ಕೇಂದ್ರದ ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಬಡವರಿಗೆ ʼಗೃಹಲಕ್ಷ್ಮೀʼ ರಕ್ಷಣೆ
ಗೃಹಲಕ್ಷ್ಮೀ ಯೋಜನೆ ಮೂಲಕ ಮಹಿಳೆಯರಿಗೆ ಆರ್ಥಿಕ ಸಹಾಯ ಹಲವು ಬಡವರ ಕುಟುಂಬ ನಿರ್ವಹಣೆಗೆ ಅನುಕೂಲವಾಗಲಿದೆ. ದೇಶದಲ್ಲಿಯೇ ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಅತಿ ದೊಡ್ಡ ಆರ್ಥಿಕ ಭದ್ರತೆ ಯೋಜನೆ ಇದಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರು : ಕುಟುಂಬದ ಕಣ್ಣು, ಮನೆಯೊಡತಿಗೆ ಮಾಸಿಕ ಎರಡು ಸಾವಿರ ನೀಡುವ ಗೃಹಲಕ್ಷ್ಮೀ ಯೋಜನೆ ರಾಜ್ಯದ ಬಡವನ ಮನೆಗೆ ಲಕ್ಚ್ಮೀ ಕಾಲಿಟ್ಟಂತಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮೈಸೂರಿನಲ್ಲಿ ಇಂದು ಗೃಹಲಕ್ಷ್ಮೀ ಯೋಜನೆಗೆ ವಿದ್ಯುಕ್ತ ಚಾಲನೆ ದೊರೆತ ಸಂದರ್ಭದಲ್ಲಿಯೇ ಬೆಂಗಳೂರಿನ ಪ್ರತಿ ವಾರ್ಡ್ ಗಳಲ್ಲೂ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗಾಂಧಿನಗರ ಕ್ಷೇತ್ರದ ಆರ್. ಗುಂಡೂರಾವ್ ಭವನದಲ್ಲಿ ಸಾವಿರಾರು ಫಲಾನುಭವಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗೃಹಲಕ್ಷ್ಮೀ ಯೋಜನೆಯ ಮಂಜೂರಾತಿ ಪತ್ರ ವಿತರಿಸಿದರು.
ಇದನ್ನೂ ಓದಿ: 26 ವರ್ಷಗಳ ಬಳಿಕ ರಾಜಧಾನಿಯಲ್ಲಿ ರಸ್ತೆಗಳಲ್ಲಿ ಡಬಲ್ ಡೆಕ್ಕರ್ ಬಸ್ ವೈಭವ- ವರ್ಷಾಂತ್ಯಕ್ಕೆ ಬಸ್ ಗಳ ಸಂಚಾರ
ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್, ಗೃಹಲಕ್ಷ್ಮೀ ಯೋಜನೆಯ ಅಡಿ ಮನೆಯೊಡತಿಗೆ ಮಾಸಿಕ 2 ಸಾವಿರ ವಿತರಿಸುವ ಕಾರ್ಯಕ್ರಮ ಇಂದಿನಿಂದ ಆರಂಭವಾಗಿದೆ. ಯೋಜನೆ ಘೋಷಿಸಿದಾಗ ವಿಪಕ್ಷಗಳು ಟೀಕಿಸಿದ್ದವು. ಇದನ್ನ ಹೇಗೆ ಕೊಡ್ತಾರಾ.? ಕೊಡಲು ಸಾಧ್ಯವೇ ಇಲ್ಲ, ಸರ್ಕಾರ ಜನರ ದಾರಿತಪ್ಪಿಸುತ್ತಿದೆ ಎಂದು ಆರೋಪ ಮಾಡುತ್ತಿದ್ದರು.
ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಯೋಜನೆಯನ್ನ ಜಾರಿಗೊಳಿಸಿದೆ. ಈಗ ವಿಪಕ್ಷದವರಿಗೆ ಏನು ಹೇಳಬೇಕೋ ಗೊತ್ತಾಗ್ತಿಲ್ಲ. ಏನೇನೋ ಮಾತಾಡ್ತಿದ್ದಾರೆ. ಈ ಯೋಜನೆಗೆ ಇಷ್ಟೊಂದು ಹಣ ಏಕೆ ಖರ್ಚು ಮಾಡಬೇಕು ಎಂದು ಪ್ರಶ್ನೆ ಮಾಡ್ತಿದ್ದಾರೆ. ವಿಪಕ್ಷಗಳು ಅರ್ಥಪೂರ್ಣ ಟೀಕೆ ಮಾಡಬೇಕು. ಮನೆಯಜಮಾನಿಗೆ 2 ಸಾವಿರ ಹಣ ನೀಡಿದರೆ ಅದನ್ನ ವೆಚ್ಚ ಎಂಬ ದೃಷ್ಟಿಕೋನದಿಂದ ನೋಡುವ ಬದಲು, ಗ್ರಾಮೀಣ ಪ್ರದೇಶದ ಬಡವರ ಆರ್ಥಿಕ ಸ್ಥಿತಿ ಸುಧಾರಣೆಯಾಗುವ ದೃಷ್ಟಿಕೋನದಲ್ಲಿ ನೋಡಬೇಕು. ಬಡವರ ಕುಟುಂಬಗಳು ನಿಟ್ಟುಸಿರು ಬಿಡಲು ಈ ಯೋಜನೆ ಸಹಾಯವಾಗಲಿದೆ. ಇದರಿಂದ ಗ್ರಾಮೀಣ ಪ್ರದೇಶದ ಆರ್ಥಿಕತೆ ಸದೃಢಗೊಳ್ಳಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ದರ ಇಳಿಕೆ : ಜಿಲ್ಲಾವಾರು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!
ಗೃಹಲಕ್ಷ್ಮೀ ಯೋಜನೆ ಮೂಲಕ ಮಹಿಳೆಯರಿಗೆ ಆರ್ಥಿಕ ಸಹಾಯ ಹಲವು ಬಡವರ ಕುಟುಂಬ ನಿರ್ವಹಣೆಗೆ ಅನುಕೂಲವಾಗಲಿದೆ. ದೇಶದಲ್ಲಿಯೇ ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಅತಿ ದೊಡ್ಡ ಆರ್ಥಿಕ ಭದ್ರತೆ ಯೋಜನೆ ಇದಾಗಿದೆ ಎಂದರೆ ತಪ್ಪಾಗಲಾರದು. ಪ್ರತಿ ತಿಂಗಳು ಸಿಗುವ ಎರಡು ಸಾವಿರದಿಂದ ಮನೆ ಯಜಮಾನಿ ಕುಟುಂಬದ ನಿರ್ವಹಣಾ ಸಮಸ್ಯೆಗಳನ್ನ ಬಗೆಹರಿಸಿಕೊಳ್ಳಬಹುದು. ಕೇಂದ್ರ ಸರ್ಕಾರದ ಬೆಲೆ ಏರಿಕೆ ಬಿಸಿಯಿಂದ ಒಂದು ರೀತಿಯಲ್ಲಿ ಗೃಹಲಕ್ಷ್ಮೀ ಯೋಜನೆ ಬಡವರನ್ನ ರಕ್ಷಿಸಲಿದೆ ಎಂದು ಇದೇ ವೇಳೆ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.