Bengaluru Weather: ಬೆಂಗಳೂರಿನಲ್ಲಿಂದು ಸಾಧಾರಣದಿಂದ ಭಾರೀ ಮಳೆ ಸಾಧ್ಯತೆ ಬಗ್ಗೆ ಐಎಂಡಿ ಎಚ್ಚರಿಕೆ
Bengaluru Weather: ಬೆಂಗಳೂರಿನಲ್ಲಿ ಇಂದಿನ (ಮೇ 23, ಗುರುವಾರ) ಕನಿಷ್ಠ ತಾಪಮಾನ 23.0°C ಇದ್ದರೆ, ಗರಿಷ್ಠ ತಾಪಮಾನ 31.0°C ಎನ್ನಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ದಿನವಿಡೀ ಭಾಗಶಃ ಮೋದಕವಿದ ವಾತಾವರಣ ಮುಂದುವರೆಯಲಿದ್ದು ಸಂಜೆ ವೇಳೆಗೆ ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.
Bengaluru Weather Update: ಬೆಂಗಳೂರಿನಲ್ಲಿ ಗುರುವಾರ ಮುಂಜಾನೆಯಿಂದಲೇ ಮೋಡಕವಿದ ವಾತಾವರಣವಿದ್ದು ಮಧ್ಯಾಹ್ನದ ನಂತರ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದಿನ (ಮೇ 23, ಗುರುವಾರ) ಕನಿಷ್ಠ ತಾಪಮಾನ 23.0°C ಇದ್ದರೆ, ಗರಿಷ್ಠ ತಾಪಮಾನ 31.0°C ಎನ್ನಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru Rain) ದಿನವಿಡೀ ಭಾಗಶಃ ಮೋಡಕವಿದ ವಾತಾವರಣ ಮುಂದುವರೆಯಲಿದ್ದು ಸಂಜೆ ವೇಳೆಗೆ ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ- ಬೆಂಗಳೂರು ಮಳೆ ಎಫೆಕ್ಟ್: ಸಿಟಿ ರೌಂಡ್ಸ್ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಕರ್ನಾಟಕ ಮಳೆ ನವೀಕರಣ (Karnataka Rain Update):
ಮುಂದಿನ ನಾಲ್ಕೈದು ದಿನಗಳಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ (Heavy Rain) ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಈ ಭಾಗಗಳಲ್ಲಿ ಭಾರೀ ಮಳೆ ನಿರೀಕ್ಷೆ:
ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ (Bengaluru), ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ- ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ಪಾಕಿಸ್ತಾನ, ಶ್ರೀಲಂಕಾ & ಅಮೆರಿಕ ದೇಶಗಳ ಹಣ!
ಈ ಭಾಗಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಭಾರೀ ಮಳೆ:
ಮುಂದಿನ ಐದು ದಿನಗಳಲ್ಲಿ ಕರಾವಳಿ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.