Bengaluru Cylinder Blast: ಯಲಹಂಕದಲ್ಲಿ ಸಿಲಿಂಡರ್ ಸ್ಫೋಟ: 5 ಮನೆ ಗೋಡೆ ಕುಸಿತ.. ಇಬ್ಬರ ಸ್ಥಿತಿ ಚಿಂತಾಜನಕ

ಸಿಲಿಕಾನ್ ಸಿಟಿ ಬೆಂಗಳೂರಿನ ಯಲಹಂಕದಲ್ಲಿ ಸಿಲಿಂಡರ್ ಸ್ಫೋಟಗೊಂಡು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

Written by - Yashaswini V | Last Updated : Jan 16, 2024, 12:17 PM IST
  • ಯಲಹಂಕದಲ್ಲಿ ಸಿಲಿಂಡರ್ ಸ್ಫೋಟ
  • ಸಿಲಿಂಡರ್ ಸ್ಫೋಟಕ್ಕೆ ಗೋಡೆ ಕುಸಿತ
  • ಈ ದುರ್ಘಟನೆಯಲ್ಲಿ ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕ
Bengaluru Cylinder Blast: ಯಲಹಂಕದಲ್ಲಿ ಸಿಲಿಂಡರ್ ಸ್ಫೋಟ: 5 ಮನೆ ಗೋಡೆ ಕುಸಿತ.. ಇಬ್ಬರ ಸ್ಥಿತಿ ಚಿಂತಾಜನಕ title=

Bengaluru Cylinder Blast: ಬೆಂಗಳೂರಿನ ಯಲಹಂಕದಲ್ಲಿ ಮಂಗಳವಾರ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ  ಐದು ಮನೆಗಳಿಗೆ ಹಾನಿಯಾಗಿದ್ದು ಈ ದುರ್ಘಟನೆಯಲ್ಲಿ ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ. 

ಈ ದುರ್ಘಟನೆಯಲ್ಲಿ ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಗಾಯಾಳುಗಳು ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ- "ಮನುಷ್ಯರನ್ನು ಜಾತಿ-ಧರ್ಮದ ಆಧಾರದಲ್ಲಿ ದ್ವೇಷಿಸುವುದು ಅಮಾನವೀಯವಾದದ್ದು"

ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರದೃಷ್ಟಕರ ಘಟನೆ ನಡೆದಿದ್ದು, ಯಲಹಂಕದ ಲಾಲ್ ಬಹದ್ದೂರ್ ಶಾಸ್ತ್ರಿ ಲೇಔಟ್‌ನಲ್ಲಿರುವ ನಿವಾಸದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ಪರಿಣಾಮವಾಗಿ ಅಕ್ಕಪಕ್ಕದ ಐದು ಮನೆಗಳಿಗೆ ಹಾನಿಯಾಗಿದೆ. 

ಇದನ್ನೂ ಓದಿ- ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ 21 ಅಡಿ ನಂದಿ, 54 ಅಡಿ ಮಹಾಶೂಲದ ಪ್ರತಿಷ್ಠಾಪನೆ

ಗಾಯಗೊಂಡ ಐವರನ್ನು ವಸಿಯಾ ಬಾನು, ಸಲ್ಮಾ, ಶಹೀದ್, ಅಸ್ಮಾ ಮತ್ತು ಅಫ್ರೋಜ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ. ಸದ್ಯ ಯಲಹಂಕ ನ್ಯೂ ಟೌನ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News