Bengaluru Rural Lok Sabha Result 2024: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಗೆ ಹೀನಾಯ ಸೋಲು
Bengaluru Rural Lok Sabha Result 2024: ಈಗ ಅವರು ಮೂರನೇ ಬಾರಿಗೆ ಕಣಕ್ಕೆ ಇಳಿದಿದ್ದು,ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಸಿಎನ್ ಮಂಜುನಾಥ್ ಅವರಿಂದ ತೀವ್ರ ಪೈಪೋಟಿಯನ್ನು ಎದುರಿಸುತ್ತಿದ್ದಾರೆ.ಹಾಗಾಗಿ 2024 ರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ವಿಜಯದ ಮಾಲೆ ಯಾರಿಗೆ ಸಿಗುತ್ತೆ ಎನ್ನುವುದನ್ನು ಫಲಿತಾಂಶ ಪ್ರಕಟವಾಗುವವರೆಗೆ ಕಾಯ್ದು ನೋಡಬೇಕಾಗಿದೆ.
Bengaluru Rural Lok Sabha Result 2024: 2024 ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ದೇಶದ ಗಮನ ಸೆಳೆದಿದೆ, ಕಾರಣವಿಷ್ಟೇ ಹಲವಾರು ವರ್ಷಗಳ ಜಯದೇವ ಸಂಸ್ಥೆಯ ನೇತೃತ್ವವಹಿಸಿಕೊಂಡಿದ್ದ ಡಾ.ಸಿಎನ್ ಮಂಜುನಾಥ್ ಅವರು ಇದೇ ಮೊದಲ ಬಾರಿಗೆ ರಾಜಕೀಯದ ಅದೃಷ್ಟ ಪರೀಕ್ಷೆಯನ್ನು ಎದುರು ನೋಡುತ್ತಿದ್ದಾರೆ, ಇನ್ನೊಂದೆಡೆಗೆ ಕಾಂಗ್ರೆಸ್ ಪಕ್ಷಕ್ಕೆ ಈ ಕ್ಷೇತ್ರವನ್ನು ಉಳಿಸಿಕೊಳ್ಳಲೇಬೇಕಾದ ಸವಾಲು ಎದುರಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು 2008 ರಲ್ಲಿ ಸಂಸದೀಯ ಕ್ಷೇತ್ರಗಳ ವಿಂಗಡಣೆಯ ನಂತರ ರಚಿಸಲಾಗಿದೆ. ಈ ಕ್ಷೇತ್ರವು ಕಾರ್ಯರೂಪಕ್ಕೆ ಬರುವ ಮೊದಲು ಇದನ್ನು ಕನಕಪುರ ಲೋಕಸಭಾ ಕ್ಷೇತ್ರ ಎಂದು ಕರೆಯಲಾಗುತ್ತಿತ್ತು ಆಗ ಇದು ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ, ಸಾತನೂರು, ಉತ್ತರಹಳ್ಳಿ, ಮಳವಳ್ಳಿ ಮತ್ತು ಆನೇಕಲ್ ಎಂಬ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿತ್ತು. ಇವುಗಳಲ್ಲಿ ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರಗಳನ್ನು 2008 ರಲ್ಲಿ ರಚನೆಯಾದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿಯೇ ಉಳಿಸಿಕೊಳ್ಳಲಾಯಿತು. ಸಾತನೂರು ಕನಕಪುರ, ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರಗಳ ನಡುವೆ ವಿಲೀನಗೊಂಡಿತು.ಮಳವಳ್ಳಿಯು ಮಂಡ್ಯ ಕ್ಷೇತ್ರದ ಒಂದು ಭಾಗವಾಯಿತು ಮತ್ತು ಉತ್ತರಹಳ್ಳಿಯನ್ನು ಹೊಸ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದೊಂದಿಗೆ ವಿಲೀನಗೊಳಿಸಲಾಯಿತು.ಹೊಸ ವಿಧಾನಸಭಾ ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ, ಆನೇಕಲ್ ಮತ್ತು ರಾಜರಾಜೇಶ್ವರಿನಗರವು ತುಮಕೂರು ಜಿಲ್ಲೆಯಿಂದ ಕುಣಿಗಲ್ ವಿಧಾನಸಭಾ ಕ್ಷೇತ್ರದೊಂದಿಗೆ ಬೆಂಗಳೂರು ಗ್ರಾಮಾಂತರದ ಭಾಗವಾಯಿತು
ಈ ಕ್ಷೇತ್ರ ರಚನೆಯಾದ ನಂತರ 2009 ರಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಈ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು ತದಂತರ 2013 ರಲ್ಲಿ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಡಿಕೆ ಸುರೇಶ ಅವರು ಮೊದಲ ಬಾರಿಗೆ ಜೆಡಿಎಸ್ ಅನಿತಾ ಕುಮಾರಸ್ವಾಮಿ ವಿರುದ್ಧ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದರು. ತದನಂತರ ಅವರು 2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಸತತವಾಗಿ ಗೆಲುವನ್ನು ಸಾಧಿಸಿದ್ದರು.
ಮೂರನೇ ಬಾರಿಗೆ ಕಣಕ್ಕೆ ಇಳಿದಿದ್ದ ಡಿಕೆ ಸುರೇಶ ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಸಿಎನ್ ಮಂಜುನಾಥ್ ಅವರ ವಿರುದ್ಧ ಗೆಲುವನ್ನು ಸಾಧಿಸಿದ್ದಾರೆ.
ರಿಂದ ತೀವ್ರ ಪೈಪೋಟಿಯನ್ನು ಎದುರಿಸುತ್ತಿದ್ದಾರೆ.ಹಾಗಾಗಿ 2024 ರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ವಿಜಯದ ಮಾಲೆ ಯಾರಿಗೆ ಸಿಗುತ್ತೆ ಎನ್ನುವುದನ್ನು ಫಲಿತಾಂಶ ಪ್ರಕಟವಾಗುವವರೆಗೆ ಕಾಯ್ದು ನೋಡಬೇಕಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.