ಬ್ರ್ಯಾಂಡ್ ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ
ಬ್ರ್ಯಾಂಡ್ ಬೆಂಗಳೂರು ಅಭಿವೃದ್ಧಿ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಕೆನಡಾ ಮೂಲದ ವರ್ಡ್ ಡಿಸೈನ್ ಸಂಸ್ಥೆಯ (WDO) ಅಧ್ಯಕ್ಷರು ಡೇವಿಡ್ ಕುಸುಮ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಒಪ್ಪಂದಕ್ಕೆ ಸೋಮವಾರ ಸಹಿ ಹಾಕಿದರು.
ಬೆಂಗಳೂರು : ಬ್ರ್ಯಾಂಡ್ ಬೆಂಗಳೂರು ಅಭಿವೃದ್ಧಿ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಕೆನಡಾ ಮೂಲದ ವರ್ಡ್ ಡಿಸೈನ್ ಸಂಸ್ಥೆಯ (WDO) ಅಧ್ಯಕ್ಷರು ಡೇವಿಡ್ ಕುಸುಮ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಒಪ್ಪಂದಕ್ಕೆ ಸೋಮವಾರ ಸಹಿ ಹಾಕಿದರು.
ಒಡಂಬಡಿಕೆಯ ಸಹಿ ಪ್ರಕ್ರಿಯೆ ಬಳಿಕ ಮಾಧ್ಯಮದವರಿಗೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿಗೆ ಹೊಸ ರೂಪ ನೀಡಿ ಈ ನಗರವನ್ನು ಜಾಗತಿಕ ನಗರವಾಗಿ ರೂಪಿಸುವ ಉದ್ದೇಶದಿಂದ ಇಂದು ರಾಜ್ಯ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ವರ್ಲ್ಡ್ ಡಿಸೈನ್ ಆರ್ಗನೈಸೇಷನ್ ಜತೆ ಒಪ್ಪಂದ ಮಾಡಿಕೊಂಡಿದೆ.
ಇದನ್ನೂ ಓದಿ: ಶಿಥಿಲಾವಸ್ಥೆಯಲ್ಲಿ ಧಾರವಾಡದ ಆರ್‌ಎನ್ ಶೆಟ್ಟಿ ಕ್ರೀಡಾಂಗಲ್ಲಿರುವ ಮಹಿಳಾ ಕಾಲೇಜ್
ಬ್ರ್ಯಾಂಡ್ ಬೆಂಗಳೂರು ಹಾಗೂ ಕರ್ನಾಟಕದ ಪಾಲಿಗೆ ಇಂದು ಹೊಸ ಅಧ್ಯಾಯ ಆರಂಭವಾಗುತ್ತಿದೆ. ಕರ್ನಾಟಕದ ಭವಿಷ್ಯದ ಅಭಿವೃದ್ಧಿಗೆ ಇದು ಹೆಜ್ಜೆಗುರುತಾಗಲಿದೆ. ಕೆಲ ವರ್ಷಗಳ ಹಿಂದೆ ವಿಶ್ವ ವಿನ್ಯಾಸ ರಾಜಧಾನಿ ಯಾವುದು ಎಂಬ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಇದರಲ್ಲಿ ಬೆಂಗಳೂರು ಯಶ ಕಾಣಲಿಲ್ಲ. ಬೆಂಗಳೂರು ವಾಸಯೋಗ್ಯ ನಗರವಾಗಿ ನಿರ್ಮಾಣ ಮಾಡಬೇಕಿದೆ. ಇದಕ್ಕಾಗಿ ಈ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ.
ಬೆಂಗಳೂರು ವಿಶ್ವದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಈ ನಗರವನ್ನು ಬೆಂಗಳೂರನ್ನು ಜಾಗತಿಕ ನಗರವಾಗಿ ಮಾಡಲು ಸರ್ಕಾರ ಬದ್ಧವಾಗಿದೆ. ಯಾವುದೇ ಯೋಜನೆಯಾದರೂ ಅದರ ವಿನ್ಯಾಸ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಹೀಗಾಗಿ ನಾವು ಇಂದು ಈ ಸಂಸ್ಥೆ ಜೊತೆ ಕೈಜೋಡಿಸುತ್ತಿದ್ದೇವೆ. ಈ ಸಂಸ್ಥೆ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕೈಗೊಳ್ಳುವ ಅಭಿವೃದ್ಧಿ ಯೋಜನೆಗಳ ವಿಚಾರದಲ್ಲಿ ಸಲಹೆ, ಮಾರ್ಗದರ್ಶನ ನೀಡಲಿದೆ.
ಇದನ್ನೂ ಓದಿ: ನೇಕಾರರ ವಿಶೇಷ ಯೋಜನೆಯಡಿ 1.25 ರೂ. ದರದಲ್ಲಿ ವಿದ್ಯುತ್ ಪೂರೈಕೆ ಯೋಜನೆ ಮುಂದುವರಿಕೆ : ಸಿಎಂ
ಆರಂಭದಲ್ಲಿ ಈ ಒಪ್ಪಂದ ಕೇವಲ ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿತ್ತು. ಆದರೆ ಈಗ ಇದನ್ನು ಬಿಎಂಆರ್ ಡಿಎ ವ್ಯಾಪ್ತಿಯ ಪ್ರದೇಶಗಳನ್ನು ಒಳಗೊಳ್ಳಲಾಗಿದೆ. ಬೆಂಗಳೂರಿಗೆ ತನ್ನದೇ ಆದ ಇತಿಹಾಸ, ಪರಂಪರೆ, ಸಂಸ್ಕೃತಿ ಹೊಂದಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಇಂದು ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಒಪ್ಪಂದದಿಂದ ನಮಗೆ ಶಕ್ತಿ ಹೆಚ್ಚಲಿದೆ. ಸರ್ಕಾರ ಹಾಗೂ ಬಿಬಿಎಂಪಿ ಪರವಾಗಿ ಆಯುಕ್ತರು ಈ ಒಪ್ಪಂದಕ್ಕೆ ಸಹಿ ಹಾಕುತ್ತಿದ್ದಾರೆ.
ನಮ್ಮ ಹಿರಿಯರು ತಮ್ಮದೇ ಆದ ರೀತಿಯಲ್ಲಿ ಬೆಂಗಳೂರನ್ನು ಕಟ್ಟಿದ್ದಾರೆ. ಬಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ನಾವು ಅದಕ್ಕೆ ಹೊಸ ರೂಪ ನೀಡುವ ಪ್ರಯತ್ನ ಮಾಡುತ್ತಿದ್ದೇವೆ. ಈಗಿರುವ ಬೆಂಗಳೂರಿನಲ್ಲಿ ಯಾವ ರೀತಿಯ ಬದಲಾವಣೆ ಮಾಡಬಹುದು, ಮುಂದೆ ಬೆಳೆಯಲಿರುವ ಬೆಂಗಳೂರನ್ನು ಹೇಗೆ ರೂಪಿಸಬೇಕು, ಹೊಸ ಸ್ಯಾಟಲೈಟ್ ಟೌನ್ ಹೇಗೆ ರೂಪಿಸಬೇಕು ಎಂಬುದರ ಬಗ್ಗೆ ಸಲಹೆ ನೀಡಲು ಈ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ: ಶತ್ರುವಿನ ಶತ್ರು ಮಿತ್ರ ಅಂತ ಹೊಂದಾಣಿಕೆ ಮಾಡಿಕೊಳ್ಳಲು ಸಿಂಗಾಪುರಕ್ಕೆ ತೆರಳಿದ್ದಾರೆ : ಡಿಸಿಎಂ
ಈ ಸಂಸ್ಥೆ ಕೇಂದ್ರ ಕಚೇರಿ ಕೆನಡಾದಲ್ಲಿದ್ದು, ವಿಶ್ವದ ಅತ್ಯುತ್ತಮ ಆರ್ಕಿಟೆಕ್ಚರ್ ಗಳನ್ನು ಹೊಂದಿದೆ. ಈ ಸಂಸ್ಥೆ ಅನೇಕ ದೇಶಗಳ ಜತೆ ಕೆಲಸ ಮಾಡಿದೆ. ಮುಂದಿನ ದಿನಗಳಲ್ಲಿ ಸುಮಾರು 200-300 ಇಂಜಿನಿಯರ್ ಗಳು ಕೆಲಸ ಮಾಡಲಿದ್ದಾರೆ. ಇಲ್ಲಿ ಅವರು ಯಾವುದೇ ಕಟ್ಟಣ ನಿರ್ಮಾಣ ಮಾಡುವುದಿಲ್ಲ. ಇವರು ಬೆಂಗಳೂರಿಗೆ ಹೊಸ ರೂಪ ನೀಡಲು ಸಲಹೆ ನೀಡುತ್ತಾರೆ. ಇವರು ಈಗ ಯಾವ ರೀತಿ ಸಲಹೆ ನೀಡುತ್ತಾರೆ ಎಂಬುದನ್ನು ನೋಡಿಕೊಂಡು ನಂತರದ ದಿನಗಳಲ್ಲಿ ಜಿಲ್ಲಾ ಕೇಂದ್ರಗಳು ಹಾಗೂ ತಾಲೂಕು ಕೇಂದ್ರಗಳಿಗೆ ರೂಪ ನೀಡುವ ಬಗ್ಗೆ ಆಲೋಚಿಸುತ್ತೇವೆ. ಬೆಂಗಳೂರಿಗೆ ಹೊಸ ರೂಪ ನೀಡಲು ನಾವು ಪ್ರಯತ್ನ ಮಾಡುತ್ತಿದ್ದು, ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.