ಬೆಂಗಳೂರು ಸಮಗ್ರ ಅಭಿವೃದ್ದಿ: ಅಭಿಪ್ರಾಯ, ಸಲಹೆ ನೀಡುವ ಅವಧಿ ಜುಲೈ 15ಕ್ಕೆ ವಿಸ್ತರಣೆ
ನಗರ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರಿಂದ ಅಭಿಪ್ರಾಯ, ಅನಿಸಿಕೆ, ಸಲಹೆಗಳನ್ನು ಸಂಗ್ರಹಿಸುವ ಅವಧಿಯನ್ನು ಇದೇ ತಿಂಗಳ ೧೫ರವರೆಗೆ ವಿಸ್ತರಿಸಲಾಗಿದೆ.
ಬೆಂಗಳೂರು: ನಗರ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರಿಂದ ಅಭಿಪ್ರಾಯ, ಅನಿಸಿಕೆ, ಸಲಹೆಗಳನ್ನು ಸಂಗ್ರಹಿಸುವ ಅವಧಿಯನ್ನು ಇದೇ ತಿಂಗಳ ೧೫ರವರೆಗೆ ವಿಸ್ತರಿಸಲಾಗಿದೆ.
ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿ ಹಾಗೂ ಬ್ರ್ಯಾಂಡ್ ಬೆಂಗಳೂರು ಮಾಡುವ ಉದ್ದೇಶದಿಂದ ಈಗಾಗಲೇ ಸರ್ವಪಕ್ಷ ಶಾಸಕರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಜತೆ ಸಭೆ ನಡೆಸಿ ಅಭಿಪ್ರಾಯ, ಸಲಹೆಗಳನ್ನು ಪಡೆದಿದ್ದಾರೆ.
ಇದನ್ನೂ ಓದಿ: ಕೆಸಿಎನ್ ಮೋಹನ್ ನಿಧನಕ್ಕೆ ಸಚಿವ ಶಿವರಾಜ್ ತಂಗಡಗಿ ಶೋಕ..!
ನಾಗರಿಕರಿಂದ ಸಲಹೆ ಪಡೆಯುವ ಉದ್ದೇಶದಿಂದ ಪ್ರತ್ಯೇಕ ವೆಬ್ ಪೋರ್ಟಲ್ ಅನ್ನು http://brandbengaluru.karnataka.gov.in ಬಿಡುಗಡೆಗೊಳಿಸಿ ಕಳೆದ ಜೂನ್ ೩೦ ರವರೆಗೆ ಸಲಹೆಗಳನ್ನು ನೀಡುವಂತೆ ಕೋರಲಾಗಿತ್ತು. ಅದರಂತೆ, ನಾಗರಿಕರಿಂದ ನಿರೀಕ್ಷೆಗೂ ಮೀರಿ ಅನಿಸಿಕೆ, ಸಲಹೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಇದೇ ೧೫ ರವರೆಗೆ ವಿಸ್ತರಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.