ಬೆಂಗಳೂರು: ಮಹಾಮಾರಿ ಕೋವಿಡ್-19 ಮತ್ತೆ ಉಲ್ಬಣಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಕಳಕಳಿಯಿಂದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಹೆಚ್ಚಾಗುತ್ತಿರುವ ಸ್ಮೋಕಿಂಗ್ ಮತ್ತು ಗುಟ್ಕಾ ಸೇವನೆಗೆ ಕಡಿವಾಣ ಹಾಕಲು ಮುಂದಾಗಿದೆ.


COMMERCIAL BREAK
SCROLL TO CONTINUE READING

ಸಾರ್ವಜನಿಕ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಸ್ಮೋಕಿಂಗ್ ಮತ್ತು ಗುಟ್ಕಾ ಸೇವನೆ ಮಾಡುವವರ ಸಂಖ್ಯೆಯನ್ನು ನಿಯಂತ್ರಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ತರಾಟೆಗೆ ತೆಗೆದುಕೊಂಡಿರುವ ಸಿವಿಲ್ ನ್ಯಾಯಧೀಶ ರಾಘವೇಂದ್ರ ಶೆಟ್ಟಿಗಾರ್, ಸ್ಮೋಕಿಂಗ್ ಮತ್ತು ಗುಟ್ಕಾ ಸೇವನೆ ಕೂಡಲೇ ನಿಯಂತ್ರಿಸಬೇಕು. ಅದಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಸ್ಮೋಕಿಂಗ್ ಮತ್ತು ಗುಟ್ಕಾ ಸೇವನೆ ಮಾಡುವವರ ಮೇಲೆ ಕೋಟ್ಪಾ ಕಾಯ್ದೆ ಅನುಷ್ಠಾನ ಮಾಡುವಂತೆ  ಸೂಚನೆ ನೀಡಿದ್ದಾರೆ.


ನಗರದಲ್ಲಿ ಧೂಮಪಾನ ಮಾಡದ ಮಕ್ಕಳು, ಮಹಿಳೆಯರು ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಸಲುವಾಗಿ ಕೋಟ್ಟಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಮಂಡಳಿ ಉಪಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಘವೇಂದ್ರ ಶೆಟ್ಟಿಗಾರ್ ತಿಳಿಸಿದ್ದಾರೆ.


ಇದನ್ನೂ ಓದಿ- ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಇಂದು ಸಿದ್ದರಾಮಯ್ಯ ಚಾಲನೆ


ನಗರದ ದಕ್ಷಿಣ ವಲಯ ಕಚೇರಿ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಕೋಟ್ಟಾ  ಕಾಯ್ದೆ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ‌ದಂಡ‌ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು, ಮುಂದಿನ ಪೀಳಿಗೆಗೆ ಉತ್ತಮ ಸಮಾಜವನ್ನು ನಿರ್ಮಿಸಲು ನಾವೆಲ್ಲರೂ ಕೈಜೋಡಿಸಬೇಕೆಂದು ಹೇಳಿದ್ದಾರೆ.


ಸಿವಿಲ್ ನ್ಯಾಯಧೀಶರ ಸೂಚನೆ ಹಿನ್ನೆಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಾಗೃತದಳ ರಚನೆ ಮಾಡಲು ಮುಂದಾಗಿದೆ. ಜಾಗೃತ ದಳವು ಇನ್ನು ಮುಂದೆ ನಗರದ ರಸ್ತೆಯಲ್ಲಿ ಸ್ಮೋಕಿಂಗ್ ಮಾಡುವವರು ಮತ್ತು ತಂಬಾಕು ತಿಂದು ಉಗಿಯುವವರ ಮೇಲೆ ನಿಗಾ ಇಡಲಿದೆ. ಸ್ಮೋಕಿಂಗ್ ಮಾಡುತ್ತಾ ಸಿಕ್ಕಿಬಿದ್ದರೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವಾಗ ಸಿಕ್ಕಿಬಿದ್ದರೆ ಕೊಟ್ಪಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗುತ್ತದೆ.


ಇದನ್ನೂ ಓದಿ- ದೇವಸ್ಥಾನವನ್ನೆ ಬಾರ್ ಅಂಡ್ ರೆಸ್ಟೋರೆಂಟ್ ಮಾಡಿಕೊಂಡ ಕಿಡಿಗೇಡಿಗಳು..!


ಸಾರ್ವಜನಿಕ ಪ್ರದೇಶಗಳಲ್ಲಿ ಹೆಚ್ಚಾಗುತ್ತಿರುವ ಸ್ಮೋಕಿಂಗ್ ಸೇವನೆ ಮಾಡುವವರ ಮೇಲೆ ಮತ್ತು ಗುಟ್ಕಾ ಸೇವನೆ ಮಾಡುವವರ ಮೇಲೆ ಕೊಟ್ಪಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗುತ್ತದೆ ಎಂಬ ಬಗ್ಗೆ ಹಿರಿಯ ಪೋಲಿಸ್ ಅಧಿಕಾರಿ ಬದ್ರಿನಾಥ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇದಲ್ಲದೆ ರಸ್ತೆ ಬದಿಯ ಸಣ್ಣ ಸಣ್ಣ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುವರ ಮೇಲೆ, ನಗರದ ಹುಕ್ಕಾಬಾರ್, ಬಾರ್ ಅಂಡ್ ರೆಸ್ಟೋರೆಟ್, ತಂಬಾಕು ಉತ್ಪನ್ನ ಮಾರಾಟಗಾರರು ಕಾಯ್ದೆ ಉಲ್ಲಂಘಿಸಿರುವ ವಿರುದ್ಧ ಕ್ರಮ ಜರುಗಿಸಲು ಸೂಚನೆ ನೀಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.