ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಭಾರೀ ಮಳೆಯಾಗಿದ್ದು, ಅದ್ರಲ್ಲೂ ಬೆಂಗಳೂರಿನಲ್ಲಿ ಮಳೆಯಿಂದಾಗಿ ತುಂಬಾ ಹಾನಿಗೊಳಗಾಗಿದೆ. ಭಾರೀ ಮಳೆಗೆ ಇಲ್ಲಿಯವರೆಗೆ ನಾಲ್ವರು ಸಾವನ್ನಪ್ಪಿದು ವರದಿಯಾಗಿವೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೈಪ್‌ಲೈನ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.


COMMERCIAL BREAK
SCROLL TO CONTINUE READING

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ 38 ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದು, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಳೆಯ ಶಾಲಾ ಕಟ್ಟಡದ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಎಲ್ಲ ಘಟನೆಗಳು ಬುಧವಾರ ಬೆಳಕಿಗೆ ಬಂದಿವೆ.


ಇದನ್ನೂ ಓದಿ : Free Electricity : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ - ಪಂಗಡದ ಜನತೆಗೆ ಸಿಹಿ ಸುದ್ದಿ!


ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಗುರುವಾರ ಶಾಲೆಗಳಿಗೆ ರಜೆ ಘೋಷಿಸಿದೆ.


ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವುದೇ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.


ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಕಮಲನಗರ, ಶಂಕರಮಠ, ಲಗ್ಗೆರೆ ಮತ್ತು ನಾಗವಾರ ಪ್ರದೇಶಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು. ಅವರು ನಡೆಯುತ್ತಿರುವ ಮೆಟ್ರೋ ಕಾಮಗಾರಿ ಮತ್ತು ಮಳೆನೀರು ಚರಂಡಿಗಳನ್ನು ಪರಿಶೀಲಿಸಿದರು.


ಇದನ್ನೂ ಓದಿ : ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಸಿಎಂ ಬೊಮ್ಮಾಯಿ ಖುಷ್..!


ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಪ್ರಯಾಣಿಕರು ವಿಮಾನ ನಿಲ್ದಾಣದ ಕಡೆಗೆ ಕೆಲವು ಪ್ರದೇಶಗಳಲ್ಲಿ ನೀರು ಮತ್ತು ಟ್ರಾಫಿಕ್ ಜಾಮ್‌ ಸಮಸ್ಯೆ ಎದುರಿಸಬಹುದು ಎಂದು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್) ಅಧಿಕಾರಿಗಳು ಪ್ರಯಾಣಿಕರಿಗೆ ತಮ್ಮ ಪ್ರಯಾಣಕ್ಕೆ ಪ್ಲಾನ್ ಮಾಡುವಂತೆ ಮನವಿ ಮಾಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.