ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು: ಬಸವರಾಜ ಬೊಮ್ಮಾಯಿ
Basavaraj Bommai: ಪ್ರಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ.
ಈಗಾಗಲೇ ಕುಮಾರಸ್ವಾಮಿಯವರು ಕೆಲವೊಂದಿಷ್ಟು ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಮಾತುಕತೆ ಫಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ ಎಂದರು.
ವಿಪಕ್ಷ ನಾಯಕನ ಸ್ಥಾನ ಜುಲೈ 18 ರ ನಂತರ ಘೋಷಣೆ ಆಗಬಹುದು ಎಂಬ ಮಾಹಿತಿ ಇದೆ. ಮಾಜಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಆಗುವುದು ಕೇವಲ ಊಹಾಪೋಹ ಎಂದು ಹೇಳಿದರು.
ಇದನ್ನೂ ಓದಿ: ʼನಮಸ್ಕಾರ ದೇವ್ರುʼ Dr Bro ವಿಡಿಯೋ ಮಾಡಿದ್ದಕ್ಕೆ ಅಲ್ಲಿನ ಜನ ಏನ್ ಮಾಡಿದ್ರು ನೀವೆ ನೋಡಿ..!
ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಬರುತ್ತಿದ್ದಾರೆ. ಗೃಹ ಲಕ್ಷ್ಮಿ ಈಗಾಗಲೇ ಯಡವಟ್ಟಾಗಿದೆ. ದಿನಾಂಕದ ಮೇಲೆ ದಿನಾಂಕ ಮುಂದುಡುತ್ತಿದ್ದಾರೆ.
ಗೃಹಲಕ್ಷ್ಮಿ ಯೋಜನೆಗಳಿಗೆ ಯಾವುದೇ ನಿರ್ಧಿಷ್ಟವಾದ ನಿಯಮಗಳನ್ನ ಮಾಡುತ್ತಿಲ್ಲ. ದೊಡ್ಡ ಭಾರ ಆಗುತ್ತಿರುವ ಗೃಹಲಕ್ಷ್ಮಿ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ದಿನಾಂಕ ಮುಂದೆ ಹಾಕಿ ಕೆಲವೇ ಸಮಯದಲ್ಲಿ, ಕೆಲವರಿಗೆ ಮಾತ್ರ ಪ್ರಾರಂಭ ಮಾಡುವ ಉದ್ದೇಶ ಸರ್ಕಾರಕ್ಕಿದೆ. ತಾಯಂದಿರಿಗೆ, ರಾಜ್ಯದ ಹೆಣ್ಣುಮಕ್ಕಳಿಗೆ ಭ್ರಮನಿರಸನ ಮಾಡುವಂತಹ ಉದ್ದೇಶ ಈ ಯೋಜನೆ ಹಿಂದಿದೆ. ಅಧಿವೇಶನದಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ