ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ ಗಾಳಿಗೆ ತೂರಿದ್ದಾರೆ-ಸಿಎಂ ಸಿದ್ದರಾಮಯ್ಯ

ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Written by - Zee Kannada News Desk | Last Updated : Dec 16, 2023, 07:59 PM IST
  • ಮಹಿಳೆಯು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಂದರ್ಶಕರ ಭೇಟಿಯು ಆಕೆಯ ಆರೋಗ್ಯ ಹಾಗೂ ಚಿಕಿತ್ಸೆಯ ಮೇಲೆ ಪರಿಣಾಮ ಬೀರಲಿದೆ.
  • ಹಾಗಾಗಿ, ಮಹಿಳೆಯ ಹಿತದೃಷ್ಟಿಯಿಂದ ಸಂದರ್ಶಕರ ಭೇಟಿಯನ್ನು ನಿರ್ಬಂಧಿಸುವುದು ಅಗತ್ಯ ಎಂದು ತಾನು ಭಾವಿಸುವುದಾಗಿ ಹೈಕೋರ್ಟ್ ಹೇಳಿದೆ.
 ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ ಗಾಳಿಗೆ ತೂರಿದ್ದಾರೆ-ಸಿಎಂ ಸಿದ್ದರಾಮಯ್ಯ  title=

ಬೆಂಗಳೂರು: ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಹೈಕೋರ್ಟ್ ನ ನಿರ್ಬಂಧದ ಹೊರತಾಗಿಯೂ ದುರುಳರಿಂದ ದೌರ್ಜನ್ಯಕ್ಕೆ ಒಳಗಾಗಿರುವ  ಬೆಳಗಾವಿಯ ಸಂತ್ರಸ್ತ ಮಹಿಳೆಯನ್ನು ಭೇಟಿ‌ಮಾಡುವ ಮೂಲಕ ಬಿಜೆಪಿ ನಾಯಕರು ನ್ಯಾಯಾಲಯದ ಸೂಚನೆಯನ್ನು ಉಲ್ಲಂಘಿಸಿ ಅಗೌರವಿಸಿರುವುದು ಮಾತ್ರ ಅಲ್ಲ ತಮ್ಮ ಅಸೂಕ್ಷ್ಮತೆಯನ್ನು‌ ಮೆರೆದಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಂತ್ರಸ್ತ ಮಹಿಳೆಯು ಮಾನಸಿಕವಾಗಿ ತೀವ್ರವಾಗಿ ಜರ್ಝರಿತರಾಗಿರುವ ಹಿನ್ನೆಲೆಯಲ್ಲಿ ಹಾಗೂ ಮಾನಸಿಕ ಆಘಾತದಲ್ಲಿರುವ ಈ ಸಂದರ್ಭದಲ್ಲಿ ಆಕೆಯ ಭೇಟಿಗೆ ಅಗಮಿಸುವವರನ್ನು ನಿರ್ಬಂಧಿಸಬೇಕು ಎಂದು  ಹೈಕೋರ್ಟ್  ಮುಖ್ಯನ್ಯಾಯಾಧೀಶರು ಸ್ವಯಂಪ್ರೇರಿತರಾಗಿ ಇಂದು ಬೆಳಿಗ್ಗೆ ಸೂಚಿಸಿದ್ದರು. ರಾಜಕೀಯ ನಾಯಕರು ಸಂತ್ರಸ್ತ ಮಹಿಳೆಯನ್ನು‌ ಭೇಟಿಯಾಗುವ ಸುದ್ದಿಯ ಹಿನ್ನೆಲೆಯಲ್ಲಿಯೇ ಮುಖ್ಯನ್ಯಾಯಾಧೀಶರು ಈ ಸೂಚನೆ ನೀಡಿರುವುದು‌ ಗಮನಾರ್ಹ ಎಂದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ!

ಮಹಿಳೆಯು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಂದರ್ಶಕರ ಭೇಟಿಯು ಆಕೆಯ ಆರೋಗ್ಯ ಹಾಗೂ ಚಿಕಿತ್ಸೆಯ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ, ಮಹಿಳೆಯ ಹಿತದೃಷ್ಟಿಯಿಂದ ಸಂದರ್ಶಕರ ಭೇಟಿಯನ್ನು ನಿರ್ಬಂಧಿಸುವುದು ಅಗತ್ಯ ಎಂದು ತಾನು ಭಾವಿಸುವುದಾಗಿ ಹೈಕೋರ್ಟ್ ಹೇಳಿದೆ.ಯಾವುದೇ ವ್ಯಕ್ತಿ, ಸಮೂಹ, ಗುಂಪು, ಸಂಘಟನೆ, ರಾಜಕೀಯ ಪಕ್ಷಗಳು ಹಾಗೂ ಇನ್ನಿತರರು ಮಹಿಳೆಯ ಚಿಕಿತ್ಸೆಯ ಹೊಣೆ ಹೊತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯವರ ಪೂರ್ವ ಲಿಖಿತ ಅನುಮತಿ ಇಲ್ಲದೇ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಬಾರದು ಎಂದು ಹೈಕೋರ್ಟ್ ಆದೇಶಿಸಿತ್ತು.ಹೀಗಿದ್ದರೂ ಒಂದು‌ ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂತ್ರಸ್ತೆಯ ಸೂಕ್ಷ್ಮ ಮಾನಸಿಕ ಸ್ಥಿತಿಯ ಬಗ್ಗೆ ಎಳ್ಳಷ್ಟೂ ಗೌರವವಿಲ್ಲದ ಸಂವೇದನಾಶೂನ್ಯ ಬಿಜೆಪಿ ನಾಯಕರು ಹಾಗೂ ಅವರ ಬೆನ್ನಿಗೆ ನಿಂತು ಚಿತಾವಣೆ ನಡೆಸುತ್ತಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ನಡೆ-ನುಡಿಯನ್ನು ನಾಗರಿಕ‌ ಸಮಾಜ ಖಂಡಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News