ಸಂಸದ ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಸಂಸದ ಪ್ರತಾಪ್ ಸಿಂಹ ಅವರು  ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಬೇಕು. ಯಾರು ಎಂದು ಅವರಿಗೆ ಗೊತ್ತಿರಬೇಕಲ್ಲ ಮಾಹಿತಿ ಇದ್ದರೆ ಹೇಳಲಿ ಎಂದರು. 

Written by - Yashaswini V | Last Updated : Jun 14, 2023, 01:08 PM IST
  • ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ.
  • ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎನ್ನುತ್ತಾರೆ.
  • ಅವರು ಬೆಂಗಳೂರು ರಸ್ತೆಗೆ ಸಂಸದರೇ- ಮುಖ್ಯಮಂತ್ರಿ ಸಿದ್ದರಾಮಯ್ಯ
ಸಂಸದ ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ:  ಮುಖ್ಯಮಂತ್ರಿ ಸಿದ್ದರಾಮಯ್ಯ title=

ಬೆಂಗಳೂರು: ಬಾಯಿಗೆ ಬಂದಂತೆ ಮಾತನಾಡುವ ಸಂಸದ ಪ್ರತಾಪ್ ಸಿಂಹ  ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 
 
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎನ್ನುತ್ತಾರೆ. ಅವರು ಬೆಂಗಳೂರು ರಸ್ತೆಗೆ ಸಂಸದರೇ ಎಂದು ಪ್ರಶ್ನಿಸಿದರು. ನನ್ನ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದವರೊಂದಿಗೆ ಮಾತೂ ಆಡುವುದಿಲ್ಲ ಅಧಿಕಾರದಲ್ಲಿದ್ದಾಗ ಅವರ ಮನೆಗೂ ಹೋಗುವುದಿಲ್ಲ. ಅವರು ಬಂದರೆ ಸೌಜನ್ಯಕ್ಕಾಗಿ ಮಾತನಾಡುತ್ತೇನೆ ಆದರೆ ರಾಜಕೀಯ ಮಾತನಾಡುವುದಿಲ್ಲ ಎಂದರು.

ಇದನ್ನೂ ಓದಿ- ರಾಜ್ಯದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್ ಹವಾ! ಇನ್ಮುಂದೆ ಇಲ್ಲಿ ನಾನ್‌ವೆಜ್‌ ಕೂಡಾ ಸಿಗುತ್ತಾ?

ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಸಂಸದ ಪ್ರತಾಪ್ ಸಿಂಹ ಅವರು  ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಬೇಕು. ಯಾರು ಎಂದು ಅವರಿಗೆ ಗೊತ್ತಿರಬೇಕಲ್ಲ ಮಾಹಿತಿ ಇದ್ದರೆ ಹೇಳಲಿ ಎಂದರು. 

ಈ ಕುರಿತಂತೆ ರಾಜ್ಯಪಾಲರಿಗೆ ದೂರು ಕೊಡುವುದಾದರೆ ಕೊಡಲಿ ಎಂದ ಮುಖ್ಯಮಂತ್ರಿಗಳು ಪೇ ಸಿಎಂ ಕುರಿತು ತನಿಖೆ ಮಾಡಿಸಲು ಹೇಳಿರಲಿಲ್ಲ. ತನಿಖೆಯನ್ನು ಯಾವಾಗ , ಯಾರಿಂದ ಎಷ್ಟು ಹೊತ್ತಿಗೆ ಮಾಡಿಸಬೇಕು ಎನ್ನುವುದು ನಮಗೆ ಸೇರಿದ್ದು ಎಂದು ಹೇಳುವ ಮೂಲಕ ವಿರೋಧಿಗಳಿಗೆ ತಿರುಗೇಟು ನೀಡಿದರು. 

ಇದನ್ನೂ ಓದಿ- ಗ್ಯಾರಂಟಿ ಯೋಜನೆಗೆ ಕಾದಿದ್ದ ಜನರಿಗೆ ಶಾಕ್

ಅಧಿಕೃತ ಸಭೆಯಲ್ಲ:  
ಇದೇ ಸಂದರ್ಭದಲ್ಲಿ ನಿನ್ನೆ ನಡೆದ ಬಿಬಿಎಂಪಿ ಸಭೆಯಲ್ಲಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲ ಅವರು ಭಾಗಿಯಾಗಿರುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅದು ಅಧಿಕೃತ ಸಭೆಯಲ್ಲ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಕರೆದಿದ್ದ ಸಭೆಯಲ್ಲಿ ಪ್ರಾಸಂಗಿಕವಾಗಿ  ಬಿಬಿಎಂಪಿ ಚುನಾವಣೆ ಬಗ್ಗೆಯೂ ಮಾತನಾಡಿದ್ದಾರೆ. ಹೆಬ್ಬಾಳ ಫ್ಲೈ ಓವರ್ ನೋಡಲು ಹೋಗುತ್ರಿದ್ದ  ಸಂದರ್ಭದಲ್ಲಿ ಕುಳಿತಿದ್ದಾರೆ.  ಉಪಮುಖ್ಯಮಂತ್ರಿಗಳು  ಶಾಸಕರನ್ನು ಭೇಟಿ ಮಾಡಿದ್ದು, ಕಾನೂನು ಅಭಿಪ್ರಾಯ ಪಡೆಯಲು ನಡೆದ ಸಭೆಯಲ್ಲಿ  ಪಾಲ್ಗೊಂಡಿದ್ದರು ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News