ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ನಂತರ ಭಯದ ವಾತಾವರಣ ದೂರವಾಗಿದೆ : ಡಿಸಿಎಂ

ಬಿಜೆಪಿ ಸರ್ಕಾರ ಅಮಾಯಕ ಅಲ್ಪಸಂಖ್ಯಾತರ ಮೇಲೆ ಬಡವರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿತ್ತು. ರಾಜ್ಯದ ಅಲ್ಪಸಂಖ್ಯಾತರು ಈಗ ನಿರಾಳವಾಗಿ ಉಸಿರಾಡಬಹುದು, ನಮ್ಮ ಸರ್ಕಾರ ನಿಮಗೆ ಅನ್ಯಾಯ ಮಾಡಲು ಬಿಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Written by - Prashobh Devanahalli | Edited by - Krishna N K | Last Updated : Sep 10, 2023, 06:41 PM IST
  • ಮೊದಲು ಕರ್ನಾಟಕದಲ್ಲಿ ಎಲ್ಲಾ ಧರ್ಮಿಯರೂ ಭಯದ ವಾತಾವರಣದಲ್ಲಿ ಬದುಕುತ್ತಿದ್ದರು.
  • ಬಿಜೆಪಿ ಸರ್ಕಾರ ಅಮಾಯಕ ಅಲ್ಪಸಂಖ್ಯಾತರ ಮೇಲೆ ಬಡವರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿತ್ತು.
  • ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದ ನಂತರ ಭಯದ ವಾತಾವರಣ ದೂರವಾಗಿದೆ.
ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ನಂತರ ಭಯದ ವಾತಾವರಣ ದೂರವಾಗಿದೆ : ಡಿಸಿಎಂ title=

ಬೆಂಗಳೂರು : ಮೇ 13 ಕ್ಕೆ ಮುಂಚಿತವಾಗಿ ಕರ್ನಾಟಕದಲ್ಲಿ ಎಲ್ಲಾ ಧರ್ಮಿಯರೂ ಭಯದ ವಾತಾವರಣದಲ್ಲಿ ಬದುಕುತ್ತಿದ್ದರು. ಈಗ ನಿರ್ಭಯವಾಗಿ ಬದುಕುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ರಾಜ್ಯಸಭಾ ಸದಸ್ಯರಾದ ನಾಸೀರ್ ಹುಸೇನ್ ಅವರಿಗೆ ನಗರದ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು ಬಿಜೆಪಿ ಸರ್ಕಾರ ಅಮಾಯಕ ಅಲ್ಪಸಂಖ್ಯಾತರ ಮೇಲೆ ಬಡವರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿತ್ತು, ನಾವು ಕಾನೂನು ತಜ್ಞರ ಬಳಿ ಚರ್ಚೆ ನಡೆಸಿ ಸುಳ್ಳು ಕೇಸುಗಳ ಕುರಿತು ಚರ್ಚೆ ನಡೆಸುತ್ತೇವೆ ಎಂದು ವಾಗ್ದಾನ ನೀಡಿದರು.

ಇದನ್ನೂ ಓದಿ: 70 ರಲ್ಲೂ 20 ರಂತೆ ಕಾಣಬೇಕಾ..? ಯೌವನ ಕಾಪಾಡುತ್ತದೆ ʼಬೆಲ್ಲʼ..! ಹೇಗೆ ಗೊತ್ತಾ..?

ರಾಜ್ಯದ ಅಲ್ಪಸಂಖ್ಯಾತರು ಈಗ ನಿರಾಳವಾಗಿ ಉಸಿರಾಡಬಹುದು, ನಮ್ಮ ಸರ್ಕಾರ ನಿಮಗೆ ಅನ್ಯಾಯ ಮಾಡಲು ಬಿಡುವುದಿಲ್ಲ. ಯಾವುದೇ ರೀತಿಯ ತೊಂದರೆ ಆದರೂ ನಾವು ಅಲ್ಪಸಂಖ್ಯಾತರ ಬೆನ್ನಿಗೆ ನಿಲ್ಲುತ್ತೇವೆ. ಕಾನೂನಿನ ಚೌಕಟ್ಟು ಮೀರಿ ಎಂದಿಗೂ ನಾವು ನಡೆಯುವುದಿಲ್ಲ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಯುವಜನರಿಗೆ ಹೆಚ್ಚು ಅವಕಾಶಗಳನ್ನು ನೀಡುತ್ತಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಾಸೀರ್ ಹುಸೇನ್ ಅವರದ್ದು ಸಮರ್ಥವಾದ ಆಯ್ಕೆ, ಕಾಂಗ್ರೆಸ್ ಪಕ್ಷ ನಿಷ್ಠಾವಂತ ಕಾರ್ಯಕರ್ತರನ್ನು ಎಂದಿಗೂ ಕಡೆಗಣಿಸುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ʼಕಬ್ಬಿನ ರಸʼದಲ್ಲಿ ಅಡಗಿದೆ ಸಾಕಷ್ಟು ಪೌಷ್ಟಿಕಾಂಶ..! ನೀವು ತಿಳಿಯಲೇಬೇಕಾದ ವಿಚಾರಗಳು ಇಲ್ಲಿವೆ..

ನಾವುಗಳು ಸಚಿವರಾಗಿ, ಮಂತ್ರಿಗಳಾದರೂ ಸದಸ್ಯ ಸ್ಥಾನ ಸಿಕ್ಕಿಲ್ಲ ನಿಮಗೆ ಸಿಲ್ಕಿರುವುದು ಪುಣ್ಯ. ನಿಮ್ಮ ಜ್ಞಾನ ಪಕ್ಷವನ್ನು ಬೆಳೆಸಲಿ ಹಾಗೂ ನಿಮ್ಮ ಸಲಹೆ- ಸೂಚನೆಗಳು ನಮಗೂ ಸಿಗಲಿ ಎಂದು ಆಶಿಸುತ್ತೇನೆ ಎಂದರು. ಉಳಿದಂತೆ ಅವರು ಹೇಳಿದ್ದಿಷ್ಟು.. ನಾವು ನಮ್ಮ ಪ್ರಣಾಳಿಕೆಯಲ್ಲಿ ಮಾತು ನೀಡಿದಂತೆ ಈ ರಾಜ್ಯದ ಮಕ್ಕಳಿಗೆ ಮಾರಕವಾದಂತಹ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹೋಗಲಾಡಿಸಿ ಕರ್ನಾಟಕ ಶಿಕ್ಷಣ ನೀತಿಯನ್ನು ಶೀಘ್ರದಲ್ಲೇ ಜಾರಿಗೆ ತರುತ್ತೇವೆ.

ಅಲ್ಪಸಂಖ್ಯಾತ ಸಮುದಾಯ ಎಂದರೆ ಕೇವಲ ಮುಸ್ಲಿಂ ಸಮುದಾಯ ಮಾತ್ರವಲ್ಲ. ಜೈನ,‌ ಬೌದ್ದ, ಸಿಖ್ ಧರ್ಮಿಯರಿಗೆ ರಾಜ್ಯದಲ್ಲಿ ಶಾಂತಿಯುತವಾಗಿ ಬಾಳುವ ವಾತಾವರಣ ನಿರ್ಮಾಣ ಮಾಡುತ್ತೇವೆ. ಮರಕ್ಕೆ ಬೇರು ಎಷ್ಟು ಮುಖ್ಯವೋ ಅದೇ ರೀತಿ ಮನುಷ್ಯನಿಗೆ ನಂಬಿಕೆ ಮುಖ್ಯ. ನಮ್ಮ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಇಟ್ಟು ಅಧಿಕಾರಕ್ಕೆ ತಂದಿದ್ದೀರಿ. ನಿಮ್ಮ ನಂಬಿಕೆಗೆ ನಾವು ಮೋಸ ಮಾಡುವುದಿಲ್ಲ. ಈ ದೇಶದ, ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಯಾವುದೇ ಧರ್ಮ - ಜಾತಿಗಳನ್ನು ನೋಡದೆ ಸೇವೆ ಮಾಡುತ್ತಿವೆ. ಹೊಸ ತಲೆಮಾರನ್ನು ಕಟ್ಟುವ ಕೆಲಸ ಮಾಡುತ್ತಿವೆ.  ಶಿಕ್ಷಣದ ಮೂಲಕ ಈ ದೇಶವನ್ನು ಕಟ್ಟುವ ಕೆಲಸವಾಗಬೇಕು.

ಇದನ್ನೂ ಓದಿ: ನಿಮ್ಮ ಮಾನಸಿಕ ಆರೋಗ್ಯಕ್ಕಾಗಿ ಈ 5 ಆಹಾರಗಳನ್ನು ಸೇವಿಸಿ

ಹೋರಾಟ ಮಾಡುವವನು ಗೆದ್ದೆ ಗೆಲ್ಲುತ್ತಾನೆ. ಅಲ್ಪಸಂಖ್ಯಾತ ಸಮುದಾಯ ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಆಶೀರ್ವಾದ ಮಾಡಿದ ಪರಿಣಾಮ ನಾವು ಅನೇಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವೆ. ಗೆದ್ದು ಸುಮ್ಮನೆ ಕುಳಿತಿಲ್ಲ 4 ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಇಡೀ ದೇಶವೇ ಕರ್ನಾಟಕದ ಕಡೆ ತಿರುಗುವಂತೆ ಮಾಡಿದ್ದೇವೆ, ಅದಕ್ಕೆ ನೀವೆ ಕಾರಣ.

ಚುನಾವಣೆಗೂ ಮುಂಚೆ ಅವರ ಜೊತೆ ಮೈತ್ರಿ ಮಾಡಿಕೊಳ್ಳಿ, ಇವರ ಜೊತೆ ಮಾಡಿಕೊಳ್ಳಿ ಎಂದು ಹೇಳುತ್ತಿದ್ದರು. ನಾನು ನಂಬಿಕೆ ಇಟ್ಟಿದ್ದೆ, 135 ಸ್ಥಾನ ಗೆದ್ದೆ ಗೆಲ್ಲುತ್ತೇವೆ ಎಂದು. ಈ ರಾಜ್ಯದ ಜನರ ಆಶೀರ್ವಾದದಿಂದ ಸದೃಡ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಮ್ಮ ಮುಂದಿನ ಗುರಿ 2024 ರ ಚುನಾವಣೆ. ಕರ್ನಾಟಕದಲ್ಲಿ ಆಶೀರ್ವದಿಸಿದಂತೆ, ಲೋಕಸಭಾ ಚುನಾವಣೆಯಲ್ಲೂ ನಿಮ್ಮ ಅಭಯ ನಮಗೆ ಬೇಕು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News