ಬೆಂಗಳೂರು : ನಗರದಲ್ಲಿ ಬಾಕಿಯಿರುವ ಬೃಹತ್ ನೀರುಗಾಲುವೆಗಳ ಒತ್ತುವರಿಗಳ ತೆರವು ಕಾರ್ಯಚರಣೆಯನ್ನು ತ್ವರಿತಗತಿಯಲ್ಲಿ ನಡೆಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಚರಣೆಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆಯ ಎಂಟೂ ವಲಯಗಳಲ್ಲಿ ಬಾಕಿಯಿರುವ ಒತ್ತುವರಿಗಳನ್ನು ತ್ವರಿತಗತಿಯಲ್ಲಿ ತೆರವುಮಾಡಿ ಮಳೆ ನೀರುಗಾಲುವೆಗಳನ್ನು ನಿರ್ಮಿಸಿ ಎಲ್ಲಿಯೂ ಜಲಾವೃತವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಆದೇಶಿಸಿದರು.
ಇದನ್ನೂ ಓದಿ: ಮೈತ್ರಿಕೂಟದ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರ ಬಳಕೆ ಆರೋಪ
ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಯ ಒತ್ತುವರಿಗಳ ಪೈಕಿ 123 ಪ್ರಕರಣಗಳು ನ್ಯಾಯಾಲಯದಲ್ಲಿದ್ದು, ಅವುಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿಕೊಂಡು ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೃಹತ್ ನೀರುಗಾಲುವೆ ಒತ್ತುವರಿಗಳ ವಿವರ: ಬಿಬಿಎಂಪಿ ವ್ಯಾಪ್ತಿಯಲ್ಲಿ 2015-16 ರಿಂದ ಇದುವರೆಗೆ ಒಟ್ಟಾರೆ 2951 ಒತ್ತುವರಿಗಳನ್ನು ಗುರುತಿಸಲಾಗಿದೆ. ಈ ಪೈಕಿ 2183 ಒತ್ತುವರಿಗಳನ್ನು ಈಗಾಗಲೇ ತೆರವುಗೊಳಿಸಲಾಗಿದ್ದು, 768 ಒತ್ತುವರಿಗಳನ್ನು ಮಾತ್ರ ತೆರವುಗೊಳಿಸಬೇಕಿದೆ. ಇದರಲ್ಲಿ 123 ಪ್ರಕರಣಗಳು ನ್ಯಾಯಾಲಯಕ್ಕೆ ಸಂಬಂಧಿಸಿದ್ದಾಗಿದ್ದು, 568 ಒತ್ತುವರಿಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಭೂಮಾಪಕರಿಂದ ಮಾರ್ಕಿಂಗ್ ಪ್ರಕ್ರಿಯೆ ನಡೆಸಿದ್ದು, ತಹಶೀಲ್ದಾರರಿಮದ ನೋಟಿಸ್ ನೀಡಲಾಗುತ್ತಿದೆ. ಹಂತ-ಹಂತವಾಗಿ ತ್ವರಿತಗತಿಯಲ್ಲಿ ಎಲ್ಲಾ ಅನಧಿಕೃತ ಒತ್ತುವರಿಗಳ ತೆರವು ಕಾರ್ಯಚರಣೆ ಕಾರ್ಯ ನಡೆಯಲಿದೆ.
ಇದನ್ನೂ ಓದಿ: ಶಿಷ್ಟಾಚಾರ ಆಗ, ಈಗ, ಯಾವಾಗಲೂ ಒಂದೇ : ಪ್ರತಿಪಕ್ಷಗಳ ನಡೆಗೆ ಡಿಸಿಎಂ ಡಿಕೆಶಿ ಆಕ್ರೋಶ
ಸಭೆಯಲ್ಲಿ ವಲಯ ಆಯುಕ್ತರಾದ , ವಲಯ ಜಂಟಿ ಆಯುಕ್ತರು, ಪ್ರಧಾನ ಅಭಿತಂತರರು, ಕಾನೂನು ಕೋಶ ವಿಭಾಗ ಮುಖ್ಯಸ್ಥರು, ಎಲ್ಲಾ ವಲಯ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.