ರಾಜಧಾನಿಯಲ್ಲಿ ವಿಶ್ವ ಕುಂದಾಪುರ ಕನ್ನಡ ‌ಹಬ್ಬ : ಸಿಎಂ ಸೇರಿ ನಟರು ಭಾಗಿ

ಐದನೇ ಬಾರಿಗೆ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡ ಹಬ್ಬ ಆಯೋಜನೆ ಮಾಡಲಾಗಿದ್ದು, ಇದೇ ಜುಲೈ 23ರ ಭಾನುವಾರದಂದು ಅತ್ತಿಗುಪ್ಪೆಯಲ್ಲಿರುವ ಬಂಟರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. 

Written by - Krishna N K | Last Updated : Jul 21, 2023, 10:04 PM IST
  • ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡ ಹಬ್ಬ ಆಯೋಜನೆ.
  • ಇದೇ ಜುಲೈ 23ರ ಭಾನುವಾರದಂದು ಅತ್ತಿಗುಪ್ಪೆಯಲ್ಲಿರುವ ಬಂಟರ ಭವನದಲ್ಲಿ ಕಾರ್ಯಕ್ರಮ.
  • ಸಿಎಂ ಸಿದ್ದರಾಮಯ್ಯ, ನಟ- ನಿರ್ದೇಶಕ ರಿಷಬ್ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗಿ.
 ರಾಜಧಾನಿಯಲ್ಲಿ ವಿಶ್ವ ಕುಂದಾಪುರ ಕನ್ನಡ ‌ಹಬ್ಬ : ಸಿಎಂ ಸೇರಿ ನಟರು ಭಾಗಿ title=

ಬೆಂಗಳೂರು : ರಾಜಧಾನಿಯಲ್ಲಿ ಕುಂದಾಪುರ ಕನ್ನಡ ಹಬ್ಬ ಜುಲೈ 23ರ ಭಾನುವಾರ ‌ಆಯೋಜನೆಗೊಂಡಿದೆ ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರಿನ ಅಧ್ಯಕ್ಷ ‌ದೀಪಕ್ ಶೆಟ್ಟಿ ಹೇಳಿದ್ದಾರೆ. 

ಪ್ರೆಸಕ್ಲಬ್‌ನಲ್ಲಿ ಮಾತನಾಡಿದ ಅವರು, ಐದನೇ ಬಾರಿಗೆ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡ ಹಬ್ಬ ಆಯೋಜನೆ ಆಗ್ತಿದೆ. ಅತ್ತಿಗುಪ್ಪೆಯಲ್ಲಿರುವ ಬಂಟರ ಭವನದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ. ಸರಿಯಾಗಿ 9 ಗಂಟೆಗೆ ಉದ್ಘಾಟನೆ ಕಾರ್ಯಕ್ರಮ ‌ನಡೆಯಲಿದ್ದು ಶಾಸಕ ಕಿರಣ್‌ ಕೊಡ್ಗಿ, ಗುರುರಾಜ್ ಗಂಟಿಹೊಳೆ ಉಪಸ್ಥಿತರಿಲಿದ್ದಾರೆ ಎಂದರು.

ಇದನ್ನೂ ಓದಿ: ನಂದಿನಿ ಹಾಲಿನ ದರ ಲೀಟರ್‌ಗೆ 3 ರೂ. ಏರಿಕೆ

ಅಲ್ಲದೆ, ಸಂಜೆ 5 ಗಂಟೆಯ ಸಮಾರೋಪ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ನಟ- ನಿರ್ದೇಶಕ ರಿಷಬ್ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಯಕ್ಷಗಾನ, ಹಾಡು, ನೃತ್ಯ, ಮಾತಿನ ಚಾವಡಿ, ಖಾದ್ಯ ವೈವಿದ್ಯ, ನಾಟಕ ಕಾರ್ಯಕ್ರಮಗಳು ಇರಲಿದೆ ಎಂದಿದ್ದಾರೆ. ಹಾಗೇ ಕುಂದಾಪ್ರ ಕನ್ನಡ ಹಬ್ಬವು ಹಲವು ಸಾಂಸ್ಕೃತಿಕ ಸಡಗರಗಳಿಗೆ ವೇದಿಕೆಯಾಗಿದೆ.

 

ಟೀಮ್ ಕುಂದಾಪುರಿಯನ್ಸ್ ತಂಡದಿಂದ ಮಿಂಚುಳ- ಇದ್ ಕತ್ಲಿ-ಬೆಳಗಿನ ಕಥಿ ಎಂಬ ವಿಶೇಷ ನಾಟಕ‌ವನ್ನು ನೆರೆದವರಿಗೆ ಕುಂದಾಪ್ರ ಕನ್ನಡ ಭಾಷೆಯ ಸೊಬಗನ್ನು ಮತ್ತು ಕನಸ್ಸಿನ ಕುಂದಾಪುರ ‌ಕುರಿತಾಗಿ ಪ್ರದರ್ಶಿಸಲಿದ್ದಾರೆ. ಕರಾವಳಿಯ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಲಾಗಿದ್ದು ವಯಸ್ಕರರಿಗಾಗಿ ಹಗ್ಗ ಜಗ್ಗಾಟ, ದಂಪತಿಗಳಿಗಾಗಿ ಪ್ರತ್ಯೇಕ ಕ್ರೀಡೆಗಳು, ಮಕ್ಕಳಿಗೆ ಹೂವಾಡಗಿತ್ತಿ, ಸೈಕಲ್ ಟೈರ್ ಓಟ, ಹಣೆಬೊಂಡ ಓಟ, ಗಿರ್ಗಿಟ್ಲೆ ಓಟ, ಚಿತ್ರಕಲೆ, ಮಹಿಳೆಯರಿಗೆ ಹಲಸಿನ ಕೊಟ್ಟೆ ಕಟ್ಟುವುದು ಇನ್ನಿತರ ಸ್ಪರ್ಧೆಗಳು ಹಬ್ಬದ ಬಯಲಿನ ಕಲರವವನ್ನು ಇಮ್ಮಡಿಸಲಿದೆ. 

ಇದನ್ನೂ ಓದಿ:ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್: ಕಾಂಗ್ರೆಸ್ ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಕಿಡಿ

ಕುಂದಾಪುರದ ನುರಿತ ಬಾಣಸಿಗರು ಸ್ಥಳದಲ್ಲೇ ತಯಾರಿಸುವ  ಹಾಲುಬಾಯಿ, ಕೊಟ್ಟೆ ಕಡುಬು, ಗೋಲಿಬಜೆ, ಬನ್ಸ್,  ಸುಕ್ಕಿನ್ ಉಂಡೆ, ಎಳ್ ಬಾಯ್ರ್, ಹೆಸ್ರು ಬಾಯ್ರ್ ನಂತಹ ವಿವಿಧ ಪಾನಕಗಳು ವಿಶೇಷವಾಗಿದೆ.ಹಾಗೇ ಹಬ್ಬದ ವಿಶೇಷ ತರಕಾರಿ ಊಟ, ಇಡ್ಲಿ ಕುಂದಾಪ್ರ ಕೋಳಿ ಸುಕ್ಕ, ಬರಿಯಾನಿ, ಚಟ್ಲಿ ಸಾರು ಇನ್ನಿತರ  ಅಪರೂಪದ ಖಾದ್ಯಗಳು ಕುಂದಾಪ್ರ ಕನ್ನಡ ಹಬ್ಬಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಲು ವಿಶೇಷ  ಆಕರ್ಷಣೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕುಂದಾಪುರ ಕನ್ನಡ ಪ್ರತಿಷ್ಠಾನ ಪ್ರಮುಖರಾದ ಪ್ರಮೋದ್ ಚಂದ್ರ ಭಂಡಾರಿ,ನರಸಿಂಹ ಬೀಜಾಡಿ, ರಾಘವೇಂದ್ರ ಕಾಂಚನ್,ವಿಜಯ್ ಶೆಟ್ಟಿ,ಅಜಿತ್ ಶೆಟ್ಟಿ  ಉಳ್ತೂರ್ ಉಪಸ್ಥಿತರಿದ್ದರು.

ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News