ಬೆಂಗಳೂರು: ಮುಂದಿನ ವರ್ಷಗಳಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಆರ್ಥಿಕ ತಜ್ಞರನ್ನು ರೂಪಿಸುವ ಜವಾಬ್ದಾರಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್  ಮೇಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಉನ್ನತ ಶಿಕ್ಷಣ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಇಂದು ಬೆಂಗಳೂರಿನ ಜ್ಞಾನಭಾರತಿಯಲ್ಲಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಗೆ ಭೇಟಿ ನೀಡಿದ್ದರು.‌ ಈ ವೇಳೆ ಭಾರತದಲ್ಲಿ ಅತ್ಯಂತ ಸದೃಢ ಎಕನಾಮಿಕ್ಸ್ ವಿಶ್ವವಿದ್ಯಾಲಯವಾಗಬೇಕು ಎಂದು ಸಚಿವ ಎಂಸಿ ಸುಧಾಕರ್ ಅಭಿಪ್ರಾಯಪಟ್ಟರು.


ಇದನ್ನೂ ಓದಿ: Karnataka Bandh: ವಿದ್ಯುತ್ ದರ ಹೆಚ್ಚಳಕ್ಕೆ‌ ಖಂಡನೆ.. ಹುಬ್ಬಳ್ಳಿಯಲ್ಲಿ ಬಂದ್ ಯಶಸ್ಸಿ..!


ಈಗಾಗಲೇ ಕಳೆದ ಮೂರು ನಾಲ್ಕು ವರ್ಷಗಳಿಂದ ಎಕನಾಮಿಕ್ಸ್ ಪದವಿ ಹಾಗೂ ಸ್ನಾತಕೋತರದಲ್ಲಿ ದೇಶದ ಗಮನ ಸೆಳೆದಿರುವ ಈ ವಿಶ್ವವಿದ್ಯಾಲಯವು ಮುಂದಿನ ದಿನಗಳಲ್ಲಿ ಅತ್ಯಂತ ಭರವಸೆಯನ್ನು ಮೂಡಿಸುವ ನಿಟ್ಟಿನಲ್ಲಿ ಸಾಗಿದೆ. ಇದೇ ರೀತಿ ಇನ್ನೂ ಹೆಚ್ಚು ಪಠ್ಯಕ್ರಮಗಳೊಂದಿಗೆ ಹೆಚ್ಚಿನ ಸಾಧನೆ ಮಾಡಬೇಕು ಎಂದು ತಿಳಿಸಿದರು.


ಡಾಕ್ಟರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನ ಕುಲಪತಿ, ಕುಲ ಸಚಿವರು ಹಾಗೂ ಬೋಧಕ ಸಿಬ್ಬಂದಿಯೊಂದಿಗೆ ಅಭಿವೃದ್ಧಿ ಕುರಿತಂತೆ ಸುಧೀರ್ಘ ಸಮಾಲೋಚನೆ ನಡೆಸಿದರು. ಇಲ್ಲಿಯ ಶಿಕ್ಷಣ, ಬೋಧಕ ಸಿಬ್ಬಂದಿ ಮತ್ತು ರಾಜ್ಯದ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಅವಕಾಶ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಪಡೆದರು.


ದೇಶದ ಮೊದಲ ಸ್ವತಂತ್ರವಾದ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ ಆಗಿರುವ ಈ ಸಂಸ್ಥೆ ದೇಶದ ಉನ್ನತ ಮಟ್ಟಕ್ಕೆ ತಲುಪಬೇಕು. ಅದಕ್ಕಾಗಿ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ ಎಂದರು.


ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಗ್ರಾಹಕರ ಜೇಬಿಗೆ ಕತ್ತರಿ ಹಾಕಲು ಸಿದ್ಧತೆ- ಮಾಜಿ ಪಶುಸಂಗೋಪನಾ ಸಚಿವ


ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ ಅವರ ಹೆಸರಿನ ಈ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸುವಂತಹ ಖ್ಯಾತಿ ಪಡೆಯಬೇಕು ಎಂಬ ಆಶಯವನ್ನು ಸಚಿವರು ವ್ಯಕ್ತಪಡಿಸಿದರು.


ಅತ್ಯಂತ ಕಡಿಮೆ ಅವಧಿಯಲ್ಲಿ ನಿರೀಕ್ಷೆಗೂ ಮೀರಿ ಸ್ಕೂಲ್ ಆಫ್ ಎಕನಾಮಿಕ್ಸ್ ಬೆಳೆದಿರುವುದು ಸಂತಸದ ವಿಷಯ ಎಂದು ಅಭಿಪ್ರಾಯಪಟ್ಟರು.
ಅಂತರಾಷ್ಟ್ರೀಯ ಮಟ್ಟದಲ್ಲಿ ನಿರ್ಮಾಣಗೊಂಡಿರುವ ಡಾಕ್ಟರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಿ ಎಲ್ಲಾ ರೀತಿಯ ಬೆಂಬಲವನ್ನು ನೀಡಲಾಗುವುದು ಎಂದು  ಕುಲಪತಿ ಹಾಗೂ ಕುಲ ಸಚಿವರಿಗೆ ಭರವಸೆ  ನೀಡಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.