ಗಾರ್ಡನ್ ಸಿಟಿಯಲ್ಲಿ ಪಸರಿಸಲಿದೆ ಕಂಬಳದ ಪರಿಮಳ: ಸುಗಮ ಸಂಚಾರಕ್ಕಾಗಿ ಟ್ರಾಫಿಕ್ ಪೊಲೀಸರ ಹೊಸ ಮಾರ್ಗಸೂಚಿ
ಕಂಬಳಕ್ಕೆ 6 ರಿಂದ 7 ಲಕ್ಷ ಜನರು ಬರುವ ಸಾಧ್ಯತೆ ಇದ್ದು ಜನರು ಕೂತು ಕಂಬಳ ವೀಕ್ಷಿಸಲು ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. ಅರಮನೆ ಮೈದಾನದ ಗೇಟ್ ನಂಬರ್ 1, 2, 3 ಹಾಗೂ 4 ರಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಅನುಕೂಲ ಕಲ್ಪಿಸಲಾಗಿದ್ದು, ಪ್ರವೇಶ ಸಂಪೂರ್ಣವಾಗಿ ಉಚಿತವಾಗಿರಲಿದೆ.
Kambala In Namma Bengaluru: ನಮ್ಮ ಬೆಂಗಳೂರು ಈ ವಾರಾಂತ್ಯದಲ್ಲಿ ಕರಾವಳಿ ಪ್ರದೇಶದ ಜನಪ್ರಿಯ ಸಾಂಸ್ಕೃತಿಕ ಕ್ರೀಡೆ 'ಕಂಬಳ'ವನ್ನು ಆಯೋಜಿಸಲು ಸಜ್ಜಾಗಿದೆ. ಬೆಂಗಳೂರು ಕಂಬಳಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು, ಬೆಂಗಳೂರು ಕಂಬಳ ಸಮಿತಿ ಅರಮನೆ ಮೈದಾನದಲ್ಲಿ ಕಂಬಳಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಪೂರ್ಣಗೊಳಿಸಿದೆ. ಇನ್ನೂ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಮಾಡಲಾಗುತ್ತಿದ್ದು, ಲಕ್ಷಾಂತರ ಜನರು ಕಂಬಳ ವೀಕ್ಷಣೆಗಾಗಿ ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸುಗಮ ಸಂಚಾರಕ್ಕಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ.
ಹೌದು, ಕಂಬಳಕ್ಕೆ 6 ರಿಂದ 7 ಲಕ್ಷ ಜನರು ಬರುವ ಸಾಧ್ಯತೆ ಇದ್ದು ಜನರು ಕೂತು ಕಂಬಳ ವೀಕ್ಷಿಸಲು ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. ಅರಮನೆ ಮೈದಾನದ ಗೇಟ್ ನಂಬರ್ 1, 2, 3 ಹಾಗೂ 4 ರಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಅನುಕೂಲ ಕಲ್ಪಿಸಲಾಗಿದ್ದು, ಪ್ರವೇಶ ಸಂಪೂರ್ಣವಾಗಿ ಉಚಿತವಾಗಿರಲಿದೆ. ಕಂಬಳ ವೀಕ್ಷಿಸಲು ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದ್ದು, ವಿವಿಐಪಿಗಳಳಿಗೆ ಫನ್ ವರ್ಲ್ಡ್ ಕಡೆಯಿಂದ ಪ್ರವೇಶ ಮಾಡಲು ಅನುವು ಮಾಡಿಕೊಡಲಾಗಿದೆ.
ಇದನ್ನೂ ಓದಿ- ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ಐತಿಹಾಸಿಕ ಕಂಬಳ
ಇನ್ನೂ ಇಂದಿನಿಂದ ಮೂರು ದಿನ (ನವೆಂಬರ್ 24 ರಿಂದ ನವೆಂಬರ್ 26) ಅರಮನೆ ಮೈದಾನದಲ್ಲಿ ನಡೆಯಲಿರೋ ಕಂಬಳಕ್ಕಾಗಿ ಸಂಚಾರಿ ಪೊಲೀಸರು ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಹಿನ್ನಲೆ: 25ಮತ್ತು 26ರಂದು ಸುಗಮ ಸಂಚಾರಕ್ಕೆ ಸಂಚಾರಿ ಪೊಲೀಸರ ಮಾರ್ಗಸೂಚಿ ಈ ಕೆಳಕಂಡಂತಿದೆ:
ಪ್ರವೇಶ ಮತ್ತು ವಾಹನ ನಿಲುಗಡೆ ಸ್ಥಳಗಳು:-
>> ಸಿಬಿಡಿ ಏರಿಯಾದಿಂದ ಬರೋ ವಾಹನಗಳಿಗೆ ಮೇಖ್ರಿ ಸರ್ಕಲ್ ಬಳಿಯ ಗೇಟ್ ನಂ 1(ಕೃಷ್ಣ ವಿಹಾರ್) ನಲ್ಲಿ ಪ್ರವೇಶದ ಪಾರ್ಕಿಂಗ್..
>> ಹೆಬ್ಬಾಳ ಕಡೆಯಿಂದ ಬರೋ ವಾಹನಗಳಿಗೆ ಮೇಖ್ರಿ ಅಂಡರ್ ಪಾಸ್ ಮೂಲಕ ಗೇಟ್ ನಂ 1ರಿಂದ ಪ್ರವೇಶ..
>> ಯಶವಂತಪುರ ಕಡೆ ಬರುವ ವಾಹನಗಳು ಮೇಖ್ರಿ ಸರ್ಕಲ್ ಬಳಿ ಬಲ ತಿರುವು ಗೇಟ್ ನಂಬರ್ 1ಪ್ರವೇಶ..
>> ಕ್ಯಾಬ್ ನಲ್ಲಿ ಬರುವವರಿಗಾಗಿ ಗೇಟ್ ನಂಬರ್ 2ಮೂಲಕ ಪ್ರವೇಶ..
>> ಗೇಟ್ ನಂಬರ್ 3ಮೂಲಕ ಕ್ಯಾಬ್ ಗಳಿಗೆ ಎಕ್ಸಿಟ್ ಗೆ ಸೂಚನೆ..
>> ಇತರೆ ವಾಹನಗಳು ವಾಪಸ್ ಹೋಗೋವಾಗ ಜಯಮಹಲ್ ರಸ್ತೆಯ ಅಮಾನುಲ್ಲಾ ಖಾನ್ ಗೇಟ್ ಮೂಲಕ ನಿರ್ಗಮನ..
ಇದನ್ನೂ ಓದಿ- ಮೊದಲ ಕಂಬಳಕ್ಕೆ ಸಾಕ್ಷಿಯಾಗಲಿದೆ ಬೆಂಗಳೂರು
ಕಂಬಳ ಕಾರ್ಯಕ್ರಮ ಹೊರತುಪಡಿಸಿ ಸಂಚರಿಸುವ ಸವಾರರಿಗೆ ಪ್ರತ್ಯೇಕ ಮಾರ್ಗಸೂಚಿ..!
ಇದಲ್ಲದೆ, ಕಂಬಳ ಕಾರ್ಯಕ್ರಮವನ್ನು ಹೊರತುಪಡಿಸಿ ಬೇರೆಡೆ ಸಂಚರಿಸುವವರಿಗೂ ಕೂಡ ಅನುಕೂಲವಾಗುವಂತೆ ಸಂಚಾರಿ ಪೊಲೀಸರು ಪ್ರತ್ಯೇಕ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.
* ಮೈಸೂರು ಬ್ಯಾಂಕ್ ರಸ್ತೆ ಮೂಲಕ ವಸಂತ್ ನಗರ ಅಂಡರ್ ಪಾಸ್ ಹೋಗುವವರು ಅರಮನೆ ರಸ್ತೆ ಮೂಲಕವೇ ಸಂಚರಿಸಬೇಕು..
* ಅರಮನೆ ರಸ್ತೆ, ಬಿಡಿಎ ಜಂಕ್ಷನ್ ನಿಂದ ಚಕ್ರವರ್ತಿ ಲೇಔಟ್ ಸೇರಿದಂತೆ
ವಸಂತನಗರ ಅಂಡರ್ ಪಾಸ್ ನಿಂದ ಹಳೇ ಉದಯ ಟಿವಿ ಜಂಕ್ಷನ್ ವರೆಗೆ ಎಮ್ ವಿ ಜಯರಾಂ ರಸ್ತೆ ಬಳಕೆಗೆ ಸೂಚನೆ..
* ಮೇಖ್ರಿ ಸರ್ಕಲ್ ನಿಂದ ಎಲ್ ಆರ್ ಡಿಇ ಜಂಕ್ಷನ್ ವರೆಗೆ ಬಳ್ಳಾರಿ ರಸ್ತೆಯಲ್ಲಿ ಸಂಚರಿಸಲು ಸೂಚನೆ..
* ಬಾಳೆಕುಂದಿ ಸರ್ಕಲ್‌ನಿಂದ ಲೀ ಮೆರಿಡಿಯನ್ ಅಂಡರ್ ಪಾಸ್ ವರೆಗೆ ಕನ್ನಿಂಗ್ ಹಾಮ್ ರೋಡ್ ಬಳಸಲು ಸೂಚನೆ..
* ಹಳೇ ಉದಯ ಟಿವಿ ಜಂಕ್ಷನ್ ನಿಂದ ಎಲ್ ಆರ್ ಡಿ ಜಂಕ್ಷನ್ ವರೆಗೆ ಮಿಲ್ಲರ್ಸ್ ಜಂಕ್ಷನ್ ಬಳಸಲು ಸೂಚನೆ..
* ಜಯಮಹಲ್ ರಸ್ತೆ ಹಾಗೂ ಅರಮನೆ ರಸ್ತೆ ಸುತ್ತಾ ಮುತ್ತಾ ಸಂಚಾರ ಮಾಡೋರು ಜಯಮಹಲ್ ರಸ್ತೆ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ.
ಈ ಪ್ರದೇಶದಲ್ಲಿ ವಾಹನಗಳ ನಿಲುಗಡೆಗೆ ನಿಷೇಧ:-
ಇನ್ನೂ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಶನಿವಾರ ಮತ್ತು ಭಾನುವಾರ ಪ್ಯಾಲೆಸ್ ರಸ್ತೆ, ಎಮ್ ವಿ ಜಯರಾಂ ರಸ್ತೆ, ಸಿವಿ ರಾಮನ್ ರಸ್ತೆ, ವಸಂತ್ ನಗರ ರಸ್ತೆ, ಜಯಮಹಲ್ ರಸ್ತೆ, ರಮಣ ಮಹರ್ಷಿ ರಸ್ತೆ, ನಂದಿ ದುರ್ಗ ರಸ್ತೆ, ಬಳ್ಳಾರಿ ರಸ್ತೆ, ತರಳ ಬಾಳು ರಸ್ತೆ, ಮೌಂಟ್ ಕಾರ್ಮಲ್ ರಸ್ತೆ ಬಳಿ ವಾಹನ ನಿಲುಗಡೆಗೆ ನಿರ್ಬಂಧ ಹೇರಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.