ವಿದ್ಯುತ್‌ ಕಂಬಗಳ ಮೇಲಿನ ಅನಧಿಕೃತ ಕೇಬಲ್‌ ಗಳ ತೆರವಿಗೆ ಒಂದು ವಾರದ ಗಡುವು ನೀಡಿದ ಬೆಸ್ಕಾಂ

ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್ ಕೇಬಲ್‌ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಲು  ಸಂಬಂಧಿಸಿದ ಇಂಟರ್‌ ನೆಟ್‌ ಸೇವಾ ಕಂಪನಿಗಳು, ಟಿವಿ ಕೇಬಲ್‌ ಆಪರೇಟರ್‌ ಗಳಿಗೆ ಬೆಸ್ಕಾಂ ಕಟ್ಟು ನಿಟ್ಟಿನ ಸೂಚನೆ ನೀಡಿದೆ.

Written by - Bhavya Sunil Bangera | Edited by - Manjunath N | Last Updated : Aug 24, 2023, 02:29 AM IST
  • ಬೆಸ್ಕಾಂ ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತವಾಗಿ ಓಎಫ್‌ಸಿ ಕೇಬಲ್‌ ಹಾಗೂ ಇನ್ನಿತರ ಕೇಬಲ್‌ ಗಳನ್ನು ಅಳವಡಿಸಿದ್ದ ಪರಿಣಾಮ ವಿದ್ಯುತ್‌ ಕಂಬ ಉರುಳಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪಾದಚಾರಿಗಳು ಗಾಯಗೊಂಡಿದ್ದು,
  • ಸುರಕ್ಷತೆ ದೃಷ್ಠಿಯಿಂದ ಬೆಸ್ಕಾಂ ಅನಧಿಕೃತ ಕೇಬಲ್‌ ಗಳನ್ನು ತೆರವುಗೊಳಿಸಲು ನಿರ್ಧರಿಸಿದೆ.
 ವಿದ್ಯುತ್‌ ಕಂಬಗಳ ಮೇಲಿನ ಅನಧಿಕೃತ ಕೇಬಲ್‌ ಗಳ ತೆರವಿಗೆ ಒಂದು ವಾರದ ಗಡುವು ನೀಡಿದ ಬೆಸ್ಕಾಂ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್ ಕೇಬಲ್‌ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಲು  ಸಂಬಂಧಿಸಿದ ಇಂಟರ್‌ ನೆಟ್‌ ಸೇವಾ ಕಂಪನಿಗಳು, ಟಿವಿ ಕೇಬಲ್‌ ಆಪರೇಟರ್‌ ಗಳಿಗೆ ಬೆಸ್ಕಾಂ ಕಟ್ಟು ನಿಟ್ಟಿನ ಸೂಚನೆ ನೀಡಿದೆ.

ಇದನ್ನೂ ಓದಿ: ಭಾರತೀಯ ವಾಯುಪಡೆ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ, ಇಂದೇ ಅರ್ಜಿ ಸಲ್ಲಿಸಿ

ಬೆಸ್ಕಾಂ ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತವಾಗಿ ಓಎಫ್‌ಸಿ ಕೇಬಲ್‌ ಹಾಗೂ ಇನ್ನಿತರ ಕೇಬಲ್‌ ಗಳನ್ನು ಅಳವಡಿಸಿದ್ದ ಪರಿಣಾಮ ವಿದ್ಯುತ್‌ ಕಂಬ ಉರುಳಿ ಎರಡು  ಪ್ರತ್ಯೇಕ ಪ್ರಕರಣಗಳಲ್ಲಿ ಪಾದಚಾರಿಗಳು ಗಾಯಗೊಂಡಿದ್ದು, ಸುರಕ್ಷತೆ ದೃಷ್ಠಿಯಿಂದ ಬೆಸ್ಕಾಂ ಅನಧಿಕೃತ ಕೇಬಲ್‌ ಗಳನ್ನು ತೆರವುಗೊಳಿಸಲು ನಿರ್ಧರಿಸಿದೆ.

ಇದನ್ನೂ ಓದಿ: "ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ"

ಬೆಸ್ಕಾಂ ವಿದ್ಯುತ್‌ ಕಂಬಗಳಲ್ಲಿ ಹಾಕಿರುವ ಓಎಫ್‌ಸಿ, ಇಂಟರ್‌ ನೆಟ್‌ ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಲು ಸಂಬಂಧಪಟ್ಟ ಇಂಟರ್‌ ನೆಟ್‌ ಕಂಪನಿಗಳು ಹಾಗೂ ಡಿಶ್‌ ಕೇಬಲ್‌ ಅಪರೇಟರ್‌ ಗಳು  ತಪ್ಪಿದ್ದಲ್ಲಿ,  ಬೆಸ್ಕಾಂ ಅವುಗಳನ್ನು ತೆರವುಗೊಳಿಸಿ, ತಪ್ಪಿತಸ್ಥರ  ವಿರುದ್ಧ ಕ್ರಮಕೈಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News