Pan Aadhar Link : ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಜೂನ್ 30ರ ಗಡುವು ವಿಧಿಸಿತ್ತು. ಇದೀಗ ಲಿಂಕ್ ಮಾಡದವರ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ ಎಂದು ತಿಳಿದುಬಂದಿದೆ. ಹಲವು ವರ್ಷಗಳಿಂದ ಈ ಗಡುವನ್ನು ಹಲವು ಬಾರಿ ವಿಸ್ತರಿಸುತ್ತಾ ಬಂದಿರುವ ಆದಾಯ ತೆರಿಗೆ ಇಲಾಖೆ ಈ ಬಾರಿ ಅವಕಾಶ ನೀಡಿಲ್ಲ. ಕೇಂದ್ರದ ಘೋಷಣೆಯಂತೆ, ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಜುಲೈ 1 ರಿಂದ ನಿಷ್ಕ್ರಿಯಗೊಂಡಿವೆ. 


COMMERCIAL BREAK
SCROLL TO CONTINUE READING

ಪ್ಯಾನ್ ಕಾರ್ಡ್ ಕಡ್ಡಾಯ : ವ್ಯಕ್ತಿಯ ಆಸ್ತಿ, ಸಾಲ, ಹೂಡಿಕೆ ಮತ್ತು ವ್ಯಾಪಾರ ಚಟುವಟಿಕೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸಿದ್ದಾರೆಯೇ ಅಥವಾ ಇಲ್ಲವೇ? ಅಥವಾ ಯಾವುದೇ ತೆರಿಗೆ ವಂಚಿಸಲಾಗಿದೆಯೇ ಎಂಬುದನ್ನು ತಿಳಿಯಲು ಈ ಪ್ಯಾನ್ ಕಾರ್ಡ್ ಸಂಖ್ಯೆ ಉಪಯುಕ್ತವಾಗಿದೆ. 


ಆಧಾರ್ ಕಾರ್ಡ್ - ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಏನಾಗುತ್ತದೆ.? 


  • ಯಾವುದೇ ಬ್ಯಾಂಕ್ ನಲ್ಲಿ ಬ್ಯಾಂಕ್ ಖಾತೆ ತೆರೆಯಲು ಪ್ಯಾನ್ ಕಾರ್ಡ್ ಕಡ್ಡಾಯ ಎಂಬುದು ಗೊತ್ತೇ ಇದೆ. ಈ ಹಿನ್ನೆಲೆಯಲ್ಲಿ ನಿಷ್ಕ್ರಿಯವಾಗಿರುವ ಪ್ಯಾನ್ ಕಾರ್ಡ್ ಮೂಲಕ ಬ್ಯಾಂಕ್ ಖಾತೆ ತೆರೆಯಲು ಸಾಧ್ಯವಿಲ್ಲ. 

  • ನೀವು ಕ್ರೆಡಿಟ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದರೆ, ಅರ್ಜಿದಾರರ CIBIL ಸ್ಕೋರ್ ಅನ್ನು ಪ್ಯಾನ್ ಕಾರ್ಡ್ ಆಧಾರದ ಮೇಲೆ ಪರಿಶೀಲಿಸಲಾಗುತ್ತದೆ. ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಿದ್ದರೆ ನಿಮಗೆ ಕ್ರೆಡಿಕ್‌ ಕಾರ್ಡ್ ಸಿಗುವುದಿಲ್ಲ. ಡೆಬಿಟ್ ಕಾರ್ಡ್ ವಿತರಣೆಯ ಸಂದರ್ಭದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ.

  • ಸಾಲಕ್ಕಾಗಿ ಅರ್ಜಿ ಸಲ್ಲಿಸುವಾಗ ತಮ್ಮ ಪಾನ್ ಕಾರ್ಡ್‌ನ ಆಧಾರದ ಮೇಲೆ ತಮ್ಮ CIBIL ಸ್ಕೋರ್ ಅನ್ನು ಪರಿಶೀಲಿಸಲೇಬೇಕು ಮತ್ತು ಅದರ ಆಧಾರದ ಮೇಲೆ ಸಾಲವನ್ನು ನೀಡಲಾಗುತ್ತದೆ. ಪ್ಯಾನ್‌ ಕಾರ್ಡ್‌ ನಿಷ್ಕ್ರಿಯಗೊಂಡಿದ್ದರೆ ಸಾಲದ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ. 

  • ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಡಿಮ್ಯಾಟ್ ಖಾತೆ ಅತ್ಯಗತ್ಯ. ಪ್ಯಾನ್ ಕಾರ್ಡ್ ಇಲ್ಲದೆ ಡಿಮ್ಯಾಟ್ ಖಾತೆಯ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. ಏಕೆಂದರೆ ನಾವು ಮೊದಲೇ ಹೇಳಿದಂತೆ PAN ಕಾರ್ಡ್ ಹೂಡಿಕೆಗಳನ್ನು ಟ್ರ್ಯಾಕ್ ಮಾಡಲು ಸಹಾಯ ಮಾಡುತ್ತದೆ. ಪ್ಯಾನ್ ಕಾರ್ಡ್ ಇಲ್ಲದೆ ಹೂಡಿಕೆ ಸಾಧ್ಯವಿಲ್ಲ. 

  • ಬ್ಯಾಂಕ್‌ ಖಾತೆಯ ಮೂಲಕ ಕೆಲವು ಸಂದರ್ಭಗಳಲ್ಲಿ ರೂ 50,000 ಕ್ಕಿಂತ ಹೆಚ್ಚಿ ಹಣವನ್ನು ಪಾವತಿ ಮಾಡಬೇಕಾದರೆ ನಿಮ್ಮ ಪ್ಯಾನ್ ಕಾರ್ಡ್ ಕಡ್ಡಾಯವಾಗಿ ಬೇಕಿರುತ್ತದೆ. ಆ ಸಂದರ್ಭದಲ್ಲಿ, ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಿದ್ದರೆ, ಪಾವತಿ ಸಾಧ್ಯವಾಗುವುದಿಲ್ಲ. ಅದರಲ್ಲೂ ಬ್ಯಾಂಕಿಂಗ್ ವಲಯದಲ್ಲಿ ಈ ನಿಯಮ ಅನಾದಿ ಕಾಲದಿಂದಲೂ ಜಾರಿಯಲ್ಲಿದೆ.

  • ವಿದೇಶಕ್ಕೆ ಪ್ರಯಾಣಿಸುವಾಗ ಅಥವಾ ವಿದೇಶಿ ಕರೆನ್ಸಿಯನ್ನು ವಿನಿಮಯ ಮಾಡಿಕೊಳ್ಳಲು ಪ್ಯಾನ್ ಕಾರ್ಡ್ ಅತ್ಯಗತ್ಯವಾಗಿರುತ್ತದೆ. ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಲು ಪ್ಯಾನ್ ಕಾರ್ಡ್ ಕಡ್ಡಾಯವಾಗುತ್ತದೆ. ವಿಶೇಷವಾಗಿ ನಿಮ್ಮ ಹೂಡಿಕೆ ರೂ. 50 ಸಾವಿರ ದಾಟಿದರೆ ಪ್ಯಾನ್ ಕಾರ್ಡ್ ಅತ್ಯವಶ್ಯಕ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.