Dengue: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಹಾವಳಿ ಹೆಚ್ಚಾಗುತ್ತಿದೆ. ಅದರಲ್ಲೂ, ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Silicon City Bengaluru) ಡೆಂಗ್ಯೂ ಆರ್ಭಟಿಸುತ್ತಿದೆ. ಈ ಹಿನ್ನಲೆಯಲ್ಲಿ ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದ ಹಾಗೆ ಜನರಿಗೆ ಅರಿವು ಮೂಡಿಸಲು ಪಾಲಿಕೆ ಪ್ಲಾನ್ ಮಾಡಿದೆ.
ಹೌದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು (Dengue Cases) ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಡೆಂಗ್ಯೂಗೆ ಕಡಿವಾಣ ಹಾಕಲು ಮುಂದಾಗಿರುವ ಬಿಬಿಎಂಪಿ (BBMP) ಈಗಾಗಲೇ ಸಾಲು ಸಾಲು ಮೀಟಿಂಗ್ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದೆ.
ಇಂದಿನಿಂದ ಜೋನ್ ವೈಸ್ ಡೋರ್ ಟೂ ಡೋರ್ ಸಿಬ್ಬಂದಿ ಸಮೀಕ್ಷೆ:
ಆರ್ಭಟಿಸುತ್ತಿರುವ ಡೆಂಘಿಗೆ ಕಡಿವಾಣ ಹಾಕಲು ಇಂದಿನಿಂದ ಮನೆ ಮನೆ ಸಮೀಕ್ಷೆ ಸಮೀಕ್ಷೆ ನಡೆಸಲು ಸೂಚನೆ ನೀಡಿರುವ ಪಾಲಿಕೆ ಆಯುಕ್ತರು, ಮನೆಗಳಿಗೆ ವಿಸಿಟ್ ಮಾಡಿ ನೀರು ನಿಲ್ಲದ ಹಾಗೇ ಕ್ರಮ ಕೈಗೊಳ್ಳುವುದರ ಜೊತೆಗೆ ಡೆಂಗ್ಯೂ (Dengue) ಬಗ್ಗೆ ಅರಿವು ಮೂಡಿಸಲು ಸೂಚಿಸಿದ್ದಾರೆ.
ಇದನ್ನೂ ಓದಿ- National Dengue Day 2024 : ಮಾರಕ ಡೆಂಗ್ಯೂ ನಿಯಂತ್ರಣಕ್ಕೆ ಇಲ್ಲಿವೆ ಸರಳ ಉಪಾಯಗಳು..!
ಡೆಂಗ್ಯೂ ಅಬ್ಬರಕ್ಕೆ ಬ್ರೇಕ್ ಹಾಕಲು ಪಾಲಿಕೆ ಕಸರತ್ತು:
ಇನ್ನೂ ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಅಬ್ಬರಕ್ಕೆ ಬ್ರೇಕ್ ಹಾಕಲು ಕಸರತ್ತು ನಡೆಸಿರುವ ಪಾಲಿಕೆ ಅಧಿಕಾರಿಗಳಿಗೆ ಫ್ರೈ ಡೇ ಟಾಸ್ಕ್ ನೀಡಿದೆ. ಆಯಾ ವಲಯ ವ್ಯಾಪ್ತಿಯಲ್ಲಿ ಸಿಬ್ಬಂದಿಗೆ ಟಾಸ್ಕ್ ನೀಡಲಾಗಿದ್ದು, ಆರೋಗ್ಯ ಪರಿವೀಕ್ಷರು, ಆಶಾ ಕಾರ್ಯಕರ್ತೆಯರು, ಎ.ಎನ್.ಎಂ ಗಳು, ಲಿಂಕ್ ವರ್ಕರ್ಸ್ಗಳು ಇದರಲ್ಲಿ ಭಾಗಿಯಾಗಲಿದ್ದಾರೆ.
ಪ್ರತಿ ಶುಕ್ರವಾರ ಅಧಿಕಾರಿಗಳಿಂದ ಮನೆ ಮನೆ ಭೇಟಿ!
ಡೆಂಗ್ಯೂ ಅಬ್ಬರಕ್ಕೆ ಬ್ರೇಕ್ ಹಾಕಲು ಕ್ರಮ ಕೈಗೊಂಡಿರುವ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 28 ಲಕ್ಷ ಮನೆಗಳ ಪೈಕಿ, 14 ಲಕ್ಷ ಮನೆಗಳು ಗುರುತು ಮಾಡಲಾಗಿದೆ. ಇದರಲ್ಲಿ ಬಡ ವರ್ಗವಿರುವ ಪ್ರದೇಶ, ಜನ ಸಂಖ್ಯೆ ಹೆಚ್ಚಿರುವ ಪ್ರದೇಶ ಹಾಗೂ ತಗ್ಗು ಪ್ರದೇಶಗಳಲ್ಲಿರುವ ಈ 14 ಲಕ್ಷ ಮನೆಗಳಿಗೆ ವಾರಕ್ಕೊಮ್ಮೆ ಭೇಟಿ ನೀಡುವಂತೆ ಹಾಗೂ ಡೆಂಗ್ಯೂ ತಡೆಗಟ್ಟಲು ಲಾರ್ವಾ ಉತ್ಪತ್ತಿ ತಾಣಗಳ ಬಗ್ಗೆ ನಾಗರೀಕರಲ್ಲಿ ಜಾಗೃತಿ ಮೂಡಿಸಲು ಪಾಲಿಕೆ ಅಧಿಕಾರಿಗಳಿಗೆ ಫ್ರೈಡೆ ಟಾಸ್ಕ್ ನೀಡಲಾಗಿದೆ.
ಈ ಸಿಬ್ಬಂದಿಗೆ 1000 ಮನೆಗಳಿಗೊಂದು ಬ್ಲಾಕ್ ರಚನೆ ಮಾಡಲಾಗಿದ್ದು, ಲಾರ್ವಾ ಇರುವ ತಾಣಗಳನ್ನು ಗುರುತಿಸುವುದು, ನಾಗರೀಕರಲ್ಲಿ ಅರಿವು ಮೂಡಿಸುವುದು, ಯಾರಿಗಾದರು ಜ್ವರ ಬಂದಿದ್ದಲ್ಲಿ ಅಂತಹವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಮಾಡಿಸಕೊಳ್ಳಲು ತಿಳಿಸುವುದು. ಸಮಗ್ರವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಏನಿದು ಲಾರ್ವಾ?
ಎಲ್ಲಾದರೂ ದೀರ್ಘ ಸಮಯದವರೆಗೆ ನೀರು ನಿಂತಿದ್ದರೆ ನೀರಿದ್ದರೆ ಲಾರ್ವಾ ಉತ್ಪತ್ತಿಯಾಗಿ ಸೊಳ್ಳೆಗಳ (Mosquitoes) ಸಂಖ್ಯೆ ದ್ವಿಗುಣ ಸಾಧ್ಯತೆ ಇರುತ್ತದೆ. ಹಾಗಾಗಿ ಸೊಳ್ಳೆಗಳನ್ನು ನಿಯಂತ್ರಿಸಲು ಲಾರ್ವಾ ಉತ್ಪತ್ತಿಯಾಗುವ ತಾಣ ನಾಶಪಡಿಸಬೇಕು. ಮನೆಯಲ್ಲಿರುವ ಸಲಕರಣೆಗಳಲ್ಲಿ ಹೆಚ್ಚು ದಿನಗಳ ಕಾಲ ನೀರಿರದಂತೆ ನೋಡಿಕೊಳ್ಳಬೇಕು.
ಇದನ್ನೂ ಓದಿ- ಡೆಂಗ್ಯೂ ಮತ್ತು ಚಿಕೂನ್ಗುನ್ಯಾ ಹೆಚ್ಚಳ; ತಡೆಗಟ್ಟುವ ವಿಧಾನವನ್ನು ತಿಳಿಯಿರಿ
ಡೆಂಗ್ಯೂ ರೋಗ ಲಕ್ಷಣಗಳು (Dengue Symptoms) :
-ಡೆಂಗ್ಯೂ ಜ್ವರ ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡಬಹುದು.
-ಡೆಂಗ್ಯೂವನ್ನು ಹೆಮರಾಜಿಕ್ ಜ್ವರ ಎಂದೂ ಕರೆಯಲಾಗುತ್ತದೆ.
-ಅಧಿಕ ಜ್ವರ, ತೀವ್ರ ತಲೆನೋವು, ವಾಂತಿ,
-ದೇಹದ ವಿವಿಧ ಭಾಗಗಳಲ್ಲಿ ದದ್ದುಗಳು, ಗ್ರಂಥಿಗಳಲ್ಲಿ ಊತ, ಮೂಳೆ ಮತ್ತು ಕೀಲು ನೋವು, ರಕ್ತಸ್ರಾವ ಲಕ್ಷಣ
-ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಕುಸಿತದಂತಹ ಲಕ್ಷಣಗಳನ್ನು ಹೊಂದಿರುತ್ತದೆ.
ಡೆಂಗ್ಯೂ ಹರಡುವುದೇಗೆ (Dengue Transmission)?
-ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು
-ಇದು ಈಡಿಪಸ್ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ
-ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ.
-ಇದರ ಪ್ರಭಾವ ಹತ್ತು ದಿನಗಳವರೆಗೆ ಇರುತ್ತದೆ.
ಮುಂಜಾಗ್ರತಾ ಕ್ರಮ ಏನು?
-ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು ಅಗತ್ಯ
-ಸ್ವಚ್ಛತೆಗೆ ಆದ್ಯತೆ ನೀಡುವುದು
-ನೀರು ನಿಲ್ಲುವ ಹೂವಿನ ಕುಂಡ, ಟೈರ್, ತೆರೆದಿಡುವ ನೀರಿನ ಟ್ಯಾಂಕ್ ಕ್ಲೀನ್ ಮಾಡಬೇಕು
-ಮಳೆ ಬಂದು ಹೋದ ಮೇಲೆ ಸ್ವಚ್ಛತೆಗೆ ಆದ್ಯತೆ ಕೊಡಬೇಕು
-ಈ ಬಾರಿ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು ಇದು ಸಹ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತಿದೆ.
-ರೋಗನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು, ಗರ್ಭಿಣಿಯರು, ವೃದ್ಧರು, ರೋಗಿಗಳು ಎಚ್ಚರಿಕೆಯಿಂದ ಇರಬೇಕಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.