ಬೆಂಗಳೂರು : 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಬೆಸ್ಕಾಂ ಬಹಳ ಅರ್ಥಪೂರ್ಣವಾಗಿ ಶುಕ್ರವಾರ ಆಚರಿಸಿತು.
ಬೆಸ್ಕಾಂನ ನಿಗಮ ಕಛೇರಿ ಮತ್ತು ಎಲ್ಲಾ ವೃತ್ತ ಕಛೇರಿಗಳಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಏಕಕಾಲದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರು ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಬೆಸ್ಕಾಂ ನಿಗಮ ಕಛೇರಿಯಲ್ಲಿ ಬಹಳ ಅದ್ಧುರಿಯಾಗಿ ಆಚರಿಸಲಾಗುವುದು ಹಾಗೆಯೇ ಸಿಬ್ಬಂದಿ ಪ್ರತಿಭೆಯನ್ನು ಪ್ರೋತ್ಸಾಹಿಸಲು ವಿವಿಧ ಸ್ಫರ್ಧೆಗಳನ್ನು ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: Gandhada Gudi: ತಮ್ಮ ಊಟದ ತಟ್ಟೆ ತಾವೇ ತೊಳೆಯುತ್ತಿದ್ದ ಪುನೀತ್! ಇದು ʻರಾಜರತ್ನʼನ ಸರಳತೆ
ಕನ್ನಡದಲ್ಲೇ ವ್ಯವಹರಿಸುತ್ತೇವೆ, ಕನ್ನಡದಲ್ಲೇ ಮಾತನಾಡುತ್ತೆವೆ, ಮತ್ತು ಅನ್ಯ ಭಾಷಿಕ ಸ್ನೇಹಿತರಿಗೆ ಕನ್ನಡ ಕಲಿಸುತ್ತೆವೆ, ಎಂಬ ಪ್ರತಿಜ್ಞಾ ವಿಧಿಯನ್ನು ಬೆಸ್ಕಾಂನ ಸಿಬ್ಬಂದಿ ವರ್ಗಕ್ಕೆ ವ್ಯವಸ್ಥಾಪಕ ನಿರ್ದೇಶಕರು ಈ ಸಂದರ್ಭದಲ್ಲಿ ಬೋಧಿಸಿದರು ಬೆಸ್ಕಾಂ ಹಿರಿಯ ಅಧಿಕಾರಿಗಳು, ಕಿರಿಯ ಅಧಿಕಾರಿಗಳು, ಸಿಬ್ಬಂದಿ, ಲೈನ್ ಮೆನ್ ಗಳು , ಚಾಲಕರು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.