)
Dharmasthala Mask Man Arrested
: ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ SIT ಅಧಿಕಾರಿಗಳಿಂದ ಮಾಸ್ಕ್ ಮ್ಯಾನ್ ಬಂಧನವಾಗಿದೆ. ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ಸಿ.ಎನ್.ಚಿನ್ನಯ್ಯನನ್ನ ಬಂಧಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ಗೆ SIT ಅಧಿಕಾರಿಗಳು ಹಾಜರುಪಡಿಸಲಿದ್ದಾರೆ ಅಂತಾ ತಿಳಿದುಬಂದಿದೆ.
ಈ ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ʼಧರ್ಮಸ್ಥಳದ ವಿರುದ್ಧದ ಷಡ್ಯಂತರ ನಡೆಯುತ್ತಿದೆ ಎಂದು ನಾವು ಹೇಳಿದ್ದು ಈಗ ನಿಜವಾಗಿದೆʼ ಎಂದು ಹೇಳಿದ್ದಾರೆ. ದೂರುದಾರ ಮುಸುಕುದಾರಿಯ ಬಂಧನ ಸತ್ಯದ ಮೇಲೆ ಬೆಳಕು ಚೆಲ್ಲಿದೆ. ಕಪೋಲ ಕಲ್ಪಿತ ದೂರು ನೀಡಿ ಸಿಕ್ಕಿಬಿದ್ದಿರುವ ಈತನ ಹಿಂದಿರುವ ಶಕ್ತಿಗಳು ಯಾವುದು? ಷಡ್ಯಂತ್ರ ರೂಪಿಸಿದ ವಿಕೃತಿಗಳು ಯಾರು? ಇವರೆಲ್ಲರ ಮುಖವಾಡಗಳು ಬಯಲಾಗಬೇಕಿದೆ ಎಂದು ಆಗ್ರಹಿಸಿದ್ದಾರೆ.
ಧರ್ಮಸ್ಥಳದ ವಿರುದ್ಧದ ಷಡ್ಯಂತರ ನಡೆಯುತ್ತಿದೆ ಎಂದು ನಾವು ಹೇಳಿದ್ದು ಈಗ ನಿಜವಾಗಿದೆ. ದೂರುದಾರ ಮುಸುಕುದಾರಿಯ ಬಂಧನ ಸತ್ಯದ ಮೇಲೆ ಬೆಳಕು ಚೆಲ್ಲಿದೆ. ಕಪೋಲ ಕಲ್ಪಿತ ದೂರು ನೀಡಿ ಸಿಕ್ಕಿಬಿದ್ದಿರುವ ಈತನ ಹಿಂದಿರುವ ಶಕ್ತಿಗಳು ಯಾವುದು? ಷಡ್ಯಂತ್ರ ರೂಪಿಸಿದ ವಿಕೃತಿಗಳು ಯಾರು? ಇವರೆಲ್ಲರ ಮುಖವಾಡಗಳು ಬಯಲಾಗಬೇಕಿದೆ, ಇಡೀ ರಾಜ್ಯದ ಹಾಗೂ ದೇಶದ… pic.twitter.com/He0sam0svh
— Vijayendra Yediyurappa (@BYVijayendra) August 23, 2025
ಇಡೀ ರಾಜ್ಯದ ಹಾಗೂ ದೇಶದ ಗಮನವನ್ನು ಕೇಂದ್ರೀಕರಿಸುವಂತೆ ಮಾಡಿ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರ ಪವಿತ್ರ ಧರ್ಮಸ್ಥಳವನ್ನು ಅಪವಿತ್ರಗೊಳಿಸಲು ಯತ್ನಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕಿದೆ. ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಬಿತ್ತರಗೊಂಡ ಈ ಅಪಪ್ರಚಾರದ ಹಿಂದೆ ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ ತಳ್ಳಿಹಾಕಲಾಗದು ಎಂದು ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಈ ಪ್ರಕರಣವನ್ನು ಧರ್ಮಸ್ಥಳದ ವಿರುದ್ಧ ನಡೆದ ಷಡ್ಯಂತ್ರವೆಂದು ಸೀಮಿತಗೊಳಿಸದೆ, ಇದು ಭಾರತೀಯರ ಭಾವನೆಗಳು ಹಾಗೂ ಪರಂಪರೆಯ ಮೇಲೆ ನಡೆದ ವ್ಯವಸ್ಥಿತ ಪಿತೂರಿ ಎಂದು ಪರಿಗಣಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರ ಎಡ ಪಂಥೀಯರ ಒತ್ತಾಯಕ್ಕೆ ಮಣಿದು ಹೇಗೆ SIT ರಚಿಸಿ ತನಿಖೆ ನಡೆಸಿತೋ, ಅದೇ ಮಾದರಿಯಲ್ಲಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಿದವರ ವಿರುದ್ಧವೂ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಲಿ ಎಂದು ಆಗ್ರಹಿಸುತ್ತೇನೆʼ ಅಂತಾ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.