ಮಹಿಳೆಯರಿಗೆ ಉಚಿತವಾಗಿ ಸಿಗಲಿದೆ ಎಲೆಕ್ಟ್ರಿಕ್ ಸ್ಕೂಟರ್: ಈ ರೀತಿ ಅರ್ಜಿ ಸಲ್ಲಿಸಿ

Free Scooter: ಬೆಂಗಳೂರು ಮಹಾನಗರದಲ್ಲಿ ಕಾರ್ಖಾನೆ, ಕಚೇರಿಗೆ ಹೋಗಿ ದುಡಿಯುವ ಮಹಿಳೆಯರ ಸಂಖ್ಯೆ ಜಾಸ್ತಿ. ಅಂತಹ ಮಹಿಳೆಯರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉಚಿತವಾಗಿ ಎಲೆಕ್ಟ್ರಿಕ್ ಸ್ಕೂಟರ್ ಕೊಡುವ ವಿಶೇಷ ಯೋಜನೆ ರೂಪಿಸಿದೆ. 

Written by - Yashaswini V | Last Updated : Apr 17, 2025, 04:00 PM IST
  • ಕರ್ನಾಟಕ ಸರ್ಕಾರ ಮಹಿಳೆಯರೆಲ್ಲರಿಗೂ ಉಚಿತ ಬಸ್ ಪ್ರಯಾಣ ಎಂದಾಗ ಕೆಲವರಿಗೆ ನಂಬಿಕೆ ಇರಲಿಲ್ಲ.
  • ಪ್ರತಿ ಮನೆಯಲ್ಲೂ ಒಬ್ಬ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಅಂದಾಗಲೂ ಯಾರಿಗೂ ನಂಬಿಕೆ ಇರಲಿಲ್ಲ.
  • ಆದರೆ ಇವರೆಡೂ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. ಅಂತೆಯೇ ಈಗ ಮಹಿಳೆಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್ ನೀಡುವ ಯೋಜನೆಯನ್ನು ಸಹ ಘೋಷಿಸಲಾಗಿದೆ.
ಮಹಿಳೆಯರಿಗೆ ಉಚಿತವಾಗಿ ಸಿಗಲಿದೆ ಎಲೆಕ್ಟ್ರಿಕ್ ಸ್ಕೂಟರ್: ಈ ರೀತಿ ಅರ್ಜಿ ಸಲ್ಲಿಸಿ

Free Electric Scooter: ಉಚಿತ ಬಸ್ ಪ್ರಯಾಣ, ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ಕೊಡುವ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾಗ ಕೆಲವರು ನಂಬಿರಲಿಲ್ಲ. ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. ಈಗ ಮಹಿಳೆಯರಿಗೆ ಉಚಿತವಾಗಿ ಎಲೆಕ್ಟ್ರಿಕ್ ಸ್ಕೂಟರ್ ಕೊಡುವ ಯೋಜನೆ ಘೋಷಣೆಯಾಗಿದೆ.

Add Zee News as a Preferred Source

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ-ಬಿ‌ಬಿಎಂಪಿ 2024-25ನೇ ಸಾಲಿನ ಬಜೆಟ್ ನಲ್ಲಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಘೋಷಿಸಿದೆ. ಇದರಲ್ಲಿ ಉಚಿತವಾಗಿ ಮಹಿಳೆಯರಿಗೆ ಎಲೆಕ್ಟ್ರಿಕ್ ಸ್ಕೂಟರ್ ಕೊಡುವುದಾಗಿ ಹೇಳಿದೆ. ಹಾಗಾಗಿ ಈ ಯೋಜನೆ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿವೆ. 

ಇದನ್ನೂ ಓದಿ- Top 10 Series: ಕರ್ನಾಟಕದ 10 ಅತಿ ದೊಡ್ಡ ಡ್ಯಾಮ್‌ಗಳು..! ಸಂಪೂರ್ಣ ವಿವರ ಇಲ್ಲಿ

ಬಿ‌ಬಿಎಂಪಿ ತನ್ನ ಬಜೆಟ್ ನಲ್ಲಿ ಮಹಿಳೆಯರಿಗೆ ಆರ್ಥಿಕವಾಗಿ ಅನುಕೂಲವಾಗುವಂತಹ ಕೆಲವು ಪ್ರೋತ್ಸಾಹದ ಪ್ಯಾಕೇಜುಗಳನ್ನು ಘೋಷಿಸಿದೆ. ಆ ಪೈಕಿ ಮಹಿಳೆಯರಿಗೆ ಉಚಿತವಾಗಿ ಎಲೆಕ್ಟ್ರಿಕ್ ಸ್ಕೂಟರ್ ಕೊಡುವುದು ಕೂಡ ಒಂದಾಗಿದೆ.

ಮಹಿಳೆಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್: 
ಬೆಂಗಳೂರು ಮಹಾನಗರದಲ್ಲಿ ಕಾರ್ಖಾನೆ, ಕಚೇರಿಗೆ ಹೋಗಿ ದುಡಿಯುವ ಮಹಿಳೆಯರ ಸಂಖ್ಯೆ ಜಾಸ್ತಿ. ಅಂತಹ ಮಹಿಳೆಯರು ಮನೆ ಮತ್ತು ಅವರ ಕೆಲಸ ಮಾಡುವ ಸ್ಥಳಕ್ಕೆ ಓಡಾಡಲು ಸಹಾಯ ಮಾಡಿಕೊಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹಿಳೆಯರಿಗೆ ಉಚಿತವಾಗಿ ಎಲೆಕ್ಟ್ರಿಕ್ ಸ್ಕೂಟರ್ ಕೊಡುವ ವಿಶೇಷ ಯೋಜನೆ ರೂಪಿಸಿದೆ. ಇದು ದುಡಿಯುವ ಮಹಿಳೆಯರಿಗೆ ಅನುಕೂಲವಾಗಲೆಂದು ರೂಪಿಸಿರುವ ವಿಶೇಷ ಯೋಜನೆಯಾಗಿದೆ. 

ಇದನ್ನೂ ಓದಿ- ಮಲೆ ಮಹದೇಶ್ವರನಿಗೆ ದಾಖಲೆ ಆದಾಯ: 35 ದಿನದಲ್ಲಿ ಕೋಟಿ ಕೋಟಿ ಸಂಗ್ರಹ

ಈ ಯೋಜನೆಯ ಲಾಭ ಪಡೆಯಲು ಗಾರ್ಮೆಂಟ್ಸ್ ನೌಕರರು, ಉದ್ಯೋಗಸ್ಥ ಮಹಿಳೆಯರು, ಪೌರಕಾರ್ಮಿಕ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಬೆಂಗಳೂರಿನ ನಿವಾಸಿಯಾಗಿರಬೇಕು. ಹಿಂದೆ ಇಂಥ ಯೋಜನೆಯ ಪ್ರಯೋಜನ ಪಡೆದಿರಬಾರದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಮೇ ತಿಂಗಳ 5ನೇ ತಾರೀಖು. 

ಉಚಿತ ಎಲೆಕ್ಟ್ರಿಕ್ ಸ್ಕೂಟರ್ ಪಡೆಯಲು ಅಗತ್ಯ ದಾಖಲೆಗಳು: 
ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಾಸ ಧೃಡೀಕರಣ ಪತ್ರ, ವಯಸ್ಸಿನ ಧೃಡೀಕರಣ ಪತ್ರ, ಉದ್ಯೋಗ ಧೃಡೀಕರಣ ಪತ್ರ, ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಬ್ಯಾಂಕ್ ಖಾತೆ ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News