Bengaluru News: ಬೆಂಗಳೂರು ನಗರದ ವಸತಿ ಪ್ರದೇಶಗಳಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ  ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ  ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಈ ಬಾರಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಆಹಾರ ಹುಡುಕಿಕೊಂಡು ವನ್ಯ ಮೃಗಗಳು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. 


ಈ ಹಿನ್ನಲೆಯಲ್ಲಿ ಕ್ರಮ ಕೈಗೊಂಡಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕೂಡಲೇ ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಿ, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚನೆ ನೀಡಿದ್ದಾರೆ.


ಇದನ್ನೂ ಓದಿ- ಅರಣ್ಯ ಇಲಾಖೆ ಗುಂಡೇಟಿಗೆ ಕಳ್ಳಬೇಟೆಗೆ ತೆರಳಿದ್ದ ವ್ಯಕ್ತಿ ಬಲಿ!


ಈಗಾಗಲೇ ಹಾಲಿ ಇದ್ದ 5  ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ  ರಚಿಸಲಾಗಿದೆ. 


ಅದೇ ರೀತಿ ಹೆಚ್ಚು ಕಾಡಿರುವ ಮತ್ತು ಚಿರತೆಗಳು, ಕರಡಿಗಳು ಇರುವ ಬೆಟ್ಟಗುಡ್ಡದ ಪ್ರದೇಶದಲ್ಲಿ ಕನಿಷ್ಠ 3 ಜಿಲ್ಲೆಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ, ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ಸೂಚಿಸಿದ್ದಾರೆ.


ಇದನ್ನೂ ಓದಿ- ರಾಜ್ಯದ ರೈತರು ಬರ ಪೀಡಿತರಾಗಿದ್ದಾರೆ, ಯಾರೂ ಕಳಕಳಿ ತೋರಿಸುತ್ತಿಲ್ಲ


ಚಿರತೆ ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸುವಂತೆ ಮತ್ತು ಅಣಕು ಕಾರ್ಯಾಚರಣೆಗಳನ್ನೂ ನಡೆಸಿ ಸಿಬ್ಬಂದಿಯನ್ನು ಸಜ್ಜುಗೊಳಿಸುವಂತೆ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.