ಕಾಲೇಜು ವಿದ್ಯಾರ್ಥಿನಿ ಮೇಲೆ ಬಿದ್ದ ವಿದ್ಯುತ್ ತಂತಿ: ಯುವತಿಗೆ ಗಂಭೀರ ಗಾಯ

ವಿದ್ಯಾರ್ಥಿನಿ ಪ್ರಿಯಾ ಘಟನೆಯಲ್ಲಿ ಗಾಯಗೊಂಡಿದ್ದು, ಸಮೀಪದ‌ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.‌ ಮುಖ ಸೇರಿ ದೇಹದ ಇನ್ನಿತರ ಭಾಗಗಳಲ್ಲಿ‌ ವಿದ್ಯುತ್ ಹರಿದ ಹಿನ್ನೆಲೆ ಶೇ.40ರಷ್ಟು ಸುಟ್ಟ ಗಾಯವಾಗಿದೆ. 

Written by - Krishna N K | Last Updated : Aug 22, 2023, 06:20 PM IST
  • ಕಾಲೇಜು ವಿದ್ಯಾರ್ಥಿನಿ ಮೇಲೆ ಬಿದ್ದ ವಿದ್ಯುತ್ ತಂತಿ.
  • ಘಟನೆಯಿಂದ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ.
  • ಸುದ್ದುಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಕಾಲೇಜು ವಿದ್ಯಾರ್ಥಿನಿ ಮೇಲೆ ಬಿದ್ದ ವಿದ್ಯುತ್ ತಂತಿ: ಯುವತಿಗೆ ಗಂಭೀರ ಗಾಯ title=

ಬೆಂಗಳೂರು : ಕಾಲೇಜು ವಿದ್ಯಾರ್ಥಿನಿ ಮೇಲೆ ವಿದ್ಯುತ್ ತಂತಿ ಬಿದ್ದು, ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುದ್ದುಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯಾಹ್ನ ನಡೆದಿದೆ. 

ನಗರದ ಕ್ರೈಸ್ಟ್ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾ ಘಟನೆಯಲ್ಲಿ ಗಾಯಗೊಂಡಿದ್ದು, ಸಮೀಪದ‌ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.‌ ಮುಖ ಸೇರಿ ದೇಹದ ಇನ್ನಿತರ ಭಾಗಗಳಲ್ಲಿ‌ ವಿದ್ಯುತ್ ಹರಿದ ಹಿನ್ನೆಲೆ ಶೇ.40ರಷ್ಟು ಸುಟ್ಟ ಗಾಯವಾಗಿದೆ. ಮಧ್ನಾಹ್ನ ಕ್ಯಾಂಟರ್ ವಾಹನದ ಚಕ್ರಕ್ಕೆ‌ ಕೇಬಲ್‌ ವೈರ್ ಸಿಲುಕಿದೆ. ಈ ವೇಳೆ ಲೈಟ್ ಕಂಬಕ್ಕೆ ಆ ವೈರ್ ಸುತ್ತಿಕೊಂಡಿದೆ.‌ ಕ್ಯಾಂಟರ್‌ ಚಾಲಕ ಇದನ್ನು ಗಮನಿಸದೇ ವಾಹನ ಚಲಾಯಿಸಿದ್ದರಿಂದ ವಿದ್ಯುತ್ ಕಂಬ ನೆಲಕ್ಕುರುಳಿದೆ.

ಇದನ್ನೂ ಓದಿ: ಪ್ಲಾಟ್ ಖರೀದಿ ಪತ್ರ ಮಾಡಿಕೊಡದ ಬಿಲ್ಡ್‍ರ್ಸ್ ಗೆ ದಂಡ ವಿಧಿಸಿದ ಗ್ರಾಹಕರ ಆಯೋಗ 

ಈ ವೇಳೆ‌‌ ಅದೇ ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಬಿದ್ದಿದೆ. ಹೀಗಾಗಿ ಪ್ರಥಮ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿದ್ಯಾರ್ಥಿನಿಯನ್ನು ಸಾಗರ್ ಆಸ್ಪತ್ರೆಯಿಂದ ಸೆಂಟ್ ಜಾನ್ಸ್ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಘಟನೆ ಬಳಿಕ ಬೆಸ್ಕಾಂ ಸಿಬ್ಬಂದಿ ಆಗಮಿಸಿ ಕುಸಿದು ಬಿದ್ದ ಕಂಬವನ್ನು ತೆರವುಗೊಳಿಸಿದ್ದಾರೆ. 

ಇನ್ನು ವೈರ್ ಎಳೆದು ಬೀಳುವಷ್ಟರ ಮಟ್ಟಿಗೆ ವಿದ್ಯುತ್‌ ಕಂಬ ಶಿಥಿಲಗೊಂಡಿದೆ ಎಂದರೆ ಬೆಸ್ಕಾಂ ಎಷ್ಟರ ಮಟ್ಟಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ .ಈ ಸಂಬಂಧ ಸುದ್ದುಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News