Bengaluru News: ಒಂದು ವಾರದೊಳಗೆ ಎಲ್ಲಾ ಆಪ್ಟಿಕಲ್ ಫೈಬರ್ ಕೇಬಲ್‌ಗಳು (OFC ಗಳು), ಡೇಟಾ ಕೇಬಲ್‌ಗಳು ಮತ್ತು ವಿದ್ಯುತ್ ಕಂಬಗಳ ಮೇಲೆ ಹಾಕಲಾದ ಡಿಶ್ ಕೇಬಲ್‌ಗಳನ್ನು ತೆರವುಗೊಳಿಸುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೂಚಿಸಿದೆ. 


COMMERCIAL BREAK
SCROLL TO CONTINUE READING

ಹೌದು, ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್ ಕೇಬಲ್‌ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಬೇಕು ಎಂದು ಇಂಟರ್‌ ನೆಟ್‌ ಸೇವಾ ಕಂಪನಿಗಳು, ಟಿವಿ ಕೇಬಲ್‌ ಆಪರೇಟರ್‌ ಗಳಿಗೆ ಬೆಸ್ಕಾಂ ಕಟ್ಟು ನಿಟ್ಟಿನ ಸೂಚನೆ ನೀಡಿದೆ.


ಇದನ್ನೂ ಓದಿ- ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಿಗಲಿವೆ ಸರ್ಕಾರದ ಈ ಸೇವೆಗಳು..!


ಗಮನಾರ್ಹವಾಗಿ, ನೇತಾಡುತ್ತಿರುವ ಒಎಫ್‌ಸಿಗಳಿಂದ ವಿದ್ಯುತ್ ಕಂಬಗಳು ಉರುಳಿ ಪಾದಚಾರಿಗಳು ಗಾಯಗೊಂಡಿರುವ ಎರಡು ಘಟನೆಗಳ ಹಿನ್ನೆಲೆಯಲ್ಲಿ ಬೆಸ್ಕಾಂ ಈ ನಿರ್ಧಾರ ಕೈಗೊಂಡಿದೆ. ಆಗಸ್ಟ್ 22 ರಂದು ಕೋರಮಂಗಲ ಸಮೀಪದ ಸದ್ದುಗುಂಟೆಪಾಳ್ಯದಲ್ಲಿ ವಿದ್ಯುತ್ ಕಂಬ ಕುಸಿದು ಬಿದ್ದ ಪರಿಣಾಮ 21 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದು, ಶೇ.35ರಷ್ಟು ಸುಟ್ಟ ಗಾಯಗಳಾಗಿವೆ. ಆಗಸ್ಟ್ 19 ರಂದು ಬೆಳ್ಳಂದೂರು ಸಮೀಪದ ದೇವರಬೀಸನಹಳ್ಳಿಯಲ್ಲಿ 23 ವರ್ಷದ ಪಾದಚಾರಿ ಮೇಲೆ ಮತ್ತೊಂದು ಕಂಬ ಬಿದ್ದಿತ್ತು.


"ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ, ಅನಧಿಕೃತ ಒಎಫ್‌ಸಿಗಳು, ಡಿಶ್ ಕೇಬಲ್‌ಗಳು ಮತ್ತು ವಿದ್ಯುತ್ ಕಂಬಗಳ ಮೇಲೆ ಹಾಕಲಾದ ಇಂಟರ್ನೆಟ್ ಡೇಟಾ ಕೇಬಲ್‌ಗಳಿಂದಾಗಿ ವಿದ್ಯುತ್ ಕಂಬಗಳು ಬಿದ್ದು ಪಾದಚಾರಿಗಳು ಗಾಯಗೊಂಡಿದ್ದಾರೆ. ಈ ಘಟನೆಗಳ ನಂತರ, ಬೆಸ್ಕಾಂ ಒಂದು ವಾರದೊಳಗೆ ಎಲ್ಲಾ ಅನಧಿಕೃತ ಕೇಬಲ್‌ಗಳನ್ನು ತೆಗೆದುಹಾಕಲು ನಿರ್ಧರಿಸಿದೆ" ಎಂದು ಬೆಸ್ಕಾಂ ತಿಳಿಸಿದೆ. 


ಇದನ್ನೂ ಓದಿ- ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡಿದರೆ ಜನಾಂದೋಲನವಾಗಲಿದೆ: ಬಸವರಾಜ ಬೊಮ್ಮಾಯಿ


ಬೆಸ್ಕಾಂ ವಿದ್ಯುತ್‌ ಕಂಬಗಳಲ್ಲಿ ಹಾಕಿರುವ ಓಎಫ್‌ಸಿ, ಇಂಟರ್‌ ನೆಟ್‌ ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಬೇಕು ಎಂದು ಕಟ್ಟುನಿಟ್ಟಿನ ಆದೇಶ ನೀಡಿರುವ ಬೆಸ್ಕಾಂ, ಒಂದೊಮ್ಮೆ ಸಂಬಂಧಪಟ್ಟ ಇಂಟರ್‌ ನೆಟ್‌ ಕಂಪನಿಗಳು ಹಾಗೂ ಡಿಶ್‌ ಕೇಬಲ್‌ ಅಪರೇಟರ್‌ ಗಳು ಈ ಬಗ್ಗೆ ನಿಗದಿತ ಗಡುವಿನೊಳಗೆ ಸೂಕ್ತ ಕ್ರಮ ಜರುಗಿಸಲಿದ್ದಲ್ಲಿ ಬೆಸ್ಕಾಂ ಅವುಗಳನ್ನು ತೆರವುಗೊಳಿಸಿ, ತಪ್ಪಿತಸ್ಥರ  ವಿರುದ್ಧ ಕ್ರಮಕೈಗೊಳ್ಳಲಿದೆ ಎಂದು ಬೆಸ್ಕಾಂ ಎಚ್ಚರಿಕೆ ನೀಡಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.