Voter List: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರ ಸೇರಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 98,43,577 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು. 


COMMERCIAL BREAK
SCROLL TO CONTINUE READING

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024 ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಆಯುಕ್ತರಾದ ತುಷಾರ್ ಗಿರಿನಾಥ್, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ ಎಂದರು. 


ಅದರಂತೆ ಅಂತಿಮ ಮತದಾರರ ಪಟ್ಟಿಯಲ್ಲಿ 50,78,525 ಪುರುಷ ಮತದಾರರರು, 47,63,268 ಮಹಿಳಾ ಮತದಾರರು ಹಾಗೂ 1,784 ಇತರೆ ಮತದಾರರು ಸೇರಿ ಒಟ್ಟು 98,43,577 ಮತದಾರರಿದ್ದಾರೆ ಎಂದು ತಿಳಿಸಿದರು. 


ಇದನ್ನೂ ಓದಿ- Voter ಐಡಿಗಾಗಿ ಸುಲಭವಾಗಿ ನೀವು ಕುಳಿತಲ್ಲಿಯೇ ಅರ್ಜಿ ಸಲ್ಲಿಸಿ


ಬೆಂಗಳೂರು ನಗರದಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರದ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಎಲ್ಲಾ ಮತದಾರರ ನೊಂದಣಾಧಿಕಾರಿಗಳ ಕಛೇರಿ, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿ ಹಾಗೂ ವಾರ್ಡ್ ಕಛೇರಿಗಳಲ್ಲಿ ಪ್ರಕಟಿಸಲಾಗಿರುತ್ತದೆ. 


ಮತದಾರ ಮಾಹಿತಿ ಪರಿಶೀಲನೆಗೆ ಅವಕಾಶ: 
ಮತದಾರರು ತಮ್ಮ ಮತದಾರರ ಮಾಹಿತಿಯನ್ನು (ಹೆಸರು, ತಂದೆಯ ಹೆಸರು, ಸಂಬAಧ, ಲಿಂಗ, ಜನ್ಮ ದಿನಾಂಕ ವಿಳಾಸ ಮತ್ತು ಪೋಟೊ) ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಚುನಾವಣಾಧಿಕಾರಿ ರವರ www.ceokarnataka.kar.nic.in  ಮತ್ತು ಬಿಬಿಎಂಪಿ www.bbmp.gov.in  ವೆಬ್‌ಸೈಟ್ ನಲ್ಲಿ ಸಹ ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರ ಪಡಿಸಲಾಗುವುದು ಎಂದರು.
 
ಇದನ್ನೂ ಓದಿ- ಚುನಾವಣೆ ನೀತಿ ಸಂಹಿತೆ ಜಾರಿಯಾದ ಬಳಿಕವೋ ವೋಟರ್ ಐಡಿ ಮಾಡಿಸಬಹುದೇ?


ಸಾರ್ವಜನಿಕರು/ಮತದಾರರು ಮತದಾರರ ಪಟ್ಟಿ ಕಾರ್ಯ ಚಟುವಟಿಕೆಗಳ ಲಾಭವನ್ನು ಪಡೆದುಕೊಂಡು ಯಾವುದೇ ಕಛೇರಿಗೆ ಹೋಗದೆ ಅವರಿರುವ ಸ್ಥಳದಿಂದಲೇ Web Portal-Voters.eci.gov.in, Voter Helpline Mobile App  ಹಾಗೂ 1950 Voter Helpline  ಮುಖಾಂತರ ತಮ್ಮ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಆಗಿರುವ ತಪ್ಪುಗಳಿಗೆ ಸಂಬಂಧಪಟ್ಟ ನಮೂನೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು. 


ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್, ದಯಾನಂದ, ಸ್ನೇಹಲ್, ವಿನೋತ್ ಪ್ರಿಯಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.