರಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡಿಕೆಶಿ ಅವರನ್ನು ಬಂಧಿಸಿದ ಬೆನ್ನಲ್ಲೇ ಕನಕಪುರ-ರಾಮನಗರದಲ್ಲಿ ಕಾಂಗ್ರೆಸ್ ಬೆಂಬಲಿಗರು ಭಾರೀ ಪ್ರತಿಭಟನೆ ನಡೆಸಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಅಷ್ಟೇ ಅಲ್ಲದೆ, ಎರಡು ಸರ್ಕಾರು ಬಸ್ಸುಗಳಿಗೆ ಬೆಂಕಿ ಹಚ್ಚು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಅಗತ್ಯಬಿದ್ದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸುವುದಾಗಿ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಾರ್ವಜನಿಕ ಸಂಪರ್ಕಾಧಿಕಾರಿಗಳು ತಿಳಿಸಿದ್ದರು. ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು-ಕನಕಪುರ ಮಾರ್ಗವಾಗಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.