Dharwad Bengaulru Vande Bharat Express: ಭಾರತೀಯ ರೈಲ್ವೆಯಲ್ಲಿಯೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ರವರು ಜೂನ್ 27 ರಂದು ಧಾರವಾಡ-ಕೆಎಸ್‌ಆರ್ ಬೆಂಗಳೂರು ನಗರಗಳ ನಡುವಿನ ಕರ್ನಾಟಕ ರಾಜ್ಯದ ಎರಡನೇ ವಂದೇ ಭಾರತ್ ರೈಲು ಸೇರಿದಂತೆ ಒಂದೇ ದಿನದಲ್ಲಿ ಐದು ವಂದೇ ಭಾರತ್ ಎಕ್ಸ್‌ಪ್ರೆಸ್ ಸೆಮಿ-ಹೈ ಸ್ಪೀಡ್ ರೈಲುಗಳನ್ನು ಆನ್ ಲೈನ್ ಮುಖಾಂತರ ಉದ್ಘಾಟಿಸಲಿದ್ದಾರೆ.
ಧಾರವಾಡ - ಬೆಂಗಳೂರು ವಂದೇ ಭಾರತ್ ರೈಲಿಗೆ ಇಂದು ಅಧಿಕೃತ ಚಾಲನೆ ದೊರೆಯಲಿದ್ದು ಧಾರವಾಡ - ಬೆಂಗಳೂರು ಸೇರಿ ದೇಶದ ಒಟ್ಟು ಐದು ರೈಲುಗಳಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವರ್ಚ್ಯೂವಲ್ ಮೂಲಕ ಚಾಲನೆ ನೀಡಲಿದ್ದಾರೆ. ಭೂಪಾಲದ ರಾಣಿ ಕಮಲಾಪಥಿ ರೈಲ್ವೇ ನಿಲ್ದಾಣದಿಂದ ಪ್ರಧಾನಿ ಮೋದಿ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ.
ದಕ್ಷಿಣ ಭಾರತದ ಮೊತ್ತ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಆದ ಮೈಸೂರು-ಚೆನ್ನೈ ಮಾರ್ಗದಲ್ಲಿನ ಸೆಮಿ-ಹೈ-ಸ್ಪೀಡ್ ರೈಲಿನೊಂದಿಗೆ ಕರ್ನಾಟಕ ಈಗಾಗಲೇ ತನ್ನ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಪಡೆದಿದೆ. ಇದೀಗ ಧಾರವಾಡ-ಕೆಎಸ್‌ಆರ್ ಬೆಂಗಳೂರು ನಗರಗಳ ನಡುವಿನ ಗಾಡಿಯು ಸಂಪೂರ್ಣವಾಗಿ ಕರ್ನಾಟಕದಲ್ಲಿಯೇ ಸಂಚರಿಸಲಿದ್ದು ಇದು ಮೊದಲ ಅಂತರ್ ರಾಜ್ಯ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಲಿದೆ. ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಯಶವಂತಪುರ, ದಾವಣಗೆರೆ ಮತ್ತು ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿವೆ.
ಇದನ್ನೂ ಓದಿ- Bakrid Festival: ಬಕ್ರೀದ್ ಹಬ್ಬ/ಧಾರ್ಮಿಕ ಆಚರಣೆಗಳಲ್ಲಿ ಅನಧಿಕೃತ ಪ್ರಾಣಿವಧೆ ನಿಷೇಧ
ಉದ್ಘಾಟನಾ ವಿಶೇಷ ರೈಲು ಗಾಡಿಯು ಜೂನ್ 27 ರಂದು ಬೆಳಗ್ಗೆ 10:35 ಗಂಟೆಗೆ ಧಾರವಾಡ ರೈಲು ನಿಲ್ದಾಣದಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ ಮತ್ತು ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತಿಪಟೂರು, ಅಮ್ಮಸಂದ್ರ, ತುಮಕೂರು, ದೊಡ್ಡಬೆಲೆ, ಚಿಕ್ಕಬಾಣಾವರ ಮತ್ತು ಯಶವಂತಪುರ ಜಂ. ಮಾರ್ಗವಾಗಿ ಜೊತೆಯಲ್ಲಿ ಲಗತ್ತಿಸಲಾದ ವೇಳಾಪಟ್ಟಿಯ ಪ್ರಕಾರ ಚಲಿಸಿ ತನ್ನ ಗಮ್ಯಸ್ಥಾನವನ್ನು ತಲುಪುತ್ತದೆ. ಲಭ್ಯವಿರುವ ಮಾಹಿತಿಗಳ ಪ್ರಕಾರ, ಸಂಜೆ 6:40ಕ್ಕೆ ಈ ವಂದೇ ಭಾರತ್ ರೈಲು ಬೆಂಗಳೂರು ತಲುಪಲಿದೆ.
ಇದನ್ನೂ ಓದಿ- CM Siddaramaiah: ಬಡಜನರಿಗೆ ಅನ್ನ ನೀಡುವ ಸಾರ್ಥಕ ಉದ್ದೇಶದಿಂದ ರೂಪಿಸಿದ ಯೋಜನೆ ಅನ್ನಭಾಗ್ಯ : ಸಿಎಂ ಸಿದ್ದರಾಮಯ್ಯ
ರಾಜ್ಯದ ರಾಜಧಾನಿ ಬೆಂಗಳೂರು ಮತ್ತು ಧಾರವಾಡ ನಗರಗಳನ್ನು ತ್ವರಿತವಾಗಿ ಸೇರಿಸಿ ಸಂಪರ್ಕವನ್ನು ಒದಗಿಸುವ ಈ ರೈಲಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ನೈಋತ್ಯ ರೈಲ್ವೆ ಹಿರಿಯ ವಿಭಾಗೀಯ ಕಾರ್ಯಾಚರಣೆ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಲೋಹಿತೇಶ್ವರ ಮನವಿ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.