ಬೆಂಗಳೂರು : ಬಿಡಿಎ ನಿರ್ಮಾಣ ಮಾಡುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಹಾಗೂ ಉದ್ದೇಶಿತ MAR ಗೆ ಭೂಸ್ವಾಧೀನಪಡಿಸಿಕೊಂಡಿರುವ ಪ್ರದೇಶವನ್ನು ಕಂದಾಯ ನಿವೇಶನದಾರರು ಅನಧಿಕೃತವಾಗಿ ಒತ್ತು ಮಾಡಿಕೊಂಡಿರುವ ಸುಮಾರು 5 ಎಕರೆ ಜಮೀನನ್ನು ತೆರವುಗೊಳಿಸಿದ್ದಾರೆ. ಅಲ್ಲದೇ ಆ ಜಾಗವನ್ನ ಇಂದು ಬೆಂಗಳೂರು ಅಭಯ ಪ್ರಾಧಿಕಾರವು ತನ್ನ ವಶಕ್ಕೆ ಪಡೆದುಕೊಂಡಿದೆ.


COMMERCIAL BREAK
SCROLL TO CONTINUE READING

ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಚಲ್ಲಘಟ್ಟ ಗ್ರಾಮದ ಸರ್ವೆ ನಂ. 4 ಮತ್ತು 8 ಅನ್ನು ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಹಾಗೂ ಉದ್ದೇಶಿತ MAR ಗೆ ಭೂಸ್ವಾಧೀನಪಡಿಸಿಕೊಂಡಿದ್ದು, ಇದರಲ್ಲಿ ಅನಧಿಕೃತವಾಗಿ ಕಂದಾಯ ನಿವೇಶನದಾರರು ಒತ್ತುವರಿ ಮಾಡಿಕೊಂಡು ಕಾಮಗಾರಿಗೆ ಅಡಚಣೆ ಉಂಟುಮಾಡುತ್ತಿದ್ದರಿಂದ ಸುಮಾರು 5 ಎಕರೆ ಜಮೀನನ್ನು ತೆರವುಗೊಳಿಸಿ ಪ್ರಾಧಿಕಾರವು ತನ್ನ ಸುಪರ್ಧಿಗೆ ತೆಗೆದುಕೊಂಡಿದೆ. ಇದರಿಂದ ರಸ್ತೆಯನ್ನು ನಿರ್ಮಿಸಲು ಅನುಕೂಲವಾಗುತ್ತದೆ.


ಇದನ್ನೂ ಓದಿ: ಹಾಡಹಗಲೇ ಹಣ ಸುಲಿಗೆ ಮಾಡಿದ ಖದೀಮರ ಗ್ಯಾಂಗ್‌..! ದೃಶ್ಯ ಸಿಸಿಟಿವಿಯಲ್ಲಿ ಸೆರೆ


ಈ ಕಾರ್ಯಾಚರಣೆಯನ್ನು ಪ್ರಾಧಿಕಾರದ ಆರಕ್ಷಕ ಅಧೀಕ್ಷಕರಾದ ಶ್ರೀ ಕೆ. ನಂಜುಂಡೇಗೌಡ ಅವರ ನೇತೃತ್ವದೊಂದಿಗೆ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರರಾದ ಶ್ರೀ ಅಶೋಕ್, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಸಿಬ್ಬಂದಿಯವರೊಡನೆ ಸ್ಥಳೀಯ ಪೊಲೀಸ್ ಇನ್ಸ್ ಪೆಕ್ಟರ್ ಆದ ಶ್ರೀ ಶಿವಾರೆಡ್ಡಿರವರ ಸಹಕಾರದೊಂದಿಗೆ ನೆರವೇರಿಸಲಾಯಿತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.