ಮಾದಕ ವ್ಯಸನಿಗಳೇ ಎಚ್ಚರ! ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್ ನಿಗ್ರಹಕ್ಕೆ ರೆಡಿಯಾಗಿದೆ ವಿನೂತನ ಪ್ಲಾನ್
ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಇತ್ತೀಚಿಗೆ ಹೆಚ್ಚಾಗುತ್ತಿರುವ ಮಾದಕ ವಸ್ತುಗಳ ಮಾರಾಟ ಹಾಗೂ ಮಾದಕ ವ್ಯಸನಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಇನ್ನು ಮುಂದೆ ವಾರಕ್ಕೊಮ್ಮೆ ಕಾಲೇಜುಗಳು , ರೈಲ್ವೆ ಸ್ಟೇಷನ್, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಡಾಗ್ ಸ್ಕ್ವಾಡ್ ಪರಿಶೀಲನೆ.
ಬೆಂಗಳೂರು: ಮಾದಕ ವಸ್ತುಗಳ ದಂಧೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ವಿನೂತನ ಕಾರ್ಯಕ್ಕೆ ಮುಂದಾಗಿದೆ. ಸೈಬರ್ ಕ್ರೈಂ, ಡ್ರಗ್ಸ್ ನಿಗ್ರಹಕ್ಕಾಗಿ ಹದ್ದಿನ ಕಣ್ಣಿಡಲು ಸಜ್ಜಾಗಿರುವ ಬೆಂಗಳೂರು ದಕ್ಷಿಣ ವಲಯ ಪೊಲೀಸರು (Bengaluru South Police) ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಜನನಿಬಿಡ ಪ್ರದೇಶಗಳಲ್ಲಿ ಮಾದಕ ವಸ್ತುಗಳ ದಂಧೆ ತಡೆಯಲು ಶ್ವಾನದಳ ಪಡೆಯಿಂದ ಪರಿಶೀಲನೆಗೆ ಅಣಿಯಾಗಿದ್ದಾರೆ.
ವಾರಕ್ಕೊಮ್ಮೆ ಡಾಗ್ ಸ್ಕ್ವಾಡ್ ಪರಿಶೀಲನೆ:
ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಇತ್ತೀಚಿಗೆ ಹೆಚ್ಚಾಗುತ್ತಿರುವ ಮಾದಕ ವಸ್ತುಗಳ ಮಾರಾಟ ಹಾಗೂ ಮಾದಕ ವ್ಯಸನಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಇನ್ನು ಮುಂದೆ ವಾರಕ್ಕೊಮ್ಮೆ ಕಾಲೇಜುಗಳು , ರೈಲ್ವೆ ಸ್ಟೇಷನ್, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಡಾಗ್ ಸ್ಕ್ವಾಡ್ ಪರಿಶೀಲನೆ (Dog Squad Inspection) ನಡೆಸಲಾಗುವುದು.
ಇದನ್ನೂ ಓದಿ- Online Love: ನನ್ನ ಹೆಂಡತಿ ಬೇಕೆಂದು ಕೋರ್ಟ್ ಮೋರೆ ಹೋಗಲು ಸಿದ್ಧನಾದ ಯುವಕ!
ಈ ರೀತಿಯ ಹೊಸ ಪ್ರಯತ್ನದಿಂದಾಗಿ ಡ್ರಗ್ ಪೆಡ್ಲರ್ (Drug Peddler) ಅಷ್ಟೇ ಅಲ್ಲದೇ ವ್ಯಸನಿಗಳನ್ನು ಸಹ ನಿಗ್ರಹಿಸುವುದು ನಮ್ಮ ಉದ್ದೇಶ. ಈಗಾಗಲೇ ಡಾಗ್ ಸ್ಕ್ವಾಡ್ ಪರಿಶೀಲನೆ ವೇಳೆ ಮೂವರು ಡ್ರಗ್ ವ್ಯಸನಿಗಳನ್ನು ಬಂಧಿಸಲಾಗಿದೆ. ಕುಮಾರ್, ರಿಜ್ವಾನ್, ಮಹೇಶ್ ಎಂಬ ಮಾದಕ ವ್ಯಸನಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ- ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ; ನಾಲ್ವರ ಬಂಧನ..!
ಇದೇ ಮೊದಲ ಬಾರಿಗೆ ಠಾಣಾ ಪೊಲೀಸರಿಂದ ಡಾಗ್ ಸ್ಕ್ವಾಡ್ ಜೊತೆಗೆ ಪರಿಶೀಲನೆ ನಡೆಸಲಾಗುತ್ತಿದೆ. ಪೆಡ್ಲರ್ ಗಳನ್ನು ಪತ್ತೆ ಮಾಡಲು ಡಾಗ್ ಸ್ಕ್ವಾಡ್ ಸಹಕಾರಿಯಾಗಲಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಠಾಣಾ ವ್ಯಾಪ್ತಿಯಲ್ಲೂ ಡಾಗ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಯಲಿದ್ದು ರಾಜ್ಯದಲ್ಲಿ ಡ್ರಗ್ಸ್ ದಂಧೆಗಳಿಗೆ ಸಂಪೂರ್ಣ ಕಡಿವಾಣ ಹಾಕಲಾವುದು ಎಂದು ಪೊಲೀಸರು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.